7 ಬೃಹತ್ ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ: ಸಚಿವ ಬೊಮ್ಮಾಯಿ
Team Udayavani, May 28, 2021, 6:45 AM IST
ಬೆಂಗಳೂರು: ರಾಜ್ಯದ 4,647 ಗ್ರಾಮೀಣ ಜನವಸತಿ ಹಾಗೂ 27 ಪಟ್ಟಣ ಪ್ರದೇಶಗಳ 6.768.85 ಕೋ. ರೂ. ಮೊತ್ತದ 7 ಬೃಹತ್ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಗುರುವಾರ ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಹಾಗೂ ನಬಾರ್ಡ್ ನೆರವಿನೊಂದಿಗೆ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಸುಮಾರು 6 ಲಕ್ಷ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈಗ ಸಚಿವ ಸಂಪುಟದ ಅನುಮೋದನೆ ದೊರೆತಿದ್ದು, 1,431 ಕೋ. ರೂ. ವೆಚ್ಚದ ಈ ಮಹತ್ವದ ಮೊದಲ ಹಂತದ ಯೋಜನೆಗೆ ಹಾಗೂ ಎರಡನೇ ಹಂತದಲ್ಲಿ 954.51.ಕೋ.ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೆ ಸಂಪುಟ ಒಪ್ಪಿಗೆ ನೀಡಿದೆ.
ಇದರಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ 788 ಜನವಸತಿಗಳು, ಬೈಂದೂರು, ಪಡುವರೆ ಹಾಗೂ ಯಡ್ತರೆ ಪಟ್ಟಣಗಳಿಗೆ 396 ಕೋ. ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳೂ ಸೇರಿವೆ ಎಂದರು.
ಜಮೀನು ಕಳೆದುಕೊಂಡವರಿಗೆ ಉದ್ಯೋಗ ಮೀಸಲಾತಿ :
ವಿವಿಧ ಯೋಜನೆಗಳಿಗೆ ಜಮೀನು ಕಳೆದುಕೊಂಡವರಿಗೆ ಸರಕಾರಿ ಉದ್ಯೋಗಗಳಲ್ಲಿ ಶೇ. 5ರಷ್ಟು ಮೀಸಲಾತಿ ನೀಡುವ ಪ್ರಕ್ರಿಯೆಯನ್ನು ಇನ್ನೂ 25 ವರ್ಷಗಳ ಕಾಲ ಮುಂದುವರಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ನೀಡಿರುವ ಸಲಹೆಗೆ ಸಂಪುಟ ಸಹಮತ ವ್ಯಕ್ತಪಡಿಸಿದೆ ಎನ್ನಲಾಗಿದೆ.
ನೀನು ಸುಮ್ಮನಿರಪ್ಪ :
ಹಾಸನ ವೈದ್ಯಕೀಯ ಕಾಲೇಜಿನ ಅಭಿ ವೃದ್ಧಿ ಬಗ್ಗೆ ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ ನೀಡುತ್ತಿದ್ದಾಗ, “ನೀನು ಹೇಳಿದೆಲ್ಲ ಆಗಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಮಾಧುಸ್ವಾಮಿ ಲಘು ಧಾಟಿಯಲ್ಲಿ ಹೇಳಿದ್ದು, ಆಗ ನೀನು ಸುಮ್ಮನಿರಪ್ಪ ಎಂದು ಸಿಎಂ ಹೇಳಿದರು.
ಎಂಆರ್‌ಐ ಮೆಷಿನ್ :
ಕೋವಿಡ್ ಸೋಂಕಿತರಿಗಾಗಿ ಸರಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಮಷಿನ್ ಕೊರತೆ ಇರುವುದರಿಂದ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಮೆಷಿನ್ ಅಳವಡಿಸಲು ಕಾರಜೋಳ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.
ಪ್ರಮುಖ ನಿರ್ಣಯಗಳು :
ಕರ್ನಾಟಕ ಕೃಷಿ ಪೀಡೆ ಮತ್ತು ರೋಗಗಳು 2021 ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ.
ಕರ್ನಾಟಕ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಎನರ್ಜಿ ಸ್ಟೋರೇಜ್ ಪಾಲಿಸಿ 2017ಕ್ಕೆ ಒಪ್ಪಿಗೆ.
2011ರ ಕೆಪಿಎಸ್‌ಸಿ ಪ್ರೊಬೆಷನರಿ ನೇಮಕದ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರ ವಿರುದ್ಧದ ತನಿಖೆಗೆ ನಿರಾಕರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.