Government ಜಾಗ ಒತ್ತುವರಿ: ಹೈಕೋರ್ಟ್ ನೋಟಿಸ್
Team Udayavani, Sep 11, 2024, 10:37 PM IST
ಬೆಂಗಳೂರು: ಬೆಳ್ತಂಗಡಿ ತಾಲೂಕು ಕಾಣಿಯೂರು ಗ್ರಾಮದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್ ಆಚಾರ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ದ.ಕ. ಜಿಲ್ಲಾಧಿಕಾರಿ, ಪುತ್ತೂರು ಉಪವಿಭಾಗಾಧಿಕಾರಿ, ಬೆಳ್ತಂಗಡಿ ತಹಶೀಲ್ದಾರ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು.
ಕಾಣಿಯೂರು ಗ್ರಾಮದ ಸರ್ವೇ ನಂಬರ್ 27/1 ಎಯಲ್ಲಿ 11 ಎಕರೆ 90 ಸೆಂಟ್ಸ್ ಸರಕಾರಿ ಜಮೀನು ಇದೆ. ಇದಕ್ಕೆ ಹೊಂದಿಕೊಂಡ ಸರ್ವೇ ನಂಬರ್ 265/1ಎ1ರಲ್ಲಿ 1 ಎಕರೆ 83 ಸೆಂಟ್ಸ್ ಜಾಗದಲ್ಲಿ ಸರಕಾರಿ ಆಟದ ಮೈದಾನವಿದೆ. ಈ ಪೈಕಿ ಸರ್ವೇ ನಂಬರ್ 27/1ಎಯಲ್ಲಿರುವ ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಲಾಗಿದೆ.
ಒತ್ತುವರಿಯಾಗಿರುವ ಜಾಗವನ್ನು ವಾಪಸ್ ಪಡೆಯಬೇಕು. ಅಲ್ಲದೇ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವಂತೆ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.