ಗುಜರಾತ್ ಮಾದರಿ ಸಂಪುಟಕ್ಕೆ ಆಗ್ರಹ; ಸಂಕ್ರಾಂತಿಗೆ ಸಿಹಿ ನಿರೀಕ್ಷೆಯಲ್ಲಿ ಆಕಾಂಕ್ಷಿಗಳು
Team Udayavani, Dec 30, 2021, 7:10 AM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗುಜರಾತ್ ಮಾದರಿಯ ಸಂಪುಟ ಪುನಾರಚನೆಯ ಬೇಡಿಕೆ ಆರಂಭವಾಗಿದೆ. ಈಗಾಗಲೇ ಅಧಿಕಾರ ಅನುಭವಿಸಿರುವ ಸಚಿವರನ್ನು ಕೈಬಿಟ್ಟು ಸಂಪೂರ್ಣ ಹೊಸ ಸಂಪುಟ ರಚನೆ ಮಾಡಬೇಕೆಂಬ ಆಗ್ರಹ ಜೋರಾಗಿದೆ. ಸಂಕ್ರಾಂತಿ ಹೊತ್ತಿಗೆ ಸಿಹಿ ಸುದ್ದಿ ಸಿಗುತ್ತದೆ ಎಂಬ ನಿರೀಕ್ಷೆ ಸಚಿವಾಕಾಂಕ್ಷಿಗಳಲ್ಲಿದೆ.
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಬಹುತೇಕ ಹೊಸ ಮುಖಗಳಿಗೆ ಅವಕಾಶ ಸಿಗುತ್ತದೆ ಎಂದು ನಿರೀಕ್ಷಿಸ ಲಾಗಿತ್ತು. ಆದರೆ ಕೇವಲ ಆರು ಮಂದಿ ಹೊಸಬ ರಿಗೆ ಮಾತ್ರ ಅವಕಾಶ ಸಿಕ್ಕಿತ್ತು.
ಈಗ ಯಡಿಯೂರಪ್ಪ ಸಂಪುಟ ದಲ್ಲಿ ಎರಡು ವರ್ಷ ಪೂರೈಸಿ, ಬಸವ ರಾಜ ಬೊಮ್ಮಾಯಿ ಅವರ ಸಂಪುಟ ದಲ್ಲಿಯೂ ಸಚಿವರಾಗಿ ಮುಂದು ವರಿದ ಹಿರಿಯರನ್ನು ಕೈ ಬಿಡಬೇಕೆಂಬ ಶಾಸಕರ ಒತ್ತಡ ಪಕ್ಷದ ನಾಯಕರಿಗೆ ಬಿಸಿ ತುಪ್ಪವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಶಾಸಕರ ಈ ಬೇಡಿಕೆಯಿಂದಾಗಿ ಹಿರಿಯ ಸಚಿವರಿಗೆ ಇರಿಸುಮುರಿಸು ಉಂಟಾಗಿದ್ದು, ತಮ್ಮ ಆಪ್ತರ ಬಳಿ ಅಸಮಾಧಾನವನ್ನೂ ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಖಾಲಿ ಸ್ಥಾನ ಭರ್ತಿ ಮಾಡಿ
ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕೆಂಬ ಒತ್ತಡದ ಜತೆಗೆ ಸಂಪೂರ್ಣ ಹೊಸ ಸಂಪುಟ ರಚನೆ ಬೇಡಿಕೆಯೂ ಹೆಚ್ಚಾಗಿದೆ. ಬಿಜೆಪಿ ಉನ್ನತ ಮೂಲಗಳ ಪ್ರಕಾರ ಜ.9ರ ಬಳಿಕ ಸಂಕ್ರಾಂತಿ ಹೊತ್ತಿಗೆ ಏನಾದರೂ ಬದಲಾವಣೆಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಹಾಲಿ ಸರಕಾರಕ್ಕೆ ಒಂದೂವರೆ ವರ್ಷ ಮಾತ್ರ ಅಧಿಕಾರ ಉಳಿದಿದೆ. ಈಗ ಸರಕಾರ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಬೇಸರ ಆಡಳಿತ ಪಕ್ಷದ ಶಾಸಕರಲ್ಲಿದೆ. ತಮ್ಮ ಕ್ಷೇತ್ರಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬಾರದಿರುವುದು, ಘೋಷಣೆ ಯಾಗಿರುವ ಯೋಜನೆಗಳು ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬ ಆರೋಪವೂ ಕೇಳಿಬರುತ್ತಿದೆ. ಆಡಳಿತವನ್ನು ಚುರುಕುಗೊಳಿಸಲು ಹೊಸಬರಿಗೆ ಅವಕಾಶ ಕಲ್ಪಿಸಿ, ಹಿರಿಯ ರನ್ನು ಪಕ್ಷ ಸಂಘಟನೆಗೆ ಬಳಸಿ ಕೊಳ್ಳಬೇಕೆಂಬ ವಾದವಿದೆ. ಆದರೆ ವಿಧಾನ ಮಂಡಲದ ಜಂಟಿ ಅಧಿವೇಶನ, ಬಜೆಟ್ ಅಧಿವೇಶನ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಎದುರಾಗುವುದರಿಂದ ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಮಾಡಿದರೆ ಜೇನುಗೂಡಿಗೆ ಕಲ್ಲು ಹೊಡೆದಂತಾಗುತ್ತದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಇದನ್ನೂ ಓದಿ:ದಲಿತರ ರಕ್ಷಣೆಗೆ ಸರಕಾರ ಬದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಂಪುಟದಿಂದ ಕೈಬಿಡುವ ಹಿರಿಯರ ಸಾಲಿನಲ್ಲಿ ನನ್ನ ಹೆಸರಿದ್ದರೆ ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನಾನು ಪಕ್ಷದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುವ ಕಾರ್ಯಕರ್ತ.
– ಕೆ.ಎಸ್. ಈಶ್ವರಪ್ಪ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.