ಸರ್ಕಾರಿ ಭೂಮಿ ಒತ್ತುವರಿ ತೆರವಿಗೆಸಿಎಂ ಸೂಚನೆ
Team Udayavani, Nov 8, 2017, 8:16 AM IST
ಬೆಂಗಳೂರು: ಎ.ಟಿ.ರಾಮಸ್ವಾಮಿ ವರದಿ ಆಧರಿಸಿ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವುಗೊಳಿಸಿದಂತೆ ವಿ. ಬಾಲಸುಬ್ರಮಣ್ಯಂ ವರದಿ ಆಧರಿಸಿ ರಾಜ್ಯದ ಇತರೆಡೆಗಳಲ್ಲಿ ಆಗಿರುವ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಭೂಮಿ ಯನ್ನು ಅವರಿಂದ ತೆರವುಗೊಳಿಸಿ ಸರ್ಕಾರದ ಉದ್ದೇಶಗಳಿಗೆ ಬಳಕೆ ಮಾಡಿಕೊಳ್ಳ ಬೇಕೆಂದು ಹೇಳಿದರು.
ರಾಜಧಾನಿ ಬೆಂಗಳೂರಿನಲ್ಲಿ 34,111 ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಅದರಲ್ಲಿ 7781 ಎಕರೆ ಸಾರ್ವಜನಿಕ ಉದ್ದೇಶಕ್ಕೆ ಆಗಿದೆ ಎಂದು ಎ.ಟಿ.ರಾಮಸ್ವಾಮಿ ವರದಿ ನೀಡಿದ್ದರು. ಇದುವರೆಗೆ ಒತ್ತುವರಿಯಾಗಿರುವ 11,960 ಎಕರೆ ಸರ್ಕಾರಿ ಜಮೀನಿನಲ್ಲಿ 11,660 ಎಕರೆ ಸರ್ಕಾರಿ ಭೂಮಿಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತೆರವುಗೊಳಿಸಿದ್ದಾರೆ. ಇದಲ್ಲದೆ, ಇತರೆ
ಒತ್ತುವರಿಯಾಗಿರುವ 6000 ಎಕರೆಯನ್ನೂ ತೆರವುಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ವಿ.ಬಾಲಸುಬ್ರಮಣ್ಯಂ ವರದಿಯಲ್ಲಿ ಹೇಳಿರುವಂತೆ ರಾಜ್ಯದ ಇತರೆಡೆ ಆಗಿರುವ ಒತ್ತುವರಿಯನ್ನೂ ಆದ್ಯತೆ ಮೇಲೆ ತೆರವುಗೊಳಿಸಬೇಕು ಎಂದು ಸೂಚಿಸಿದರು.
ಒತ್ತುವರಿ ತೆರವಾದರೆ ಆ ಭೂಮಿಯನ್ನು ರೈಲ್ವೆ, ರಸ್ತೆ, ಶಾಲಾ ಕಟ್ಟಡ ಹಾಗೂ ವಸತಿ ನಿಲಯಗಳಂತಹ ಸಾರ್ವಜನಿಕ ಹಿತದೃಷ್ಠಿಯ ಸರ್ಕಾರದ ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಳಸಿಕೊಳ್ಳ ಬಹುದು ಎಂದು ಹೇಳಿದರು.
ಈ ಹಿಂದೆ ಜಿಲ್ಲಾಧಿಕಾರಿಗಳೇ ನಿರ್ವಹಿಸುತ್ತಿದ್ದ ಹಲವು ಜವಾಬ್ದಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಹಂಚಿಕೆ ಯಾಗಿ ಜಿಲ್ಲಾಧಿಕಾರಿಗಳ ಮೇಲಿನ ಒತ್ತಡ ಕಡಿಮೆಯಾಗಿದೆ. ಆದ್ದರಿಂದ ಅವರು ಸರ್ಕಾರಿ ಭೂಮಿ ಮಂಜೂರಾಗಿರುವ ಸಂಘ-ಸಂಸ್ಥೆಗಳ ಬಗ್ಗೆ ನಿಗಾ ಇಟ್ಟು ಮಂಜೂರಾದ ಭೂಮಿ ಅದೇ ಉದ್ದೇಶಕ್ಕೆ
ಬಳಕೆಯಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಜತೆಗೆ ಸರ್ಕಾರಿ ಜಮೀನು ಹಾಗೂ ವಕ್ಫ್ ಆಸ್ತಿಗಳ ಒತ್ತುವರಿ, ರಸ್ತೆಗಳು ಹಾಗೂ
ಕೆರೆ-ಕುಂಟೆಗಳ ಅತಿಕ್ರಮಣದಂತಹ ಪ್ರಕರಣಗಳತ್ತ ಆಧ್ಯ ಗಮನ ಹರಿಸಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.