MUDA Case; ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ: ಎಂ.ಬಿ.ಪಾಟೀಲ
Team Udayavani, Aug 17, 2024, 11:23 AM IST
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ.
ಶನಿವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಟಿ.ಜೆ. ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟಿಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ ಎಂದರು.
ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟು ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು ಅವರು ಆರೋಪಿಸಿದರು.
ಕೇಂದ್ರದ ಬಿಜೆಪಿ ಸರಕಾರವು ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.
ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.