ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ರಕ್ಷಣೆ ಇಲ್ಲದಂತಾಗುತ್ತದೆ: ದೇವೇಗೌಡ
Team Udayavani, May 14, 2020, 5:32 PM IST
ಬೆಂಗಳೂರು: ಎಪಿಎಂಸಿಯ ಕಾಯಿದೆಯನ್ನು ತಿದ್ದುಪಡಿಯ ಮೂಲಕ ದುರ್ಬಲಗೊಳಿಸಿದರೆ ರೈತರು ಶೋಷಣೆಗೊಳಗಾದಾಗ ಯಾವುದೇ ರಕ್ಷಣೆ ನೀಡಲು ಸಾಧ್ಯವಾಗದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ರೀತಿ ಏಕಾಏಕಿ ತೀರ್ಮಾನ ಕೈಗೊಂಡರೆ ರೈತರು ಸಂಕಷ್ಟಕ್ಕೀಡಾಗುವರು ಮಧ್ಯವರ್ತಿಗಳ ಕಪಿಮುಷ್ಟಿಯಿಂದ ಎಪಿಎಂಸಿ ಕಾಯ್ದೆ ರೈತರಿಗೆ ತಕ್ಕ ಮಟ್ಟಿನ ರಕ್ಷಣೆ ನೀಡಿತ್ತು ಆದರೆ ಎಪಿಎಂಸಿಯ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಂಡವಾಳಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದ ರೈತರು ಶೋಷಣೆಗೊಳಗಾಗುವ ಅಪಾಯವಿದೆ ಎಂದಿದ್ದಾರೆ.
ಇಡೀ ರಾಜ್ಯ ಕೋವಿಡ್-19 ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆಯ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರೋದು ಸರಿಯಲ್ಲ. ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ದೇವೇ ಗೌಡರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.