ಮುಖ್ಯಮಂತ್ರಿಯಿಂದ ಸರ್ಟಿಫಿಕೇಟ್ ಪಡೆಯಲು ಗ್ರಾಮವಾಸ್ತವ್ಯ ನಡೆಸ್ತಿಲ್ಲ
Team Udayavani, Nov 11, 2017, 5:03 PM IST
ಬೆಂಗಳೂರು: ವಿಕಾಸ ವಾಹಿನಿ ವಾಹನದಲ್ಲೇ ಕಮೋಡ್ ಇದೆ. ಗ್ರಾಮ ವಾಸ್ತವ್ಯಕ್ಕೆ ಹೋದ ಕಡೆ ಕಮೋಡ್ ಒಯ್ಯುತ್ತಾರೆಂಬ ಮುಖ್ಯಮಂತ್ರಿ ಹೇಳಿಕೆಗೆ ಸಿದ್ದರಾಮಯ್ಯ ಅವರಿಂದ ಸರ್ಟಿಫಿಕೇಟ್ ಪಡೆಯಲು ನಾನು ಗ್ರಾಮ ವಾಸ್ತವ್ಯ ನಡೆಸುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮವಾಸ್ತವ್ಯದ ಬಗ್ಗೆ ನಾನು ಸಿದ್ದರಾಮಯ್ಯ ಅವರಿಂದ ನೀತಿ ಪಾಠ ಹೇಳಿಸಿಕೊಳ್ಳಬೇಕಿಲ್ಲ. ಚಿಕ್ಕಮಗಳೂರಿನಲ್ಲಿ ದಲಿತರ ಮನೆಯಲ್ಲಿದ್ದ ಹಾಸಿಗೆ, ದಿಂಬು ಉಪಯೋಗಿಸಿದ್ದೆ. ಆ ಬಗ್ಗೆ ಮಾಹಿತಿ ಪಡೆದು ಮಾತಾಡಲಿ,
ಜೆಡಿಎಸ್ ಯಾತ್ರೆಗೆ ದೊರೆಯುತ್ತಿರುವ ಸ್ಪಂದನೆ ನೋಡಿ ಸಿದ್ದರಾಮಯ್ಯ ಅವರಿಗೆ ಸಹಿಸಲು ಆಗುತ್ತಿಲ್ಲ ಎಂದರು. ಮೊದಲ ಹಂತದ ವಿಕಾಸಯಾತ್ರೆ ಯಶಸ್ವಿಯಾಗಿದ್ದು, ಜೆಡಿಎಸ್ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. ಎರಡನೇ ಹಂತದ ಯಾತ್ರೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾರಂಭಿಸಲಿದ್ದೇನೆ ಎಂದು ಹೇಳಿದರು.
ಟಿಕೆಟ್‌ಗೆ ಒತ್ತಡ ಹಾಕುತ್ತಿಲ್ಲ: ಪ್ರಜ್ವಲ್
ಕೆ.ಆರ್.ಪೇಟೆ: “ನಾನು ಜೆಡಿಎಸ್ ಟಿಕೆಟ್ ಆಕಾಂಕ್ಷಿ ನಿಜ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸಲೇಬೇಕೆಂಬ ಹಠ ತೊಟ್ಟು ಯಾರ ಮೇಲೂ ಒತ್ತಡ ಹಾಕುತ್ತಿಲ್ಲ’ ಎಂದು ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಈ ಚುನಾವಣೆಯಲ್ಲಿ ದೇವೇಗೌಡರು ಸ್ಪರ್ಧಿಸು ಎಂದರಷ್ಟೇ ಸ್ಪರ್ಧಿಸುವೆ. ಈಗ ಬೇಡ ಸುಮ್ಮನಿರು ಎಂದರೆ ಸಂಘಟನೆಯಲ್ಲಿ ತೊಡಗುವೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು’ ಎಂದರು.
ಸಿಂಧ್ಯಾ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ
ಬೆಂಗಳೂರು: ಸಕ್ರಿಯ ರಾಜಕಾರಣಕ್ಕೆ ಮರಳಿದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಹುದ್ದೆ ನೀಡಲಾಗಿದೆ. ಜೆಪಿ ಭವನದಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಸಿಂಧ್ಯಾ ನೇಮಕಾತಿ ಪ್ರಕಟಿಸಿದರು. ಸಿಂಧ್ಯಾ ಜನತಾಪರಿವಾರದ ಹಿರಿಯ ಮುಖಂಡರಾಗಿದ್ದು ರಾಷ್ಟ್ರ ಮಟ್ಟದ ಪಕ್ಷ ಸಂಘಟನೆಯಲ್ಲಿ ನನ್ನ ಜತೆಗೂಡಲಿದ್ದಾರೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Healthy Recipe: ಹಳೇ ಕಾಲದ ರುಚಿ; ಈ ರೆಸಿಪಿ ಮಾಡದಿದ್ದರೆ ಒಮ್ಮೆಯಾದ್ರು ಮಾಡಿ ನೋಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.