ಅನುದಾನ ಹಂಚಿಕೆ ವಿಚಾರ: ಕೆಲವು ಸಚಿವರಿಗೇ ಅತೃಪ್ತಿ?
Team Udayavani, Feb 13, 2024, 6:35 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಕೆಲವು ಸಚಿವರು ಮತ್ತು ಶಾಸಕರ ಕ್ಷೇತ್ರಕ್ಕೆ 1,200 ಕೋಟಿ ರೂ. ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿರುವುದು ಸಚಿವರ ನಡುವೆಯೇ ಕಸಿವಿಸಿಗೆ ಕಾರಣವಾಗಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆರೆ ನೀರು ತುಂಬಿಸುವುದಕ್ಕೆ ಬರೋಬ್ಬರಿ 1,200 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ಸೂಚಿಸ ಲಾಗಿತ್ತು. ಲೋಕಸಭೆ ಚುನಾವಣೆ ಸಮೀಪಿಸು ತ್ತಿರುವಂತೆಯೇ ಈ ವಿಚಾರ ಆಡಳಿತ ಪಕ್ಷದಲ್ಲಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡುವುದಕ್ಕೆ ಸಮಸ್ಯೆ ಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮಜಾಯಿಶಿ ನೀಡುತ್ತಿರುವ ಮಧ್ಯೆಯೇ ಆಯ್ದ ಸಚಿವರು ಹಾಗೂ ಶಾಸಕರ ಕ್ಷೇತ್ರಗಳಿಗೆ ಭರಪೂರ ಅನುದಾನ ಲಭಿಸು ತ್ತಿದೆ. ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಪ್ರತಿ ನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆರೆ ತುಂಬಿಸುವುದಕ್ಕೆ 800 ಕೋಟಿ ರೂ. ಹಾಗೂ ಕುಣಿಗಲ್ ಶಾಸಕ ರಂಗನಾಥ್ ಕ್ಷೇತ್ರಕ್ಕೆ 400 ಕೋಟಿ ರೂ. ಬಿಡುಗಡೆ ಮಾಡುವುದಕ್ಕೆ ಕಳೆದ ತಿಂಗಳು ಕೊನೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿರುವುದು ಈಗ ಹಿರಿಯ ಸಚಿವರಲ್ಲಿ ಅಸಮಾಧಾನ ಸೃಷ್ಟಿಸಿದೆ.
ಹೆಬ್ಟಾಳ್ಕರ್ ಕ್ಷೇತ್ರವೊಂದಕ್ಕೇ 800 ಕೋಟಿ ರೂ. ಅನುದಾನ ಬಿಡುಗಡೆ ಸಚಿವ ಸತೀಶ್ ಜಾರಕಿಹೊಳಿ ಕೋಪಕ್ಕೆ ಕಾರಣವಾಗಿದೆ. ಅವರು ಸಿಎಂ ಸಿದ್ದರಾಮಯ್ಯ ಬಳಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವಾರ ಹಿರಿಯ ಸಚಿವರು ನಡೆಸಿದ ಉಪಾಹಾರ ಸಭೆಯಲ್ಲೂ ಈ ವಿಚಾರ ಪ್ರಸ್ತಾವವಾಗಿದೆ ಎನ್ನಲಾಗಿದೆ. ಈ ನಡುವೆ ಲೋಕಸಭೆ ಚುನಾವಣೆ ಬಳಿಕ ಮತ್ತೆ ರಾಜ್ಯದಲ್ಲಿ ಮತ್ತಷ್ಟು ಡಿಸಿಎಂ ಹುದ್ದೆಗಳನ್ನು ರಚಿಸುವ ಬಗ್ಗೆ ಬೇಡಿಕೆ ಕೇಳಿಬರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.