ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಕ್ಕೆ ಚಿಂತನೆ!
Team Udayavani, Feb 3, 2021, 8:59 AM IST
ವಿಧಾನಸಭೆ: ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯೆ ಸೌಮ್ಯ ರೆಡ್ಡಿ, ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ಇನ್ನೂ ನಡೆಯುತ್ತಿದೆ. ಆದರೆ, ಪೊಲೀಸ್ ಇಲಾಖೆ ಎರಡು ತಿಂಗಳು ಕಾರ್ಯಾಚರಣೆ ಮಾಡಿ ಮತ್ತೆ ಸುಮ್ಮನಾಗಿದೆ. ಇದು ಹಣ್ಣಿನ ಸೀಜನ್ ಥರ ಆಗಬಾರದು. ಡ್ರಗ್ಸ್ ವಿರುದ್ಧ ನಿರಂತರವಾಗಿ ಕಾರ್ಯಾ ಚರಣೆ ನಡೆಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸುಬ್ರಹ್ಮಣ್ಯ: ನಾಯಿಯನ್ನು ಓಡಿಸಿಕೊಂಡು ನಾಡಿಗೆ ಬಂದ ಚಿರತೆ ಶೌಚಾಲಯದಲ್ಲಿ ಬಂಧಿ!
ಇದಕ್ಕೆ ಉತ್ತರಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡ್ರಗ್ಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣಕ್ರಮ ಕೈಗೊಳ್ಳುತ್ತಿದೆ. ನಮ್ಮ ಕಾನೂನಿನಲ್ಲಿ ಕೆಲವು ಲೋಪದೋಷಗಳಿವೆ. ಕಳೆದ ಐದು ವರ್ಷದಲ್ಲಿ ಪತ್ತೆ ಹಚ್ಚಲಾಗದಷ್ಟು ಪ್ರಕರಣಗಳನ್ನು ಕೇವಲ 5 ತಿಂಗಳಲ್ಲಿ ಪತ್ತೆಹಚ್ಚಿ 2020ರಲ್ಲಿ 2786 ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಮಹಾನಗರಗಳಲ್ಲಿ ಹುಕ್ಕಾ ಬಾರ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಹುಕ್ಕಾ ಬಾರ್‌ಗಳಿಗೆ ಅನುಮತಿ ನೀಡುತ್ತಿವೆ. ಅವುಗಳನ್ನು ನಿಷೇಧ ಮಾಡಲು ಸ್ಥಳೀಯ ಸಂಸ್ಥೆಗಳು ಸಹಕಾರ ನೀಡಬೇಕು. ಬೇರೆ ರಾಜ್ಯಗಳಲ್ಲಿ ಹುಕ್ಕಾ ಬಾರ್ ನಿಯಂತ್ರಿಸಲು ಯಾವ ಕ್ರಮಗಳನ್ನು ಕೈಗೊಂಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಪಡೆದುಕೊಂಡು ರಾಜ್ಯದಲ್ಲಿಯೂ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.