ಹಾವೇರಿಯಲ್ಲಿ ಹಾಲು ಸಂಸ್ಕರಣಾ ಡೇರಿ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ: ಬೊಮ್ಮಾಯಿ
Team Udayavani, May 27, 2021, 6:11 PM IST
ಬೆಂಗಳೂರು: ಧಾರವಾಡ ಹಾಲು ಒಕ್ಕೂಟದ ವತಿಯಿಂದ ಹಾವೇರಿ ಜಿಲ್ಲೆಯ ಜಂಗಮನಕೊಪ್ಪ ಗ್ರಾಮದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕವನ್ನು 90 ಕೋಟಿ ರೂಪಾಯಿ ವೆಚ್ಚದಲ್ಲಿ (ಪಿಪಿಪಿ) ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾವೇರಿ ಜಿಲ್ಲೆಯ ಹಾಲು ಉತ್ಪಾದಕರ ಬಹುದಿನಗಳ ಈ ಬೇಡಿಕೆಗೆ ಅನುಮೋದನೆ ದೊರೆಯಿತು ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ:ಮೇಕೆದಾಟು ಯೋಜನೆ ವಿವಾದದ ಬಗ್ಗೆ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ: ಬೊಮ್ಮಾಯಿ
ಧಾರವಾಡ ಹಾಲು ಒಕ್ಕೂಟ ಮಹಾಮಂಡಳಿ ವ್ಯಾಪ್ತಿಯಲ್ಲಿ ನಾಲ್ಕು ಜಿಲ್ಲೆಗಳು ಬರುತ್ತವೆ. ಈ ಜಿಲ್ಲೆಗಳಲ್ಲಿ ಒಟ್ಟು 45,000 ಹಾಲು ಉತ್ಪಾದಕ ಸದಸ್ಯರಿದ್ದಾರೆ. ಆದರೆ ಹಾವೇರಿ ಜಿಲ್ಲೆಯಲ್ಲಿ 22,000 ಹಾಲು ಉತ್ಪಾದಕರಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ದಿನ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ಹಾಲು ಉತ್ಪಾದನೆ ಪ್ರಮಾಣ ಶೇಕಡ 20ರಷ್ಟು ವೃದ್ಧಿಯಾಗುವ ನಿರೀಕ್ಷೆ ಇದೆ. ಆದ್ದರಿಂದ ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಹಾಲು ಸಂಸ್ಕರಣಾ ಡೇರಿ ಹಾಗೂ ಅಲ್ಟ್ರಾ ಹೀಟ್ ಟ್ರೀಟ್ಮೆಂಟ್ ಪ್ಯಾಕಿಂಗ್ ಘಟಕದ ಯೋಜನೆ ಸಿದ್ಧಪಡಿಸಲಾಗಿತ್ತು. ಈ ಮಹತ್ವಾಕಾಂಕ್ಷಿ ಯೋಜನೆಗೆ ಸಚಿವ ಇಂದು ಅನುಮತಿ ದೊರೆತಿದೆ ಎಂದು ಬಸವರಾಜ್ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.