![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 11, 2022, 5:09 PM IST
ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗಥಾನ್ ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ಗಿನ್ನೆಸ್ ದಾಖಲೆ ನಿರ್ಮಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿದ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಯೋಗಥಾನ್ ಆಯೋಜಿಸುತ್ತಿದೆ. ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹೆಚ್ಚಿನ ಶಕ್ತಿ ತುಂಬಿರುತ್ತಾರೆ. ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ 5 ಲಕ್ಷ ಜನರು ಸೇರಿ ಆಗಸ್ಟ್ 28 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಸೇರಿ ‘ಯೋಗಥಾನ್’ ನಡೆಸಲಿದ್ದು, ಗಿನ್ನೀಸ್ ವಿಶ್ವದಾಖಲೆಗೆ ಪ್ರಯತ್ನಿಸಲಾಗುವುದು ಎಂದರು.
ಯೋಗಕ್ಕೆ ಕ್ರೀಡೆಯ ಮಾನ್ಯತೆ ನೀಡಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ನಲ್ಲಿ ಅಳವಡಿಸಲಾಗಿತ್ತು. ಈ ಯೋಗಥಾನ್‌ಗೆ ಖ್ಯಾತ ಚಲನಚಿತ್ರ ನಟ ಶ್ರೀ ರಮೇಶ್ ಅರವಿಂದ್ ಬ್ರ್ಯಾಂಡ್ ಅಂಬಾಸಿಡರ್ ಆಗಿ ರಾಯಭಾರಿಯಾಗಿದ್ದಾರೆ. ಯೋಗದ ತವರೂರಾದ ಭಾರತ ಅದರಲ್ಲೂ ಕರ್ನಾಟಕದಲ್ಲಿ ಯೋಗವನ್ನು ಮನೆ-ಮನೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ, ಎಂಎಲ್‌ಸಿ ಗೋವಿಂದರಾಜು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಎನ್‌ವೈಕೆ ನಿರ್ದೇಶಕ ನಟರಾಜ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.