ಪದವಿ ತರಗತಿಗಳು ನಾಳೆ ಆರಂಭ
Team Udayavani, Nov 16, 2020, 6:12 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಕಾರಣಕ್ಕಾಗಿ ಮಾರ್ಚ್‌ನಿಂದ ಮುಚ್ಚಿರುವ ಪದವಿ, ವಿಶ್ವವಿದ್ಯಾನಿಲಯಗಳ ತರಗತಿ ಕೊಠಡಿಗಳ ಬಾಗಿಲುಗಳು ಮಂಗಳವಾರದಿಂದ ಸಕಲ ಸುರಕ್ಷಾ ಕ್ರಮದೊಂದಿಗೆ ತೆರೆಯಲಿವೆ ಮತ್ತು ಬೋಧನ ಚಟುವಟಿಕೆಗಳು ನಡೆಯಲಿವೆ. ಜತೆಗೆ 2020-21ನೇ ಸಾಲಿನ ಶೈಕ್ಷಣಿಕ ವರ್ಷವೂ ಅಧಿಕೃತವಾಗಿ ಮಂಗಳವಾರದಿಂದಲೇ ಆರಂಭವಾಗಲಿದೆ.
ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ವಿ.ವಿ.ಗಳು ಹಾಗೂ ಕಾಲೇಜು ಆಡಳಿತ ಮಂಡಳಿಗಳು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿವೆ. ತರಗತಿ ಕೊಠಡಿಯ ಬೋಧನೆಯ ಜತೆಗೆ ಆನ್‌ಲೈನ್ ಹಾಗೂ ಆಫ್ಲೈನ್ ಬೋಧನೆಗಳು ನಿರಂತರವಾಗಿರಲಿವೆ. ಸುರಕ್ಷತಾ ಕ್ರಮವಾಗಿ ಕಾಲೇಜು ಆವರಣವನ್ನು ಸ್ಯಾನಿಟೈಸ್ ಮಾಡುವ ಕಾರ್ಯ ಆರಂಭವಾಗಿದೆ.
ಕಡ್ಡಾಯವಲ್ಲ
ವಿದ್ಯಾರ್ಥಿಗಳು ಕಾಲೇಜಿಗೆ ಬರಲೇಬೇಕು ಎಂಬ ಕಡ್ಡಾಯ ನಿಯಮವಿಲ್ಲ. ಹಾಗೆಯೇ ವಿದ್ಯಾರ್ಥಿಗಳು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂದು ಆಡಳಿತ ಮಂಡಳಿಗಳು ಒತ್ತಡ ಹೇರುವಂತಿಲ್ಲ. ಬಹುತೇಕ ವಿಶ್ವವಿದ್ಯಾನಿಲಯಗಳು ನ. 17ರಿಂದ ಪದವಿಯ 5ನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿ ನಡೆಸಲಿವೆ. ಉಳಿದಂತೆ ಎಲ್ಲ ವಿದ್ಯಾರ್ಥಿಗಳಿಗೂ ಆನ್‌ಲೈನ್ ಹಾಗೂ ಆಫ್ಲೈನ್ ವ್ಯವಸ್ಥೆಯಲ್ಲೇ ಬೋಧನೆ ಮುಂದುವರಿಯಲಿವೆ. ಪದವಿಯ 5ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪದವಿಯ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಭೌತಿಕ ತರಗತಿಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ ಆನ್‌ಲೈನ್ ಬೋಧನಾ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸರಕಾರದ ಸೂಚನೆಯಂತೆ ನ. 17ರಿಂದ ತರಗತಿ ಆರಂಭಿಸಲು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೂ ಸೂಚನೆ ನೀಡಿದ್ದೇವೆ. ಎಸ್‌ಒಪಿ ಅನುಷ್ಠಾನ ಸೇರಿ ಕಾಲೇಜಿನ ಪ್ರವೇಶದ್ವಾರದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಿದ್ದೇವೆ.
-ಡಾ| ಪಿ.ಎಸ್. ಯಡಪಡಿತ್ತಾಯ ಕುಲಪತಿ, ಮಂಗಳೂರು ವಿ.ವಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.