ಮಾಸಾಂತ್ಯಕ್ಕೆ ಗ್ರಾಪಂ ಚುನಾವಣೆಗೆ ಮುಹೂರ್ತ
5,800 ಗ್ರಾಪಂಗಳಿಗೆ ನಡೆಯಲಿದೆ ಚುನಾವಣೆ | ಪ್ರತಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಮತದಾನ
Team Udayavani, Nov 23, 2020, 1:18 PM IST
ಬೆಂಗಳೂರು: ಸರ್ಕಾರ ಹಾಗೂ ಚುನಾವಣಾ ಆಯೋಗದ ನಡುವಿನ ಕಾನೂನು ಸಂಘರ್ಷಕ್ಕೆ ಹೈಕೋರ್ಟ್ ತೆರೆ ಎಳೆದ ಬಳಿಕ ಸಿದ್ಧತೆಗಳನ್ನು ಚುರುಕುಗೊಳಿಸಿರುವ ರಾಜ್ಯ ಚುನಾವಣಾ ಆಯೋಗ, ಈ ಮಾಸಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ನಿಗದಿಪಡಿಸುವ ಸಾಧ್ಯತೆಯಿದೆ.
ನವೆಂಬರ್ ಕೊನೇ ವಾರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವುದಾಗಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ಸಂಭಾವ್ಯ ವೇಳಾಪಟ್ಟಿಯಲ್ಲಿ ಚುನಾವಣಾ ಆಯೋಗ ಹೇಳಿತ್ತು. ಈ ಮಧ್ಯೆ ಮೂರು ವಾರಗಳಲ್ಲಿ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ಹೈಕೋರ್ಟ್ ನ.13ಕ್ಕೆ ಆದೇಶಿಸಿದೆ.
ಅದರಂತೆ ಡಿಸೆಂಬರ್ 4ಕ್ಕೆ ಮೂರು ವಾರಗಳು ಆಗಲಿವೆ. ಹೀಗಾಗಿ, ಮೂರು ವಾರಗಳಲ್ಲಿ ದಿನಾಂಕ ಪ್ರಕಟಿಸಬೇಕಾಗಿರುವುದರಿಂದ ಈ ತಿಂಗಳ ಅಂತ್ಯಕ್ಕೆಅಥವಾ ಡಿಸೆಂಬರ್ ಮೊದಲ ವಾರದಲ್ಲಿ 5,800ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ. ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ ಒಂದು ವಾರದಲ್ಲಿ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಹೈಕೋರ್ಟ್ ಆದೇಶದ ಬಳಿಕ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ.
ಎರಡು ಹಂತಗಳಲ್ಲಿ ಚುನಾವಣೆ: ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನುಕೈಗೊಳ್ಳಬೇಕಾಗಿರುವುದರಿಂದ ಮತ್ತು ಸಾಮಾಜಿಕಅಂತರ ಪಾಲಿಸಬೇಕಾಗಿರುವುದರಿಂದ ಜನ ದಟ್ಟಣೆ ಕಡಿಮೆ ಮಾಡಲು ಮತ್ತು ಚುನಾವಣಾ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಯ ಸಂಚಾರ, ಪ್ರಯಾಣಕ್ಕೆ ಮಿತಿ ಹಾಕಲು ಜಿಲ್ಲೆಗಳ ಮಟ್ಟದಲ್ಲಿ 2 ಹಂತಗಳಲ್ಲಿ ತಾಲೂಕುಗಳನ್ನು ವಿಭಜಿಸಿ ಚುನಾವಣೆ ನಡೆಸಿದರೆ ಸೂಕ್ತ ಎಂದು ಜಿಲ್ಲಾಡಳಿತ ಅಭಿಪ್ರಾಯಟ್ಟಿದೆ. ಅದರಂತೆ ಜಿಲ್ಲೆಗಳ ಮಟ್ಟದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ತೀರ್ಮಾನಿಸಿದೆ.
ಅಂದರೆ,ಒಂದು ಜಿಲ್ಲೆಯಲ್ಲಿಆರು ತಾಲೂಕುಗಳಿದ್ದರೆ, ಮೊದಲ ಹಂತದಲ್ಲಿ 3 ಮೂರು ಎರಡನೇ ಹಂತದಲ್ಲಿ ಮೂರು ತಾಲೂಕುಗಳಲ್ಲಿ ಚುನಾವಣೆ ನಡೆಯುತ್ತಿದೆ. ಅದರಂತೆ, ಎರಡೂ ಹಂತಗಳಲ್ಲೂ ಎಲ್ಲಾ 30 ಜಿಲ್ಲೆಗಳಲ್ಲೂ ಚುನಾವಣೆ ನಡೆಯುತ್ತದೆ ಎಂದು ಆಯೋಗದ ಅಧಿಕಾರಿಗಳು ವಿವರಿಸಿದ್ದಾರೆ.
90 ಸಾವಿರ ಸದಸ್ಯ ಸ್ಥಾನಗಳಿಗೆ ಚುನಾವಣೆ : 2015ರಲ್ಲಿ 176 ತಾಲೂಕುಗಳ 5,855 ಗ್ರಾಪಂಗಳಿಗೆ 2 ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗಿತ್ತು. ಈಗ 226 ತಾಲೂಕುಗಳ 5,800 ಗ್ರಾಪಂಗಳ 35 ಸಾವಿರ ಕ್ಷೇತ್ರಗಳ 93 ಸಾವಿರಕ್ಕೂ ಹೆಚ್ಚು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಬೇಕಾಗಿದೆ. ಇದಕ್ಕಾಗಿ ಸಾಮಾನ್ಯ ಪರಿಸ್ಥಿತಿಯಲ್ಲಿ 40 ಸಾವಿರ ಮತಗಟ್ಟೆಗಳು ಸ್ಥಾಪಿಸಬೇಕಾಗುತ್ತದೆ. 2 ಲಕ್ಷ ಚುನಾವಣಾ ಸಿಬ್ಬಂದಿ ಬೇಕು. ಆದರೆ,ಕೋವಿಡ್ ಹಿನ್ನೆಲೆಯಲ್ಲಿ10 ಸಾವಿರ ಹೆಚ್ಚುವರಿ ಮತಗಟ್ಟೆಗಳು ಸ್ಥಾಪಿಸಬೇಕು, ಅದಕ್ಕೆ ತಕ್ಕಂತೆ 50 ಸಾವಿರ ಹೆಚ್ಚುವರಿ ಚುನಾವಣಾ ಸಿಬ್ಬಂದಿ, 10 ಸಾವಿರ ಪೊಲೀಸ್ ಸಿಬ್ಬಂದಿ, 50 ಸಾವಿರ ಆರೋಗ್ಯ ಕಾರ್ಯಕರ್ತೆಯರು ಬೇಕು. ಹೆಚ್ಚುವರಿ ಮತಗಟ್ಟೆಗಳ ಸ್ಥಾಪನೆಗೆ 35 ಕೋಟಿ, ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲು20ಕೋಟಿ ಹಾಗೂ ಸಾರಿಗೆ ವ್ಯವಸ್ಥೆಗೆ10ಕೋಟಿ ಸೇರಿ ಹೆಚ್ಚುವರಿಯಾಗಿ 65 ಕೋಟಿ ರೂ. ಬೇಕಾಗುತ್ತದೆ ಎಂದು ಆಯೋಗ ಲೆಕ್ಕಚಾರ ಹಾಕಿದೆ. ಚುನಾವಣೆ ನಡೆಸಲು ಅಯೋಗವು ಸರ್ಕಾರಕ್ಕೆ 250ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿತ್ತು.
ಗ್ರಾಪಂ ಚುನಾವಣೆಗೆ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೂರು ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದೆ. ಅದರಂತೆ ಕ್ರಮಕೈಗೊಳ್ಳಲಾಗುವುದು. ಪ್ರತಿ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು. –ಡಾ. ಬಿ. ಬಸವರಾಜು, ರಾಜ್ಯ ಚುನಾವಣಾ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.