ಮಂಕಿಪಾಕ್ಸ್ ನಿರ್ವಹಣೆಗೆ ಮಾರ್ಗಸೂಚಿ ಪ್ರಕಟ
Team Udayavani, Jul 21, 2022, 10:26 PM IST
ಬೆಂಗಳೂರು: ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಮಂಕಿಪಾಕ್ಸ್ ಸೋಂಕಿನ ಲಕ್ಷಣ ಹೊಂದಿರುವ ಪ್ರಯಾಣಿಕರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಪ್ರ
ಮುಖವಾಗಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ ಮಂಕಿಪಾಕ್ಸ್ ತಪಾಸಣೆಗೆ ಅಗತ್ಯ ಕ್ರಮ ವಹಿಸಬೇಕು. ಪ್ರಯಾಣಿಕರಲ್ಲಿ ಜ್ವರ, ಚಳಿ ಮತ್ತು ಬೆವರುವಿಕೆ, ತಲೆನೋವು, ಮೈಕೈನೋವು, ಸುಸ್ತು, ಗಂಟಲು ಉರಿ, ಕೆಮ್ಮು, ಚರ್ಮದ ಮೇಲೆ ದದ್ದಗಳು ಕಂಡುಬಂದರೆ ಅವರನ್ನು ಕೂಡಲೇ ಪ್ರಾಥಮಿಕ ಪರೀಕ್ಷೆಗೆ ಒಳಪಡಿಸಿ, ಪ್ರತ್ಯೇಕವಾಗಿರಿಸಿ ಅವರ ಸೋಂಕು ಪರೀಕ್ಷೆಗೆ ಕ್ರಮ ಕೈಗೊಳ್ಳಬೇಕು. ಶಂಕಿತರು/ಸೋಂಕಿತರನ್ನು ಬೆಂಗಳೂರಿನಲ್ಲಿ ಇಂದಿರಾನಗರದಲ್ಲಿರುವ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ, ಮಂಗಳೂರಿನಲ್ಲಿ ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಗಳಲ್ಲಿ ದಾಖಲಿಸಬೇಕು. ಸೋಂಕು ದೃಢಪಟ್ಟರೆ ಅಲ್ಲಿಯೇ 21 ದಿನ ಚಿಕಿತ್ಸೆ ನೀಡಬೇಕು.
ಮಾದರಿ ಸಂಗ್ರಹ ಹೇಗೆ? :
ಸೋಂಕು ಲಕ್ಷಣ ಇದ್ದವರಲ್ಲಿ ದದ್ದುಗಳಿಲ್ಲದಿದ್ದರೆ ರಕ್ತ, ಸೀರಂ, ಗಂಟಲು/ಮೂಗಿನ ದ್ರವ, ಮೂತ್ರದ ಮಾದರಿ ಸಂಗ್ರಹಿಸಬೇಕು. ದದ್ದುಗಳಿದ್ದರೆ ಅಂತವರಿಂದ ಹೆಚ್ಚುವರಿಯಾಗಿ ದ್ರವ, ಗಾಯಗಳ ದ್ರವ ಮಾದರಿಯನ್ನು ಸಂಗ್ರಹಿಸಬೇಕು. ಪರೀಕ್ಷೆಗೆಂದು ಬೆಂಗಳೂರಿನ ರಾಷ್ಟ್ರೀಯ ವೈರಾಣು ಸಂಸ್ಥೆ ಅಥವಾ ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಬೇಕು.
ಗಡಿಯಲ್ಲೂ ತಪಾಸಣೆ :
ಗಡಿಯಲ್ಲಿರುವ ರಾಜ್ಯ ಪ್ರವೇಶ ಸ್ಥಳಗಳಲ್ಲಿ ಶಂಕಿತರ ಪತ್ತೆಗೆ ಆರೋಗ್ಯ ತಪಾಸಣ ತಂಡಗಳನ್ನು ನೇಮಿಸಬೇಕು. ಜತೆಗೆ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬಂದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರೋಗ್ಯ ಕಾರ್ಯಕರ್ತರು ಶಂಕಿತ ಪ್ರಕರಣಗಳನ್ನು ಗುರುತಿಸಲು ಸೂಚಿಸಬೇಕು. ಶಂಕಿತರ ಪ್ರಕರಣಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಬೇಕು. ಈ ನಿಟ್ಟಿನಲ್ಲಿ ಅವರೆಲ್ಲರಿಗೂ ಅಗತ್ಯ ತರಬೇತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.