ಗ್ರಾಮ ಪಂಚಾಯತ್ ಚುನಾವಣೆ: ಮೊದಲ ಹಂತದ ಮತದಾನ ಆರಂಭ
Team Udayavani, Dec 22, 2020, 7:26 AM IST
ಮಣಿಪಾಲ: ರಾಜ್ಯದಲ್ಲಿ ಇಂದು ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ನಡೆಯುತ್ತಿದೆ. ರಾಜ್ಯದ 117 ತಾಲೂಕುಗಳ 3019 ಗ್ರಾಮ ಪಂಚಾಯತಿಗಳಲ್ಲಿ ಇಂದು ಮತದಾನ ನಡೆಯುತ್ತಿದೆ.
ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಐದರವರೆಗೆ ನಡೆಯಲಿದೆ. ಕರಾವಳಿ ಭಾಗದಲ್ಲಿ ಮುಂಜಾನೆಯ ಚಳಿಯ ನಡುವೆಯೂ ಜನರು ಮತಗಟ್ಟೆಯ ಕಡೆ ಸಾಗುತ್ತಿರುವ ದೃಶ್ಯಗಳು ಕಂಡುಬಂದವು.
ಕೋವಿಡ್-19 ಸೋಂಕು ಭೀತಿಯ ಕಾರಣ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಮತದಾನ ನಡೆಸಲಾಗುತ್ತಿದೆ. ಚುನಾವಣೆಗೆ ಸಂಬಂಧಿಸಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಸಿಆರ್ ಪಿಸಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅವಧಿ ಮುಗಿದ 5,728 ಗ್ರಾ.ಪಂ.ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಿಗದಿಪಡಿಸಿ ರಾಜ್ಯ ಚುನಾವಣ ಆಯೋಗ ನ. 30ಕ್ಕೆ ಅಧಿಸೂಚನೆ ಹೊರಡಿಸಿತ್ತು. ಮೊದಲ ಹಂತದ ಚುನಾವಣೆಗೆ ಡಿ. 22ಕ್ಕೆ ಮತದಾನ ನಡೆಯಲಿದೆ. ಇದಕ್ಕಾಗಿ 1,64,550 ನಾಮಪತ್ರಗಳು ಸ್ವೀಕೃತವಾಗಿದ್ದವು. 1,57,735 ನಾಮಪತ್ರಗಳು ಕ್ರಮಬದ್ಧವಾಗಿದ್ದವು. ನಾಮಪತ್ರ ಪರಿಶೀಲನೆ ಬಳಿಕ 40,352 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈಗ 43,238 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಅದಕ್ಕಾಗಿ 1,17,383 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.