ಗೃಹಲಕ್ಷ್ಮೀ ಮಾರ್ಗಸೂಚಿ: ಐಟಿ, ಜಿಎಸ್‌ಟಿ ರಿಟರ್ನ್ಸ್‌ದಾರರಿಗೆ ಇಲ್ಲ
Team Udayavani, Jul 19, 2023, 6:11 AM IST
ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ಪಾವತಿಸಲು ಮುಂದಾಗಿರುವ ಗೃಹಲಕ್ಷ್ಮೀ ಯೋಜನೆ ಸಂಬಂಧ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.
ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯಜಮಾನಿ ಅಥವಾ ಅವಳ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ ಎಂದು ಸರಕಾರ ಮಾರ್ಗಸೂಚಿ ಹೊರಡಿಸಿದೆ.
ಬೇಕಾದ ದಾಖಲೆಗಳು
ಪಡಿತರ ಚೀಟಿಯ ಸಂಖ್ಯೆ. ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್‌ಬುಕ್/ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ
ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತೀ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.