![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 8, 2022, 7:42 PM IST
ಸಿಂಧನೂರು: ದೇಶದಲ್ಲಿ ಮೋದಿ ಅವರು ಬಂದು 8 ವರ್ಷ ಆಯ್ತು. ಈ ಹಿಂದೆ ಹಲವರು ಇದ್ದರು. ಆಗ ಇಲ್ಲದ ಗಲಾಟೆಗಳು ಈಗ ಯಾಕೆ? ಇದಕ್ಕೆ ರಾಷ್ಟ್ರೀಯ ಪಕ್ಷಗಳೇ ಉತ್ತರಿಸಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ನಗರದ ಸಕ್ರ್ಯೂಟ್ ಹೌಸ್‍ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಹಿಂದೂ ದೇವಾಲಯಗಳಲ್ಲಿ ಪ್ರತಿದಿನ ಸುಪ್ರಬಾತ ಹಾಕಲಾಗುತ್ತದೆ. ಮಸೀದಿಗಳಲ್ಲಿ ಆಜಾನ್ ಕೂಗಲಾಗುತ್ತದೆ. ಆದ್ರೆ ಈಗ ಗಲಾಟೆ ಆಗುತ್ತಿದೆ ಅಂದ್ರೆ ಯಾಕೆ? ನಾನು ಇದಕ್ಕೆ ಹೆಚ್ಚಿನ ಮಹತ್ವ ಕೊಡುವುದಿಲ್ಲ. ರಾಜಕೀಯವಾಗಿ ಬಳಸಿಕೊಳ್ಳಲು ಇಂತಹ ವಾತಾವರಣ ಸೃಷ್ಟಿಸಿ, ಜನರನ್ನು ವಿಭಜಿಸುವ ಹುನ್ನಾರಕ್ಕೆ ರಾಷ್ಟ್ರೀಯ ಪಕ್ಷಗಳು ಕೈ ಹಾಕಿದಂತಾಗಿದೆ. ದೇಶದಲ್ಲಿ ಶಾಂತಿ ಇರಬೇಕಾದರೆ, ರಾಷ್ಟ್ರೀಯ ಪಕ್ಷಗಳ ಜವಾಬ್ದಾರಿ ಮುಖ್ಯವಾಗುತ್ತದೆ. ಆದರೆ, ಅವರು ತಮ್ಮ ಶಕ್ತಿ ಬಲಪಡಿಸಿಕೊಳ್ಳಲು ಪ್ರಯತ್ನಿಸಿದ್ರೆ, ಮುಂದಿನ ಪರಿಣಾಮ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು ಎಂದರು.
ಇದನ್ನೂ ಓದಿ: ಪಿಎಸ್‌ಐ ಹಗರಣದ ಪಿತಾಮಹ ಮುಖ್ಯಮಂತ್ರಿ ಬೊಮ್ಮಾಯಿ : ಡಿಕೆಶಿ ಗಂಭೀರ ಆರೋಪ
ಯಾರ ವಿರುದ್ಧ ಪೈಪೋಟಿಯಲ್ಲ:
ಈವರೆಗೂ ನಮ್ಮ ಹಕ್ಕಿನ ನೀರನ್ನು ಬಳಸಿಕೊಳ್ಳಲು ಆಗಿಲ್ಲ. ಮಹಾದಾಯಿಯಲ್ಲಿ 13 ಟಿಎಂಸಿ ಟ್ರಿಬ್ಯುನಲ್ ಅಡಾಪ್ಟ್ ಮಾಡಿದ್ದರು. ಈವರೆಗೂ 5 ಟಿಎಂಸಿ ನೀರು ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಗೋವಾ, ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇವೆ. ಆದರೂ, ನಮ್ಮ ನೀರನ್ನು ಬಳಸಿಕೊಳ್ಳುವ ಶಕ್ತಿ, ಯೋಗ್ಯತೆ ಇದೆಯಾ? ಗೋವಾದಲ್ಲಿ ಎರಡು ಎಂಪಿಗಳಿದ್ದಾರೆ. ಎಲೆಕ್ಷನ್ ಆದ್ಮೇಲೆ ಸರಿ ಹೋಗುತ್ತದೆ ಎಂದಿದ್ದರು. ಅದು ಆಯಿತಾ? ಇಲ್ಲ. ನಾವು ಯಾರ ಮೇಲೂ ಪೈಪೋಟಿಗೆ ಹೋಗುವುದಿಲ್ಲ. ಬಿಜೆಪಿ ಇರ್ಲಿ, ಕಾಂಗ್ರೆಸ್ ಇರ್ಲಿ. ಅವರವು ರಾಷ್ಟ್ರೀಯ ಪಕ್ಷ. ಲಘುವಾಗಿ ಮಾತನಾಡಲು ಹೋಗಲ್ಲ. ನಮ್ಮ ರಾಜ್ಯದಲ್ಲಿನ ನದಿಗಳ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಜೆಡಿಎಸ್‍ನಿಂದ ರಾಜ್ಯದಲ್ಲಿ ಜಲಧಾರೆ ಕಾರ್ಯಕ್ರಮ ಮಾಡಲಾಗಿದೆ ಎಂದರು.
ಹಿಡಿಯಲು ಆಗಲ್ಲ:
ಪಕ್ಷಾಂತರ ಪರ್ವದ ವಿಚಾರದ ಬಗ್ಗೆ ಕೇಳಿದಾಗ, ಹೋಗುವಂಥವವರನ್ನು ಹಿಡಿದುಕೊಳ್ಳಲು ಆಗಲ್ಲ. ಜೆಟಿಡಿ ಹೋಗ್ತಾರೆ ಅಂದ್ರು. ಅವರು ಹೋದ್ರಾ? ಜೆಡಿಎಸ್‍ನಲ್ಲೇ ಇದ್ದಾರೆ ಎಂದರು.
ಪಿಎಸ್‍ಐ ನೇಮಕಾತಿ ಹಗರಣದ ಬಗ್ಗೆ ಕೇಳಿದಾಗ ಆ ಬಗ್ಗೆ ಗೊತ್ತಿಲ್ಲ. ಹೀಗಾಗಿ, ಮಾತನಾಡಲು ಹೋಗುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಜೆಡಿಎಸ್ ಶಾಸಕರಾದ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ಜೆಡಿಎಸ್ ಮುಖಂಡರು ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.