Govt. Job Offer: ಪ್ರತಿಷ್ಠಿತ ಕ್ರೀಡೆಗಳಲ್ಲಿ ಪದಕ ಗೆದ್ದ ಆಟಗಾರರಿಗೆ ಸರ್ಕಾರಿ ಉದ್ಯೋಗ
ರಾಜ್ಯದ 12 ಕ್ರೀಡಾಪಟುಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Aug 4, 2024, 7:33 PM IST
ಬೆಂಗಳೂರು: ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯಕ್ಕೆ ಹೆಮ್ಮೆ ತಂದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ಕೊಡುಗೆ ನೀಡಿ ಕರ್ನಾಟಕ ಸರ್ಕಾರ ಆದೇಶ ಪತ್ರ ಹಸ್ತಾಂತರಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಹಾಗೂ ಕಾಮನ್‍ವೆಲ್ತ್ ಗೇಮ್ಸ್ಗಳಲ್ಲಿ ಪದಕ ಗೆದ್ದಿದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ನೇಮಕಾತಿ ಪತ್ರ ಹಸ್ತಾಂತರಿಸಿದರು.
12 ಮಂದಿಗೆ ಅವಕಾಶ ಪತ್ರ:
ಕ್ರೀಡಾಪಟುಗಳಿಗೆ ಆದೇಶ ಪತ್ರ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ರಾಜ್ಯ ಸರ್ಕಾರ ನೆರವಾಗಲಿದೆ. ಅದರಂತೆ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ತೀರ್ಮಾನಿಸಿದ್ದೇವೆ. ಸುಮಾರು 12 ಜನರಿಗೆ ಅವಕಾಶ ಪತ್ರ ನೇರ ನೇಮಕಾತಿಗೆ ನೀಡುತ್ತಿದ್ದೇವೆ. 2016- 17 ಒಲಿಂಪಿಕ್ಸ್ ಅಸೋಸಿಯೇಷನ್ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ಒಲಿಂಪಿಕ್ಸ್, ಏಷ್ಯಾಡ್ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ.
ಈ ಹಿಂದೆ ಪೊಲೀಸ್ ಇಲಾಖೆಯಲ್ಲಿ ಮಾತ್ರ ಕ್ರೀಡಾ ಸಾಧಕರಿಗೆ ಉದ್ಯೋಗದಲ್ಲಿ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿತ್ತು. ಇದೀಗ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹುದ್ದೆಗಳನ್ನು ಹಾಗೂ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಸಾಧಕ ಕ್ರೀಡಾಪಟುಗಳಿಗೆ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡುವ ಕುರಿತು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರವೇ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು.
45 ವರ್ಷಗಳ ವಯೋಮಿತಿ ನಿಗದಿ:
ನಾನು ಅಧಿಕಾರಕ್ಕೆ ಬಂದ್ಮೇಲೆ ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ. 3 ರಷ್ಟು ಮೀಸಲಾತಿ ಹೆಚ್ಚಿಸಿದ್ದೇನೆ. ಅಲ್ಲದೆ ಪದವಿ ಪಡೆದವರಿಗೆ ಗ್ರೂಪ್ ಸಿ ಉದ್ಯೋಗ ನೀಡಲು ತೀರ್ಮಾನ ಮಾಡಿದ್ದೇವೆ. ಅದರಂತೆ 12 ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ನೀಡುತ್ತಿದ್ದೇವೆ. ಇದರಲ್ಲಿ ಒಬ್ಬರಿಗೆ ಮಾತ್ರ ಗ್ರೂಪ್ ಎ ಉದ್ಯೋಗ ನೀಡಲಾಗುತ್ತಿದ್ದು, ಬಾಕಿ ಉಳಿದವರಿಗೆ ಗ್ರೂಪ್ ಬಿ ಹುದ್ದೆ ನೀಡುತ್ತಿದ್ದೇವೆ. ಹಾಗೆಯೇ ಉದ್ಯೋಗಕ್ಕೆ ಸೇರಿಕೊಳ್ಳಲು 45 ವರ್ಷಗಳ ವಯೋಮಿತಿ ನಿಗದಿಪಡಿಸಿದ್ದೇವೆ ಎಂದು ಸಿದ್ದರಾಮಯ್ಯ, ಉದ್ಯೋಗ ಪತ್ರ ಪಡೆದ, ಪದಕ ವಿಜೇತರಿಗೆ ತುಂಬು ಹೃದಯದ ಅಭಿನಂದನೆಗಳ ಸಲ್ಲಿಸಿದರು.
ಮುಖ್ಯಮಂತ್ರಿ @siddaramaiah ಅವರು ಇಂದು ಒಲಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್‍ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12 ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು.
ಕ್ರೀಡಾ ಸಾಧಕರನ್ನು… pic.twitter.com/dn6oz7vYDH
— CM of Karnataka (@CMofKarnataka) August 4, 2024
ಸರ್ಕಾರಿ ಹುದ್ದೆ ಸಿಕ್ಕಿದ ಕ್ರೀಡಾಪಟುಗಳು:
1. ಗಿರೀಶ್ ಎಚ್.ಎನ್ – ಕ್ಲಾಸ್ ಒನ್ ಆಫೀಸರ್ ಹುದ್ದೆ
2. ದಿವ್ಯಾ.ಟಿ.ಎಸ್ – ಗ್ರೂಪ್ ಬಿ ಹುದ್ದೆ
3. ಉಷಾರಾಣಿ .ಎನ್ – ಗ್ರೂಪ್ ಬಿ
4. ಸುಷ್ಮಿತಾ ಪವಾರ್ – ಗ್ರೂಪ್ ಬಿ
5. ನಿಕ್ಕಿನ್ ತಿಮ್ಮಯ್ಯ ಸಿ.ಎ ಗ್ರೂಪ್ ಬಿ
6. ಎಸ್.ವಿ.ಸುನೀಲ್ ಗ್ರೂಪ್ ಬಿ
7. ಕಿಶನ್ ಗಂಗೊಳ್ಳಿ ಗ್ರೂಪ್ ಬಿ
8. ರಾಘವೇಂದ್ರ ಗ್ರೂಪ್ ಬಿ
9. ರಾಧಾ ವಿ ಗ್ರೂಪ್ ಬಿ
10. ಶರತ್ ಎಂ.ಎಸ್ ಗ್ರೂಪ್ ಬಿ
11. ಗುರುರಾಜ – ಗ್ರೂಪ್ ಬಿ
12. ಮಲಪ್ರಭಾ ಯಲ್ಲಪ್ಪ ಜಾಧವ - ಗ್ರೂಪ್ ಬಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.