Gram Panchayat; ಗ್ರಾಮಸಭೆ ಕಡ್ಡಾಯ: ಕಾರ್ಯಾಚರಣೆ ಮಾರ್ಗಸೂಚಿ ಪ್ರಕಟ
1 ವರ್ಷದಲ್ಲಿ 2 ಸಭೆ ಕಡ್ಡಾಯ: ಪ್ರಿಯಾಂಕ್ ಖರ್ಗೆ
Team Udayavani, Oct 8, 2024, 6:52 AM IST
ಬೆಂಗಳೂರು: ಗ್ರಾಮ ಪಂಚಾಯತ್‌ಗಳಲ್ಲಿ ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾ ಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾ.ಪಂ.ಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾ.ಪಂ. ಅಧ್ಯಕ್ಷರು ನಡೆಸಬೇಕು. ಒಂದು ವರ್ಷದಲ್ಲಿ 2 ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಪ್ರತೀ ಆರ್ಥಿಕ ವರ್ಷದಲ್ಲಿ ಜನವರಿ ತಿಂಗಳ 26, ಎಪ್ರಿಲ್‌ನಲ್ಲಿ 24, ಆಗಸ್ಟ್‌ನಲ್ಲಿ 15 ಮತ್ತು ಅಕ್ಟೋಬರ್ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಬೇಕು. 1 ವರ್ಷದಲ್ಲಿ 1 ವಿಶೇಷ ಮಹಿಳಾ ಗ್ರಾಮಸಭೆ ಮತ್ತು 1 ಮಕ್ಕಳ ಗ್ರಾಮ ಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಮಾರ್ಗಸೂಚಿಯಲ್ಲೇನಿದೆ?
ವಿಧಾನಸಭೆಗಳಲ್ಲಿ ಪಾಲ್ಗೊಳ್ಳಬೇಕಾದ ಇಲಾಖಾಧಿಕಾರಿಗಳು-ನೌಕರರ ವಿವರಗಳನ್ನು ಈ ಮಾರ್ಗಸೂಚಿ ಹೊಂದಿದೆ. ಗ್ರಾ.ಪಂ. ಪ್ರದೇಶದಲ್ಲಿ ಅನುಷ್ಠಾನಗೊಳಿಸಬೇಕಾದ ಯೋಜನೆಗಳ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಆದ್ಯತೆಯ ನಿರ್ಧಾರ, ಪಡಿತರ ವಿತರಣೆ, ವೃದ್ಧಾಪ್ಯ ವೇತನ, ವಿಶೇಷ ಚೇತನರ ವೇತನ, ವಿಧವಾ ವೇತನ ಹಾಗೂ ಇನ್ನಿತರ ಸಾಮಾಜಿಕ ಭದ್ರತಾ ಯೋಜನೆಗಳ ವಿವರ ಸಂಗ್ರಹ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿ ಮುಖ್ಯವಾಹಿನಿಗೆ ತಂದ ಬಗ್ಗೆ ಚರ್ಚೆ, ಆಸ್ಪತ್ರೆ ಹಾಗೂ ಪಶುವೈದ್ಯ ಶಾಲೆಗಳ ಚಟುವಟಿಕೆಗಳ ಮಾಹಿತಿ, ಜನರ ಹಾಗೂ ಜಾನುವಾರುಗಳ ಆರೋಗ್ಯದ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ನೀರು ಸರಬರಾಜು ವ್ಯವಸ್ಥೆಯನ್ನು ನಿರ್ವಹಿಸಲು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯಿಂದ ಗ್ರಾಮಕ್ಕೆ ಮಾಡಿದ ವೆಚ್ಚ ಹಾಗೂ ಕೈಗೊಂಡ ಕ್ರಮ, ಶೌಚಾಲಯಗಳ ನಿರ್ಮಾಣ ಮಾಹಿತಿ, ಸಹಾಯಧನ ನೀಡಿರುವ ವಿವರ, ಅಂಗನವಾಡಿ ಕೇಂದ್ರದ ಚಟುವಟಿಕೆಗಳ ಬಗ್ಗೆ ಚರ್ಚೆ, ಪಂಚಾಯತ್‌ನ ವಿವಿಧ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗ್ರಾಮದ ಫಲಾ ನುಭವಿಗಳ ಆಯ್ಕೆ ಮಾಡಲು ಗ್ರಾಮ ಸಭೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.