ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ
Team Udayavani, Jan 26, 2022, 10:07 AM IST
ಬೆಂಗಳೂರು: “ನನ್ನ ಸರ್ಕಾರ ಸಮಾಜದ ದುರ್ಬಲ ವರ್ಗಗಳು ವಿಶೇಷವಾಗಿ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗಳ ಜೀವನದ ಹಾಗೂ ಆರ್ಥಿಕತೆಯ ಎಲ್ಲಾ ಹಂತಗಳಲ್ಲಿ ತಮ್ನ ನ್ಯಾಯಬದ್ಧ ಹಕ್ಕನ್ನು ಪಡೆದುಕೊಳ್ಳಲು ಸಮರ್ಥಗೊಳಿಸುವುದಕ್ಕೆ ಸಂಪೂರ್ಣ ಬದ್ಧವಾಗಿದೆ ಎಂದು ರಾಜ್ಯಪಾಲ ತಾವರಚಂದ್ ಗೆಹ್ಲೋತ್ ಹೇಳಿದ್ದಾರೆ.
ದೇಶದ 73ನೇ ಗಣರಾಜ್ಯೋತ್ಸದ ಪ್ರಯುಕ್ತ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಅವರು ಭಾಷಣ ಮಾಡಿದರು.
ಗಣರಾಜ್ಯೋತ್ಸವ ಉತ್ಸವ ಹಾಗೂ ಮಾನವೀಯ ಸಂದೇಶ ಒಳಗೊಂಡಿದೆ. ಸರ್ಕಾರವು ಕೋವಿಡ್ 19 ಸಮರ್ಥವಾಗಿ ಎದುರಿಸಿದೆ. ಸರ್ಕಾರದ ಕಾರ್ಯ ಪ್ರಶಂಸನೀಯವಾಗಿದೆ. ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಅತಿವೃಷ್ಟಿ, ಪ್ರವಾಹದ ಸಂದರ್ಭದಲ್ಲಿ ಸರ್ಕಾರ ಸಂತ್ರಸ್ತರ ನೆರವಿಗೆ ಧಾವಿಸಿದೆ. ಸರ್ಕಾರ ಕೃಷಿಗೆ ಒತ್ತು ನೀಡಿದೆ. 2021-22ನೇ ಸಾಲಿನಲ್ಲಿ 1,472 ಕೋಟಿ ರೂ. ಮೊತ್ತದ ಜಲಾನಯನ ಅಭಿವೃದ್ದಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 12.76. ಲಕ್ಷ ರೈತರು ಬೆಳೆ ಸಮೀಕ್ಷೆಯಡಿ ನೋಂದಾಯಿಸಿಕೊಂಡಿದ್ದಾರೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹ ಯೋಜನೆಯಡಿ 4.41 ಕೋಟಿ ರೂ. ಮೊತ್ತವನ್ನು 16 ಸಾವಿರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಲಾಗಿದೆ ಎಂದರು.
ರಾಜ್ಯವು 2023 ರ ಆಗಸ್ಟ್ 15 ರವರೆಗೆ ಅಮೃತ ಮಹೋತ್ಸವ ಅನುಷ್ಠಾನಕ್ಕೆ ಮಾರ್ಗಸೂಚಿ ಸಿದ್ದಪಡಿಸಲಾಗಿದೆ. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ಇಡೀ ದೇಶದಲ್ಲಿ 2ನೇ ಸ್ಥಾನ, ಮೊಟ್ಟೆ ಉತ್ಪಾದನೆಯಲ್ಲಿ 6ನೇ ಸ್ಥಾನ, ಮಾಂಸ ಉತ್ಪಾದನೆಯಲ್ಲಿ 10ನೇ ಸ್ಥಾನ ಪಡೆದುಕೊಂಡಿದೆ. ಅತ್ಯಧಿಕ ಹುಲಿಗಳನ್ನು ಹೊಂದಿರುವ ದೇಶದ 2ನೇ ರಾಜ್ಯ, ಅತಿ ಹೆಚ್ಚು ಆನೆಗಳನ್ನು ಹೊಂದಿರುವ ಮೊದಲ ರಾಜ್ಯವಾಗಿದೆ ಎಂದರು.
“ನಾವೀಗ ಕೋವಿಡ್ ಮೂರನೇ ಅಲೆಯನ್ನು ಎದುರಿಸುತ್ತಿದ್ದೇವೆ. ನಾವು ಈ ಪರಿಸ್ಥಿತಿಯನ್ನು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು ಮತ್ತು ಇದರಲ್ಲಿ ನಾವು ಯಾವುದೇ ಅಲಕ್ಷ್ಯ ವಹಿಸುವುದು ಸರಿಯಲ್ಲ. ಸರ್ವರ ಆರೋಗ್ಯದ ಹಿತಕ್ಕಾಗಿ ಕಡ್ಡಾಯವಾಗಿ ದೈಹಿಕ ಅಂತರ ಕಾಪಾಡಬೇಕು, ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು. ಈ ಮೂರು ಮಂತ್ರಗಳನ್ನು ನಿರಂತರವಾಗಿ ಪಾಲಿಸಬೇಕು ಎಂದು ರಾಜ್ಯಪಾಲರು ರಾಜ್ಯದ ಜನತೆಗೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.