ಗೃಹಲಕ್ಷ್ಮೀ ಯೋಜನೆಯ ಅರ್ಜಿ ಫಾರ್ಮ್ ಬಿಡುಗಡೆ ಮಾಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ
ನಕಲಿ ಫಾರ್ಮ್ ಹರಿದಾಡುತ್ತಿದ್ದು, ಎಚ್ಚರಿಕೆಯಿಂದಿರಿ
Team Udayavani, Jul 18, 2023, 7:12 PM IST
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ನಕಲಿ ಅರ್ಜಿಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.