Karnataka Government; ಆ್ಯಂಟಿಬಯಾಟಿಕ್‌ ಅತಿಬಳಕೆ ತಡೆಗೆ ಆಪರೇಶನ್‌ ಅಮೃತ್‌!

ಕೇರಳ ಮಾದರಿಯ ಯೋಜನೆ ಜಾರಿಗೆ ರಾಜ್ಯ ಸರಕಾರ ಚಿಂತನೆ

Team Udayavani, Aug 26, 2024, 7:30 AM IST

Karnataka Government; ಆ್ಯಂಟಿಬಯಾಟಿಕ್‌ ಅತಿಬಳಕೆ ತಡೆಗೆ ಆಪರೇಶನ್‌ ಅಮೃತ್‌!

ಬೆಂಗಳೂರು: ರಾಜ್ಯದಲ್ಲಿ ಆ್ಯಂಟಿ ಬಯಾಟಿಕ್‌ ಔಷಧಗಳ ಅತೀ ಹಾಗೂ ದುರ್ಬಳಕೆಯನ್ನು ತಡೆಯಲು ಕೇರಳ ಮಾದರಿಯ “ಆಪರೇಶನ್‌ ಅಮೃತ್‌’ ಯೋಜನೆಯನ್ನು ಜಾರಿಗೊಳಿಸಲು ಕರ್ನಾಟಕ ಸರಕಾರ ಚಿಂತನೆ ನಡೆಸುತ್ತಿದೆ.

ರಾಜ್ಯದಲ್ಲಿ ವೈದ್ಯರ ಸಲಹೆ ಇಲ್ಲದೆ ಆ್ಯಂಟಿ ಬಯಾಟಿಕ್‌ಗಳು ಹಾಗೂ ಕಳಪೆ ಗುಣಮಟ್ಟದ ಔಷಧಗಳು ಮಾರಾಟವಾಗುತ್ತಿವೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಪ್ರಾಣಹಾನಿ ಸಂಭವಿಸುತ್ತಿದೆ. ಈಗ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆಯು ಆ್ಯಂಟಿಬಯಾಟಿಕ್‌ ಹಾಗೂ ಕಳಪೆ ಗುಣಮಟ್ಟದ ಔಷಧಗಳ ಮಾರಾಟ ವನ್ನು ನಿಯಂತ್ರಿಸಲು ಕೇರಳ ಮಾದರಿ ಯೋಜನೆ ಆಳವಡಿಸಿಕೊಳ್ಳಲು ಅಗತ್ಯವಿರುವ ವರದಿಯನ್ನು ನೀಡುವಂತೆ ರಾಜ್ಯ ಔಷಧ ನಿಯಂತ್ರಣ ವಿಭಾಗಕ್ಕೆ ಆದೇಶ ನೀಡಿದೆ. ಈ ವರದಿಯು ಮುಂದಿನ 15 ದಿನಗಳಲ್ಲಿ ಇಲಾಖೆಯ ಕೈಸೇರಲಿದೆ.

ಆ್ಯಂಟಿಬಯಾಟಿಕ್‌ ದುಷ್ಪರಿಣಾಮ
ಸಣ್ಣಪುಟ್ಟ ಕಾಯಿಲೆಗಳಿಗೂ ನಿರಂತರವಾಗಿ ಆ್ಯಂಟಿ ಬಯಾಟಿಕ್‌ ಸೇವನೆ ಮಾಡುವುದರಿಂದ ರೋಗಕಾರಕ ಸೂಕ್ಷ್ಮಜೀವಿಗಳು ಔಷಧ ಪ್ರತಿರೋಧ ಗುಣ ಬೆಳೆಸಿಕೊಳ್ಳುತ್ತವೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಆ್ಯಂಟಿಬಯಾಟಿಕ್‌ ಔಷಧಗಳನ್ನು ನೀಡಿದರೂ ಕೆಲಸ ಮಾಡದೆ ಪ್ರಾಣ ಹಾನಿ ಸಂಭವಿಸುತ್ತದೆ.

ಔಷಧ ನಿಯಂತ್ರಕರ ಕೊರತೆ!
ರಾಜ್ಯದಲ್ಲಿ 116 ಔಷಧ ನಿಯಂತ್ರಕ ಹುದ್ದೆಗಳಿವೆ. ಅದರಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿಯಲ್ಲಿ ಒಟ್ಟು 6 ಹುದ್ದೆಗಳು ಮಾತ್ರ ಭರ್ತಿಯಾಗಿದೆ. ಸುಮಾರು 110 ಹುದ್ದೆಗಳು ಖಾಲಿಯಿವೆ. ಪ್ರಸ್ತುತ ಸಹಾಯಕ ಔಷಧ ನಿಯಂತ್ರಕರು ಔಷಧ ಮಳಿಗೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ದಾಳಿಗಳು ನಿರಂತರವಾಗಿ ನಡೆಯದ ಹಿನ್ನೆಲೆಯಲ್ಲಿ ಔಷಧ ಅಂಗಡಿಗಳಲ್ಲಿ ವ್ಯಾಪಕವಾಗಿ ವೈದ್ಯರ ಚೀಟಿ ಇಲ್ಲದೆ ಆ್ಯಂಟಿಬಯಾಟಿಕ್‌ ಔಷಧಗಳು ಮಾರಾಟವಾಗುತ್ತಿವೆ.

ಏನಿದು ಆಪರೇಶನ್‌ ಅಮೃತ್‌?
ಕೇರಳದಲ್ಲಿ ಅತಿಯಾದ ಆ್ಯಂಟಿಬಯಾಟಿಕ್‌ ಔಷಧಗಳ ಬಳಕೆಗೆ ಕಡಿವಾಣ ಹಾಕಲು “ಆಪರೇಶನ್‌ ಅಮೃತ್‌’ ಜಾರಿಗೊಳಿಸಲಾಗಿದೆ. ವೈದ್ಯರ ಸಲಹೆ ಇಲ್ಲದೆ ನೇರ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಔಷಧ ಅಂಗಡಿಗಳಿಗಾಗಿ ನಿಯಾಮಾವಳಿಯನ್ನು ರೂಪಿಸಿದ್ದು, ಅದರ ಅನ್ವಯ ಮಳಿಗೆಗಳು ಎಷ್ಟು ಆ್ಯಂಟಿಬಯಾಟಿಕ್‌ ಖರೀದಿಸಲಾಗಿದೆ, ಎಷ್ಟು ಮಾರಾಟವಾಗಿದೆ ಎನ್ನುವ ನಿಖರ ಮಾಹಿತಿಯನ್ನು ಒದಗಿಸ ಬೇಕಾಗುತ್ತದೆ. ಇಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಸಾರ್ವಜನಿಕರು ಕಾನೂನು ಉಲ್ಲಂ ಸುವ ಔಷಧ ಅಂಗಡಿಗಳ ವಿರುದ್ಧ ದೂರು ನೀಡಬಹುದಾಗಿದೆ. ಅದಕ್ಕಾಗಿ ಉಚಿತ ಸಹಾಯವಾಣಿ ಸ್ಥಾಪಿಸಲಾಗಿದೆ. ಜತೆಗೆ ನಿರಂತರವಾಗಿ ಔಷಧ ಮಳಿಗೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಪರಿಶೀಲನೆ ವೇಳೆ ವ್ಯತ್ಯಾಸ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮವನ್ನು ಕೇರಳ ಔಷಧ ನಿಯಂತ್ರಕ ಇಲಾಖೆ ಕೈಗೊಳ್ಳುತ್ತಿದೆ.

ರಾಜ್ಯದಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೆ ಆ್ಯಂಟಿ ಬಯಾಟಿಕ್‌ ಹಾಗೂ ಕಳಪೆ ಗುಣಮಟ್ಟದ ಔಷಧ ಮಾರಾಟವಾಗುತ್ತಿದೆ. ಇದು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆ್ಯಂಟಿಬಯಾಟಿಕ್‌ ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿ ಕೇರಳ ಮಾದರಿಯ ನಿಯಮವನ್ನು ಕರ್ನಾಟಕದಲ್ಲಿ ಅಳವಡಿಸಲಾಗುತ್ತದೆ.
-ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವರು

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

Temperature; ರಾಜ್ಯದೆಲ್ಲೆಡೆ ತಗ್ಗಿದ ಮಳೆ, ಹೆಚ್ಚಿದ ತಾಪಮಾನ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.