ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ಕೈ ನಕಾರ; ಕಾಂಗ್ರೆಸ್‌-ಬಿಜೆಪಿ ನಡುವೆ ವಾಕ್ಸಮರ

ರಾಜ್ಯ ಪೊಲೀಸರಿಂದಲೇ ತನಿಖೆಗೆ ಸರಕಾರದ ನಿರ್ಧಾರ

Team Udayavani, Jul 12, 2023, 6:39 AM IST

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐಗೆ ಕೈ ನಕಾರ; ಕಾಂಗ್ರೆಸ್‌-ಬಿಜೆಪಿ ನಡುವೆ ವಾಕ್ಸಮರ

ಬೆಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ ಚಿಕ್ಕೋಡಿಯ ಕಟಕಬಾವಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್‌ ಅವರ ಭೀಕರ ಹತ್ಯೆ ಪ್ರಕರಣದ ಸಿಬಿಐ ತನಿಖೆ ವಿಚಾರ ಮಂಗಳವಾರವೂ ಉಭಯ ಸದನಗಳಲ್ಲಿ ಸದ್ದು ಮಾಡಿದೆ. ವಿಪಕ್ಷ ಬಿಜೆಪಿ ಮತ್ತು ಸರಕಾರದ ಮಧ್ಯೆ ತೀವ್ರ ತಿಕ್ಕಾಟ ನಡೆದಿದ್ದು, ಬಿಜೆಪಿ ನಡೆಸಿದ ಪ್ರತಿಭಟನೆ ವಿಧಾನಸಭೆ ಯಲ್ಲಿ ಮಧ್ಯಾಹ್ನದ ಕಲಾಪವನ್ನೇ ನುಂಗಿ ಹಾಕಿತು.

ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸರಕಾರ ತಳ್ಳಿ ಹಾಕಿತಲ್ಲದೆ, ರಾಜ್ಯ ಪೊಲೀಸರು ಸಮರ್ಥರಿದ್ದು, ಅವರಿಂದಲೇ ಸಮಗ್ರ ತನಿಖೆ ನಡೆಸಲಾಗುವುದು ಎಂದು ಸಮರ್ಥಿಸಿಕೊಂಡಿತು. ಪ್ರಕರಣದ ತನಿಖೆಯನ್ನು ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇದಕ್ಕೆ ಉಭಯ ಸದನಗಳಲ್ಲಿ ಬಿಜೆಪಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ಧರಣಿ ನಡೆಸಿದ ಪರಿಣಾಮ ಗದ್ದಲ ಉಂಟಾಗಿ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು.

ಸೋಮವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ್ದ ಬಿಜೆಪಿ ಸದಸ್ಯರು, ಜೈನ ಮುನಿ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಸರಕಾರವನ್ನು ಆಗ್ರಹಿಸಿದ್ದರು. ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಗೃಹ ಸಚಿವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು, ಮಂಗಳವಾರ ಸದನಕ್ಕೆ ಉತ್ತರಿಸುತ್ತಾರೆ ಎಂದಿದ್ದರು.

ಮಂಗಳವಾರ ಮಧ್ಯಾಹ್ನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಉತ್ತರಿಸಿದ ಗೃಹ ಸಚಿವ ಡಾ| ಪರಮೇಶ್ವರ ಅವರು, ಜೈನ ಮುನಿಗಳನ್ನು ಭೀಕರ- ಅಮಾನವೀಯವಾಗಿ ಹತ್ಯೆ ಮಾಡಲಾಗಿದೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಹತ್ಯೆಗೀಡಾಗಿರುವ ಜೈನ ಮುನಿಗಳ ಸಂಬಂಧಿ ಭೀಮಪ್ಪ ಉಗಾರೆ ನೀಡಿದ ದೂರಿನ ಆಧಾರದಲ್ಲಿ ಕೇವಲ ಆರು ತಾಸುಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ಪೊಲೀಸರು ದೇಶದಲ್ಲೇ ನಂ. 1 ಸ್ಥಾನದಲ್ಲಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವ ಅಗತ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಬಸವರಾಜ ಬೊಮ್ಮಾಯಿ, ಈ ಪ್ರಕರಣವನ್ನು ಸರಕಾರ ಇತರ ಹತ್ಯೆಗಳಂತೆ ಪರಿಗಣಿಸಬಾರದು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ಕಾಣದ ಕೈಗಳ ಕೈವಾಡವೂ ಇದೆ. ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು. ನಿಷ್ಪಕ್ಷ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಪಟ್ಟು ಹಿಡಿದರು.

ಬಿಜೆಪಿಯ ಆರಗ ಜ್ಞಾನೇಂದ್ರ ಮಾತನಾಡಿ, ಇದು ದೇಶವ್ಯಾಪಿ ಸುದ್ದಿಯಾಗಿರುವ ಪ್ರಕರಣ. ನಿಷ್ಪಕ್ಷ ತನಿಖೆ ನಡೆಸಿ ಕಠಿನ ಕ್ರಮ ಕೈಗೊ ಳ್ಳಬೇಕು. ಯಾವುದೇ ಒತ್ತಡಕ್ಕೆ ಪೊಲೀಸರು ಮಣಿಯಬಾರದು ಎಂದರು. ಈ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಿಮ್ಮ ಸರಕಾರ ಇದ್ದಾಗ ನೀವು ಒತ್ತಡಕ್ಕೆ ಮಣಿದಿದ್ದಿರಾ’ ಎಂದು ಕುಟುಕಿದರು.

ಇದಕ್ಕೆ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ, “ಕುಕ್ಕರ್‌ ಸ್ಫೋಟ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದ್ದರೆ ಮುಗಿದು ಹೋಗುತ್ತಿತ್ತು. ಅದರ ಬೇರುಗಳು ಎಲ್ಲೆಲ್ಲಿವೆ ನೋಡಿ ಗೊತ್ತಾಗುತ್ತದೆ’ ಎಂದು ತಿರುಗೇಟು ಕೊಟ್ಟರು.

ಯಾವುದೇ ಕಾರಣಕ್ಕೂ ಸಿಬಿಐಗೆ ಇಲ್ಲ
ಪ್ರಕರಣದ ತನಿಖೆಯನ್ನು ಯಾವುದೇ ಕಾರಣಕ್ಕೂ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು. ಗೃಹ ಸಚಿವ ಡಾಣ ಪರಮೇಶ್ವರ ಅವರು ಮುನಿಗಳ ಹತ್ಯೆ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿ ಮತ್ತು ತನಿಖೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಇದೊಂದು ದಿಗ್ಬ†ಮೆ ಮೂಡಿಸುವ ಪ್ರಕರಣ. ಇಂತಹವು ನಡೆಯಲೇಬಾರದು. ಪ್ರಕರಣವನ್ನು ಕೇವಲ ಆರು ತಾಸುಗಳಲ್ಲಿ ಪೊಲೀಸರು ಬೇಧಿಸಿದ್ದಾರೆ. ಇದರ ಹಿಂದೆ ಎಷ್ಟೇ ದೊಡ್ಡ ವ್ಯಕ್ತಿಗಳು ಇದ್ದರೂ ಅವರಿಗೆ ಕಠಿನ ಶಿಕ್ಷೆ ಆಗುವುದು ನಿಶ್ಚಿತ. ಇಲ್ಲಿ ಯಾರನ್ನೂ ರಕ್ಷಿಸುವ ಪ್ರಮೇಯವೇ ಇಲ್ಲ. ಯಾವ ಒತ್ತಡಕ್ಕೂ ಸರಕಾರ ಮಣಿಯುವುದಿಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದು, ಈ ಪ್ರಕರಣವನ್ನು ಯಾವುದೇ ಕಾರಣಕ್ಕೂ ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ಪ್ರತಿಭಟನೆಗೆ ಇಳಿದ ಬಿಜೆಪಿ
ಗೃಹ ಸಚಿವರು ಮತ್ತು ಸಿಎಂ ಅವರ ಉತ್ತರದಿಂದ ತೃಪ್ತರಾಗದ ವಿಪಕ್ಷ ಬಿಜೆಪಿಯ ಸದಸ್ಯರು ಧರಣಿ ಆರಂಭಿಸಿದರು. ಸಭಾಧ್ಯಕ್ಷ ಯು.ಟಿ. ಖಾದರ್‌ ಧರಣಿ ಕೈಬಿಡುವಂತೆ ಬಿಜೆಪಿ ಸದಸ್ಯರಿಗೆ ಮಾಡಿದ ಮನವಿ ಫ‌ಲಿಸಲಿಲ್ಲ. ಕೊನೆಗೆ ಸದನವನ್ನು 10 ನಿಮಿಷ ಮುಂದೂಡಲಾಯಿತು. ಮತ್ತೆ ಸದನ ಆರಂಭವಾದಾಗಲೂ ಧರಣಿ ಮುಂದುವರಿದಾಗ ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು. ಮೇಲ್ಮನೆಯಲ್ಲಿಯೂ ಇದೇ ವಿಚಾರದಲ್ಲಿ ಗದ್ದಲ ಉಂಟಾಯಿತು.

ವೇಣುಗೋಪಾಲ ಕೊಲೆ ಸಮಗ್ರ ತನಿಖೆ: ಸಿಎಂ
ಟಿ. ನರಸೀಪುರದ ಯುವ ಬ್ರಿಗೇಡ್‌ನ‌ ಮುಖಂಡ ವೇಣುಗೋಪಾಲ್‌ ಸೇರಿದಂತೆ ರಾಜ್ಯದಲ್ಲಿ ನಡೆ ದಿರುವ ಎಲ್ಲ ಕೊಲೆ ಪ್ರಕರಣಗಳನ್ನು ಸರಕಾರ ಗಂಭೀರ ವಾಗಿ ಪರಿ ಗಣಿಸಿ ರಾಜ್ಯ ಪೊಲೀಸರಿಂದಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿನ ಶಿಕ್ಷೆ ಆಗುವಂತೆ ನೋಡಿಕೊಳ್ಳ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳವಾರ ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಬಿಜೆಪಿಯ ಬೊಮ್ಮಾಯಿ ಅವರು ವೇಣುಗೋಪಾಲ್‌ ಕೊಲೆ ಕುರಿತು ಮಾಡಿದ ಪ್ರಸ್ತಾವಕ್ಕೆ ಪ್ರತಿಕ್ರಿಯಿಸಿದ ಸಿಎಂ, ರಾಜ್ಯದ ಪೊಲೀಸರು ಅತ್ಯಂತ ಉತ್ತಮವಾಗಿ ತನಿಖೆ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಸಲಾಗುತ್ತದೆ. ನಿಷ್ಪಕ್ಷ ತನಿಖೆ ನಡೆಸಿ ಖಂಡಿತವಾಗಿಯೂ ಕಠಿನ ಶಿಕ್ಷೆಗೆ ಗುರಿಪಡಿಸಲಾಗುತ್ತದೆ. ಇದರ ಬಗ್ಗೆ ವಿಪಕ್ಷದವರಿಗೆ ಯಾವುದೇ ಸಂಶಯ ಬೇಡ ಎಂದರು.

ಒಂದೂವರೆ ತಿಂಗಳಿನಲ್ಲಿ ಪೊಲೀಸರ ದಕ್ಷತೆ
ಕುಗ್ಗಿತೇ: ಪರಮೇಶ್ವರ ಚಾಟಿ
“ಬೊಮ್ಮಾಯಿ ಅವರೇ, ನಿಮ್ಮ ಸರಕಾರ ಇದ್ದಾಗ, ನೀವು ಗೃಹ ಸಚಿವರಾಗಿ ಇದ್ದಾಗಲೂ ಅನೇಕ ಕೊಲೆ ಪ್ರಕರಣಗಳನ್ನು ರಾಜ್ಯದ ಪೊಲೀಸರು ಬೇಧಿಸಿದ್ದಾರೆ. ಆಗ ಅವರ ಕಾರ್ಯವನ್ನು ನೀವು ಶ್ಲಾ ಸಿದ್ದೀರಿ. ಈಗ ಜೈನ ಮುನಿಗಳ ಹತ್ಯೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎನ್ನುತ್ತೀರಿ. ಹಾಗಿದ್ದರೆ ನಿಮಗೆ ರಾಜ್ಯದ ಪೊಲೀಸರಿಂದ ಇದು ಸಾಧ್ಯವಿಲ್ಲ ಅನ್ನಿಸುತ್ತಿದೆಯೇ? ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ರಾಜ್ಯದ ಪೊಲೀಸರ ಕಾರ್ಯವನ್ನು ಬಾಯಿತುಂಬಾ ಹೊಗಳುತ್ತಿದ್ದ ನಿಮಗೆ ಈಗ ಅವರ ಬಗ್ಗೆ ವಿಶ್ವಾಸ ಕುಗ್ಗಿತೇ’ ಎಂದು ಬಿಜೆಪಿ ಮುಖಂಡರೆಲ್ಲರಿಗೂ ಗೃಹ ಸಚಿವ ಪರಮೇಶ್ವರ ಅವರು ಚಾಟಿ ಬೀಸಿದರು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.