ಸರ್ಕಾರಿ ಆಸ್ಪತ್ರೆಗಳಲ್ಲಿ  ಪ್ರಾರಂಭವಾಗದ ಕ್ಯಾಂಟೀನ್‌


Team Udayavani, Feb 1, 2017, 3:45 AM IST

canteen.jpg

ಬೆಂಗಳೂರು: ರಿಯಾಯಿತಿ ದರದ ಉಪಹಾರ ಕೇಂದ್ರಗಳನ್ನು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆ ಗಳಲ್ಲಿ ಆರಂಭಿಸುವ ಯೋಜನೆ ಘೋಷಣೆಯಾಗಿ ತಿಂಗಳು ಕಳೆದರೂ ಜಾರಿಯಾಗಿಲ್ಲ. ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಬಡ ರೋಗಿಗಳು, ರೋಗಿಗಳ ಆರೈಕೆ ಮಾಡುವ ಸಂಬಂಧಿಕರು ಹಾಗೂ ಡಿ ಗ್ರೂಪ್‌ ನೌಕರರಿಗೆ ರಿಯಾಯಿತಿ ದರದಲ್ಲಿ
ಉಪಹಾರ ಮತ್ತು ಊಟ ಒದಗಿಸಲು 2017ರ ಜ.1ರಿಂದ ಉಪಹಾರ ಕೇಂದ್ರ ತೆರೆಯುವ ಬಗ್ಗೆ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಮಾಡಿದ್ದ ಘೋಷಣೆ ಅನುಷ್ಠಾನಕ್ಕೆ ಬಂದಿಲ್ಲ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಎಂಎಸ್‌ಐಎಲ್‌ ಸಹಯೋಗದೊಂದಿಗೆ ಯೋಜನೆ ಜಾರಿಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿತ್ತು. ಅದರಂತೆ, ಉಪಹಾರ ಕೇಂದ್ರ ಗಳಿಗೆ ಬೇಕಾಗುವ ಜಾಗ ಆರೋಗ್ಯ ಇಲಾಖೆ ಒದಗಿಸುವುದು. ಆಹಾರಧಾನ್ಯಗಳನ್ನು ರಿಯಾಯಿತಿ ದರದಲ್ಲಿ ಆಹಾರ ಇಲಾಖೆ ನೀಡುವುದು. ಉಪಹಾರ ಕೇಂದ್ರಕ್ಕೆ ಬೇಕಾಗುವ ಮೂಲ ಸೌಕರ್ಯಗಳನ್ನು ಎಂಎಸ್‌ಐಎಲ್‌ ಒದಗಿಸುವುದು. ಉಪಹಾರ ಕೇಂದ್ರಗಳ ನಿರ್ವಹಣೆ ಸ್ತ್ರೀಶಕ್ತಿ ಸಂಘಗಳು ಹಾಗೂ ಮಹಿಳಾ ಉದ್ಯಮಿಗಳು ಮಾಡುವುದು ಎಂಬಂತಾಗಿತ್ತು. ಉಪಹಾರ ಕೇಂದ್ರಗಳನ್ನು ನಡೆಸಲು ಸ್ಥಳೀಯ ಸಂಸ್ಥೆಗಳ ಆಯ್ಕೆಯನ್ನು ಜಿಲ್ಲಾಮಟ್ಟದ ಸಮಿತಿ ಮೂಲಕ ಮಾಡಲಾಗುತ್ತದೆ. ಸಬ್ಸಿಡಿ ದರದಲ್ಲಿ ಅಗತ್ಯ ಆಹಾರ ಧಾನ್ಯಗಳನ್ನು ನೀಡುವಂತೆ ಆಹಾರ ಇಲಾಖೆಗೆ ಮನವಿ ಮಾಡಲಾಗಿದೆ. ಅದು ಹೊರತು ಪಡಿಸಿದರೆ ಈ ವಿಚಾರದಲ್ಲಿ ಬೇರೇನೂ ಪ್ರಗತಿ ಆಗಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.ಈಗಾಗಲೇ 30 ಜಿಲ್ಲಾ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ನಡೆಸಲಾಗುತ್ತಿರುವ ಉಪಹಾರ ಕೇಂದ್ರಗಳಲ್ಲಿಯೇ ಗುತ್ತಿಗೆ ಅವಧಿ ಮುಗಿಯುವವರಿಗೆ ರಿಯಾಯಿತಿ ದರದ ಆಹಾರ ಪದಾರ್ಥಗಳನ್ನು ನೀಡುವಂತೆ ಸೂಚಿಸಲಾಗಿದೆ.

ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಅದು ಸಾಧ್ಯವಾಗುತ್ತಿಲ್ಲ. ಉಳಿದಂತೆ 144 ತಾಲೂಕು ಆಸ್ಪತ್ರೆಗಳಲ್ಲಿ ಉಪಹಾರ ಕೇಂದ್ರಗಳಿಗೆ ಜಾಗ ಇನ್ನೂ ಗುರುತಿಸುವ ಹಂತದಲ್ಲೇ ಇದೆ.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.