‘Gruha Lakshmi’ ಯೋಜನೆಗೆ ಚಾಲನೆ; 1.9 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂ.

ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗಿ

Team Udayavani, Aug 30, 2023, 5:11 PM IST

1-fasdsad

ಮೈಸೂರು: ಕಾಂಗ್ರೆಸ್ ಚುನಾವಣ ಪೂರ್ವ ಗ್ಯಾರಂಟಿ ಗಳಲ್ಲಿ ಒಂದಾದ ‘ಗೃಹ ಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಯಿತು. ಮನೆಯ ಯಜಮಾನಿಯರಾಗಿರುವ ಸುಮಾರು 1.9 ಕೋಟಿ ಮಹಿಳೆಯರ ಖಾತೆಗಳಿಗೆ ಮಾಸಿಕ 2,000 ರೂ. ಜಮೆಯಾಗಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಸಾವಿರಾರು ಜನರು ಪಾಲ್ಗೊಂಡಿದ್ದರು.

ನಮ್ಮ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬರುತ್ತಿದ್ದಂತೆ ಭರವಸೆ ನೀಡಿದ 5 ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ನುಡಿದಂತೆ ನಡೆಯುತ್ತಿದೆ. ಪ್ರತಿ ಕುಟುಂಬದ ಅಭಿವೃದ್ಧಿಯ ಬೇರು ಎಂಬಂತಿರುವ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶವನ್ನು ಗೃಹಲಕ್ಷ್ಮೀ ಯೋಜನೆ ಹೊಂದಿದೆ. ಹಾಗಾಗಿ, ಗೃಹಲಕ್ಷ್ಮೀ ಯು ನಮ್ಮ ಯೋಜನೆಯಲ್ಲ, ಇದು ನಿಮ್ಮ ಯೋಜನೆ. ರಕ್ಷಾ ಬಂಧನ ಹಬ್ಬದಂದು ನಮ್ಮ ರಾಜ್ಯದ ಹೆಣ್ಣುಮಕ್ಕಳಿಗೆ ನಾವು ‘ಗೃಹಲಕ್ಷ್ಮಿ’ಯನ್ನು ಕೊಡುಗೆಯಾಗಿ ಕೊಟ್ಟಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಕರ್ನಾಟಕದಲ್ಲಿ ಪಕ್ಷ ಅಧಿಕಾರಕ್ಕೆ ಬಂದ 100 ದಿನಗಳ ಸಂಭ್ರಮ ಆಚರಿಸುತ್ತಿದ್ದು, ನಾಲ್ಕು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಬೆಲೆಯೇರಿಕೆಯಿಂದ ನಲುಗಿರುವ ಜನಸಾಮಾನ್ಯರ ಮೇಲಿನ ಹೊರೆ ಇಳಿಸಲು ಕಾಂಗ್ರೆಸ್‌ ಸರ್ಕಾರ ಮಹತ್ವದ ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದು ಕಾಂಗ್ರೆಸ್ ಹೇಳಿದೆ.

ಈಗಾಗಲೇ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಯ ಮೂಲಕ 200 ಯೂನಿಟ್‌ವರೆಗೂ ಉಚಿತ ವಿದ್ಯುತ್‌ ಪಡೆಯುತ್ತಿದ್ದಾರೆ. ಅನ್ನಭಾಗ್ಯದ ಮೂಲಕ ಬಡ ಕುಟುಂಬದ ಪ್ರತೀ ಸದಸ್ಯರೂ ತಲಾ 10 ಕೆಜಿ ಅಕ್ಕಿ ಪಡೆಯುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂಲಕ ಮನೆಯ ಯಜಮಾನಿಯರು ಮಾಸಿಕ 2ಸಾವಿರ ರೂ. ಪಡೆಯಲಿದ್ದಾರೆ.
ಇಂತಹ ಗ್ಯಾರಂಟಿ ಯೋಜನೆಗಳು ದೇಶದ ಇನ್ಯಾವ ರಾಜ್ಯಗಳಲ್ಲೂ ಜಾರಿಯಾಗಿಲ್ಲ. ಹಾಗಾಗಿ ಇದು ಕರ್ನಾಟಕದ ಮಾದರಿಯಾಗಿದೆ. ಇನ್ನಷ್ಟು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ‘ಗೃಹ ಲಕ್ಷ್ಮೀ’ ಯೋಜನೆಗೆ ಸರಕಾರ 17,500 ಕೋಟಿ ರೂ.ಮೀಸಲಿಟ್ಟಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.