![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Mar 15, 2020, 3:02 AM IST
ಮಂಗಳೂರು: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ನಿಯಂತ್ರಿಸಲು ಸರಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ. ಶನಿವಾರ ಮಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿ, ವಿಶ್ವದಲ್ಲಿ ಕೊರೊನಾ ರೋಗ ಮಾರಣಾಂತಿಕವಾಗಿ ಹರಡುತ್ತಿದೆ. ಅದನ್ನು ತಡೆಗಟ್ಟುವ ಜವಾಬ್ದಾರಿ ಸರಕಾರಕ್ಕಿದೆ.
ತನ್ನ ಜವಾಬ್ದಾರಿಯನ್ನು ಸರಕಾರ ನಿರ್ವಹಿಸುತ್ತಿದೆ ಎಂದು ವಿವರಿಸಿದರು.ವಿದೇಶದಲ್ಲಿರುವವರು ಕೊರೊನಾದಿಂದ ಆ ದೇಶ ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿ ಸಾವು ಸಂಭವಿಸಿದ ಕಾರಣ ಮುನ್ನೆಚ್ಚರಿಕೆ ಅತಿ ಅಗತ್ಯವಾಗಿದೆ. ಹಾಗಾಗಿ, ರಾಜ್ಯ ಸರಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ರೋಗ ನಿಯಂತ್ರಿಸಲು ರಾಜ್ಯ ಸರಕಾರದಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
You seem to have an Ad Blocker on.
To continue reading, please turn it off or whitelist Udayavani.