ಸಾರಿಗೆ ನೌಕರರ ಮನವೊಲಿಕೆ ಪ್ರಯತ್ನವೇ ಇಲ್ಲ, ಪರ್ಯಾಯ ಮಾರ್ಗವಿದೆ: ಸರ್ಕಾರದ ದೃಢ ನಿರ್ಧಾರ
Team Udayavani, Apr 6, 2021, 12:58 PM IST
ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ನೌಕರರನ್ನು ಮನವೊಲಿಕೆಗೆ ಪ್ರಯತ್ನ ಇಲ್ಲ. ನಾವು ಪರ್ಯಾಯ ಮಾರ್ಗ ಅನುಸರಿಸುತ್ತೇವೆ. ಪ್ರತಿಭಟನೆ ಮಾಡುವವರ ವಿಷಯದಲ್ಲಿ ಕಾನೂನೂ ರೀತಿ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಹೇಳಿದರು.
ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ. 6ನೇ ವೇತನ ಆಯೋಗದಂತೆ ವೇತನ ಜಾರಿಗೂ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಪರ್ಯಾಯ ಸಾರಿಗೆ ಸೌಲಭ್ಯ ಒದಗಿಸಲು ಸನ್ನದ್ಧ: ಬೆಳಗಾವಿ ಡಿಸಿ ಡಾ.ಕೆ.ಹರೀಶ್ ಕುಮಾರ್
ನಾಳೆ (ಎ.7) ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಸಾರಿಗೆ ಬಸ್ ಗಳನ್ನು ಹಾನಿಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅವು ಸಾರ್ವಜನಿಕ ಸೊತ್ತು. ಅವುಗಳಿಗೆ ಹಾನಿಯಾದರೆ ಕ್ರಮ ಕೈಗೊಳ್ಳುತ್ತೇವೆ. ಮುಷ್ಕರ ನಿರತರ ನೌಕರರು ಕೆಲಸಕ್ಕೆ ಹಾಜರಾಗದಿದ್ದರೇ ವೇತನ ಕಡಿತಗೊಳಿಸಲಾಗುವ ನಿಯಮ ಕೂಡ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಮೇ 4 ರ ನಂತರವಷ್ಟೇ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಸಾಧ್ಯ: ಲಕ್ಷ್ಮಣ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.