ಖಾಸಗಿ ಹೋಟೆಲ್, ಹಜ್ ಭವನದಲ್ಲಿ ಕೋವಿಡ್ -19 ಚಿಕಿತ್ಸೆ ನೀಡಲು ಮುಂದಾದ ಸರ್ಕಾರ
Team Udayavani, Jun 25, 2020, 4:40 PM IST
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಲಕ್ಷಣ ಇಲ್ಲದೇ ಇರುವವರಿಗೆ ನಗರದ ಖಾಸಗಿ ಹೋಟೆಲ್ ಗಳು ಮತ್ತು ಹಜ್ ಭವನದಲ್ಲಿ ಚಿಕಿತ್ಸೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.
ನಗರದಲ್ಲಿ ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಸಭೆ ನಡೆಸಿದರು.
ನಗರದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಗೆ ತಕ್ಕಂತೆ ಹಾಸಿಗೆಗಳ ಲಭ್ಯತೆಯನ್ನು ಖಾತರಿ ಪಡಿಸುವ ನಿಟ್ಟಿನಲ್ಲಿ, ರೋಗ ಲಕ್ಷಣ ಕಡಿಮೆ ಇರುವವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಹಾಗೂ ರೋಗ ಲಕ್ಷಣ ಇಲ್ಲದವರಿಗೆ ಖಾಸಗಿ ಹೋಟೆಲ್ ಗಳು ಹಾಗೂ ಹಜ್ ಭವನದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಯಿತು.
ಕೋವಿಡ್ ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಕಾಯುವ ಪರಿಸ್ಥಿತಿ ಬರಬಾರದು. ಪರೀಕ್ಷಾ ವರದಿ ಬಂದು ಸೋಂಕು ದೃಢಪಟ್ಟ ನಂತರ ತ್ವರಿತವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಕ್ರಮ ವಹಿಸಲು ಸೂಚಿಸಲಾಯಿತು. ಇದಕ್ಕಾಗಿ ಈಗ 100 ಅಂಬ್ಯುಲೆನ್ಸ್ ಗಳು ಲಭ್ಯವಿದ್ದು, ಅಗತ್ಯಕ್ಕೆ ತಕ್ಕಂತೆ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ಈ ಉದ್ದೇಶಕ್ಕೆ ಬಳಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸಚಿವರಿಗೆ ಸೂಚಿಸಲಾಗಿದೆ. ಹಾಸಿಗೆಗಳ ಲಭ್ಯತೆ ಕುರಿತು, ಪ್ರತಿ ರೋಗಿಯ ದಾಖಲಿಸುವ ಕುರಿತು ಕ್ಷಣ ಕ್ಷಣದ ಮಾಹಿತಿ ಒದಗಿಸುವ ಕುರಿತು ಡಿಜಿಟಲ್ ಪ್ಲಾಟ್ ಫಾರ್ಮ್ ಸೃ಼ಜಿಸಲು ಇಂದು ನಿರ್ಧರಿಸಲಾಯಿತು.
ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಸಚಿವರು, ಶಾಸಕರ ಸಭೆ ಕರೆಯಲಾಗಿದ್ದು, ಮುಂದಿನ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.