ತರಾತುರಿಯಲ್ಲಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬಾರದು: ಸಿದ್ದರಾಮಯ್ಯ


Team Udayavani, Jul 8, 2021, 3:48 PM IST

ತರಾತುರಿಯಲ್ಲಿ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬಾರದು: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಗಳು ಸೇರಿ ಆಡಳಿತ ವ್ಯವಸ್ಥೆಯೇ ಸ್ಥಗಿತಗೊಂಡಿರುವ ಹೊತ್ತಿನಲ್ಲಿ ಸರ್ಕಾರ ತರಾತುರಿಯಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ಅನುಷ್ಠಾನಗೊಳಿಸಬಾರದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರಜ್ಞಾವಂತರ, ಪೋಷಕರ, ಸಾರ್ವಜನಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಕೆಲಸ ಮಾಡುತ್ತಿರುವ ಶಿಕ್ಷಣ ತಜ್ಞರ, ವಿದ್ಯಾರ್ಥಿ ಸಂಘಟನೆಗಳ, ಬೋಧಕ ಮತ್ತು ಲೇಖಕ-ಬರಹಗಾರರ ವಲಯದಲ್ಲಿ ಚರ್ಚೆ ಆಗದೆ ಎನ್‍ಇಪಿ-2020 ನ್ನು ತರಾತುರಿಯಲ್ಲಿ ಜಾರಿ ಮಾಡಲು ಹೊರಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎನ್‍ಇಪಿ-2020 ಅನ್ನು ಇದುವರೆಗೂ ಸಂಸತ್ತಿನಲ್ಲಿ ಮಂಡಿಸಿಲ್ಲ, ಚರ್ಚೆಯೂ ಆಗಿಲ್ಲ. ಅದೇ ರೀತಿ ರಾಜ್ಯದಲ್ಲೂ ಕರಡು ಅಧಿಸೂಚನೆ ಹೊರಡಿಸಿಲ್ಲ. ವಿಧಾನಸಭೆ / ಪರಿಷತ್‍ನಲ್ಲಿ ಚರ್ಚೆಯಾಗಿಲ್ಲ. ಸಂವಿಧಾನದ ಪರಿಚ್ಛೇದ 7ರ ಪ್ರಕಾರ ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಅಂದರೆ ಶಿಕ್ಷಣದ ವಿಚಾರದಲ್ಲಿ ರಾಜ್ಯಗಳಿಗೂ ಇರುವ ಸಮಾನ ಹಕ್ಕನ್ನು ಕಿತ್ತುಕೊಂಡು ಕೇಂದ್ರ ಬಲವಂತದಿಂದ ರಾಜ್ಯಗಳಲ್ಲಿ ಜಾರಿ ಮಾಡಲು ಹೊರಟಿದೆ. ಮೇಲ್ನೋಟಕ್ಕೆ ಇದರಲ್ಲಿ ಹಲವು ಅಪಾಯಕಾರಿಯಾದ ಶಿಫಾರಸ್ಸುಗಳು ಇರುವುದು ಗೋಚರಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ:ಕೆಆರ್ ಎಸ್ ಜಲಾಶಯದಲ್ಲಿ ಬಿರುಕು ವಿಚಾರ ಕೇವಲ ಊಹಾಪೋಹ: ಸಚಿವ ನಿರಾಣಿ

1 ರಿಂದ 8 ವಯಸ್ಸಿನ ಬುನಾದಿ ಹಂತದ ಶಿಕ್ಷಣಕ್ಕೆ ಕೇಂದ್ರೀಕೃತ ಎನ್‍ಸಿಆರ್‍ಟಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಈ ಕ್ರಮವು ಕನ್ನಡದಂತಹ ಸಂಸ್ಕೃತಿಗಳ ವಿರುದ್ಧವಾಗಿದೆ. ಈಗಾಗಲೇ ಬಹುತೇಕ ಚರಿತ್ರೆಯ ಪುಸ್ತಕಗಳಲ್ಲಿ ಕನ್ನಡದ, ಕರ್ನಾಟಕದ ಸಂಸ್ಕೃತಿ, ಆಡಳಿತ, ವಾಣಿಜ್ಯ, ಸಮಾಜಗಳ ಚಿಂತನೆಗಳೇ ಇಲ್ಲವಾಗಿದೆ. ಎನ್.ಸಿ.ಆರ್.ಟಿ ಪಠ್ಯಕ್ರಮದ ಮೂಲಕ ಇನ್ನಷ್ಟು ಸಾಂಸ್ಕೃತಿಕ ದಮನ ಮಾಡಲು ಯೋಜಿಸಲಾಗುತ್ತಿದೆ. ನಮ್ಮ ಮಕ್ಕಳು, ಕನ್ನಡ, ತೆಲುಗು, ತಮಿಳು, ಮಲೆಯಳಂ, ಕೊಡವ, ಕೊಂಕಣಿ, ತುಳು, ಮರಾಠಿ, ಒರಿಯಾ, ಬಂಗಾಳಿ, ಗುಜರಾತಿ ಮುಂತಾದ ಸಂಸ್ಕೃತಿಗಳ ಮೂಲಕ ಕಲಿಯಬೇಕು ಮತ್ತು ಯೋಚಿಸಬೇಕು. ಅದಕ್ಕಾಗಿ ಆಯಾ ರಾಜ್ಯ ಪಠ್ಯಕ್ರಮವನ್ನು ಅಳವಡಿಸಿಕೊಂಡು ಈ ನೆಲದ, ಮಣ್ಣಿನ ಸಂಗತಿಗಳನ್ನು ಪಾಠಗಳಲ್ಲಿ ಮಕ್ಕಳು ಕಲಿಯುವಂತಿರಬೇಕು. ಇದಕ್ಕೆ ಅವಕಾಶ ಕಲ್ಪಿಸಿಲ್ಲ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ತ್ರ್ರಿ ಭಾಷಾ ಸೂತ್ರವನ್ನು ಕಡ್ಡಾಯಗೊಳಿಸಿರುವುದು ಅದರಲ್ಲಿ ಇಂಗ್ಲಿಷ್ ಮತ್ತು ಹಿಂದಿ ಕಲಿಕೆಯನ್ನು ಕಡ್ಡಾಯಗೊಳಿಸಿರುವುದು ಭಾಷಾ ಹೇರಿಕೆ ಮಾತ್ರವಲ್ಲದೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂಥದ್ದಾಗಿದೆ.  ಜತೆಗೆ ಸಂಸ್ಕೃತ ಭಾಷಾ ಕಲಿಕೆಗೆ ವಿಶೇಷ ಮಹತ್ವ ಕೊಡಬೇಕೆಂದು ಹೇಳಿರುವುದು, ಸಾಧ್ಯವಾದರೆ ಅದನ್ನು ಕಡ್ಡಾಯಗೊಳಿಸಬಹುದೆ ಎನ್ನುವಂತಹ ಮಾತುಗಳನ್ನೂ ಹೇಳಿರುವುದು ಅಸಾಂಗತ್ಯದ ಸೂಚನೆಯಾಗಿದೆ ಎಂದಿದ್ದಾರೆ.

ಮತೀಯವಾದಿ ಭಾಷೆಯಲ್ಲಿ ಮಾತನಾಡುವ ಎನ್‍ಇಪಿ-2020, ಎನ್‍ಸಿಆರ್‍ಟಿಯನ್ನು ಪುನರ್ ರಚಿಸಬೇಕು, ಪಠ್ಯಗಳನ್ನು ಪುನರಾಯ್ಕೆ ಮಾಡಿಕೊಳ್ಳಬೇಕು ಎಂದು ಪದೇ ಪದೇ ಹೇಳಿದೆ. ಹಾಗೆಯೆ ರಾಜ್ಯ ಸರ್ಕಾರ ಬಿ.ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ, ‘ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮದ ಸುಧಾರಣೆಗಾಗಿ ಟಾಸ್ಕ್‍ಫೋರ್ಸ್ ಉಪಸಮಿತಿ’ಯನ್ನು ರಚಿಸಿದೆ. ಈ ಸಮಿತಿಯಲ್ಲಿ ಇಂದುಪ್ರಕಾಶ್, ಮಾನಸ ನಾಗಭೂಷಣ್, ಪದ್ಮಾವತಿ ಸದಸ್ಯರಾಗಿದ್ದಾರೆ. ಈ ನಾಲ್ಕು ಜನ ಅಧ್ಯಕ್ಷರು ಮತ್ತು ಸದಸ್ಯರು ಏಕಪಕ್ಷೀಯವಾಗಿ ಕರ್ನಾಟಕದ ಉನ್ನತ ಶಿಕ್ಷಣದ ಭವಿಷ್ಯವನ್ನು ನಿರ್ಧರಿಸುವುದು ಸರಿಯೇ? ಈ ಟಾಸ್ಕ್‍ಫೋರ್ಸ್ ಸಿಬಿಸಿಎಸ್ ಪಠ್ಯಕ್ರಮದ ಸ್ವರೂಪವನ್ನು ರಚಿಸಲು ಯಾರೊಂದಿಗೆ ಸಮಾಲೋಚನೆ ನಡೆಸಿದೆ? ಯಾವ ಮಾದರಿಗಳನ್ನು ಬಳಸಿದೆ ಎನ್ನುವ ವಿವರಗಳಿಲ್ಲ. ಎನ್‍ಇಪಿ-2020 ಕ್ಕೆ ಹಲವರು ತಮ್ಮ ಪ್ರತಿಕ್ರಿಯೆ ಮತ್ತು ತಕರಾರುಗಳನ್ನು ಕಳುಹಿಸಿದ್ದಾರೆ. ಸರ್ಕಾರ ಈ ಪ್ರತಿಕ್ರಿಯೆ ಮತ್ತು ತಕರಾರುಗಳನ್ನು ಸಾರ್ವಜನಿಕರ ಅವಗಾಹನೆಗೆ ಬಹಿರಂಗಗೊಳಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯ,ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ 37.93ಕೋಟಿ ಲಸಿಕೆ ಪ್ರಮಾಣಗಳ ಪೂರೈಕೆ : ಕೇಂದ್ರ  

ಈಗಾಗಲೇ ಪದವಿ ತರಗತಿಗಳಿಗೆ ಕನ್ನಡದಂತಹ ಭಾಷಾ ವಿಷಯಗಳನ್ನು ಒಂದು ವರ್ಷಕ್ಕೆ ಮಾತ್ರ ಸೀಮಿತಗೊಳಿಸಬಹುದಾಗಿದೆ ಎಂದು ಈ ತಿಮ್ಮೇಗೌಡರ ನೇತೃತ್ವದ ಸಮಿತಿ ಶಿಫಾರಸ್ಸು ಮಾಡಿತ್ತು. ವಿವಿಧ ವಲಯಗಳ ಗಣ್ಯರು ಪ್ರತಿಪಕ್ಷಗಳ ಮುಖಂಡರು ವಿರೋಧ ಮಾಡಿದ ಮೇಲೆ ಉನ್ನತ ಶೀಕ್ಷಣ ಸಚಿವರು ಎರಡು ವರ್ಷಗಳಿಗೆ ಮುಂದುವರೆಸಲಾಗುತ್ತದೆ ಎಂದು ಹೇಳಿದ್ದಾರೆ. ಪದವಿ ತರಗತಿಗಳನ್ನು 4 ವರ್ಷಗಳಿಗೆ ವಿಸ್ತರಿಸಿದರೆ 3 ವರ್ಷಗಳ ಕಾಲ ಕನ್ನಡ ವಿಷಯವನ್ನು ಮುಖ್ಯ ಪಠ್ಯಕ್ರಮವೆಂದು ಕಲಿಸಬೇಕು. ಹೀಗಾಗಿ ಎನ್‍ಇಪಿ-2020 ಜಾರಿ ಮಾಡುತ್ತಿರುವ ರೀತಿ ಪಾರದರ್ಶಕವಾಗಿಲ್ಲ. ಸಂವಿಧಾನದ ಆಶಯಗಳನ್ನು ಇಂಚಿಂಚಾಗಿ ಕೊಂದು ಹಾಕುತ್ತಿರುವ ಮತ್ತು ರಾಜ್ಯಗಳ ಹಕ್ಕುಗಳನ್ನು ಒಂದೊಂದಾಗಿ ಕಸಿದುಕೊಳ್ಳುತ್ತಿರುವ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಬಲವಂತಕ್ಕೆ ರಾಜ್ಯ ಸರ್ಕಾರ ಸಂಚಿನ ರೂಪದಲ್ಲಿ ತರಾತುರಿಯಲ್ಲಿ ‘ಎನ್‍ಇಪಿ-2020’ ನ್ನು ಜಾರಿ ಮಾಡಬಾರದು ಎಂದು ಆಗ್ರಹಿಸಿದ್ದಾರೆ

ಹಾಗೆಯೇ ವಿಧಾನಸಭೆ-ವಿಧಾನ ಪರಿಷತ್‍ನ ಅಧಿವೇಶನಗಳಲ್ಲಿ, ವಿಶ್ವ ವಿದ್ಯಾಲಯಗಳಲ್ಲಿ, ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರು ಮತ್ತು ಪ್ರಜ್ಞಾವಂತರು, ಪೋಷಕರ ವಲಯಗಳ ನಡುವೆ ಸಮಗ್ರ ಚರ್ಚೆಯ ನಂತರವಷ್ಟೇ ‘ಎನ್‍ಇಪಿ-2020’ ನ್ನು ಜಾರಿ ಮಾಡುವ ಕುರಿತು ಯೋಚಿಸಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.