![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Feb 11, 2022, 9:35 PM IST
ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ಫೆ.14ರ ವರೆಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ರಜೆ ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್‌ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ.
ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಹಿಂಸಾಚಾರ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯ ವಿಶ್ವವಿದ್ಯಾಲಯ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಕಾಲೇಜು, ಡಿಪ್ಲೋಮಾ ಕಾಲೇಜುಗಳಿಗೆ ಅನ್ವಯವಾಗುವಂತೆ ನೀಡಿರುವ ರಜೆಯನ್ನು ಫೆ.16 ವರೆಗೆ ಮುಂದುವರೆಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿ ಕೋರಿಕೆ. ಮಾಹಿತಿಗಾಗಿ: pic.twitter.com/sa2a5jKxM4
— Dr. Ashwathnarayan C. N. (@drashwathcn) February 11, 2022
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.