![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 1, 2021, 9:05 AM IST
ಬೆಂಗಳೂರು: ಭೂಮಂಡಲ ಇರುವಷ್ಟು ದಿನ ಕನ್ನಡವಿರುತ್ತದೆ. ಕನ್ನಡ ಇರುವಷ್ಟು ದಿನ ಅಪ್ಪು ಇರುತ್ತಾರೆ. ಈ ವರ್ಷ ಕನ್ನಡದ ಹಬ್ಬವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಿಸುತ್ತಾ, ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಗತ್ತಿನ ಸಮಸ್ತ ಕನ್ನಡಿಗರಿಗೆ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮೆಲ್ಲರ ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವಾಗಲಿ. ಉಸಿರಿನ ಪ್ರತಿ ಕಣಕಣದಲ್ಲೂ ಕನ್ನಡವಿರಲಿ. ನಮ್ಮ ಆಶಯವೇ ಇದಾಗಿರಲಿ ಎಂದಾಗಿರಲಿ.
1500 ವರ್ಷಗಳಿಗೂ ಹೆಚ್ಚು ಘನ ಇತಿಹಾಸವುಳ್ಳ ಕನ್ನಡ, ಶಾಸ್ತ್ರೀಯ ಸ್ಥಾನ ಅಲಂಕರಿಸಿದ ಅಭಿಜಾತ ಕನ್ನಡ, ಅಷ್ಟ ಜ್ಞಾನಪೀಠಗಳ ಮೇರುಗನ್ನಡ, ನಮ್ಮ ಬದುಕು-ಬಾಳ್ವೆಯ ತಾಯ್ಗನ್ನಡ. ಕನ್ನಡವೆಂದರೆ ಬರೀ ಭಾಷೆಯಲ್ಲ, ನಮ್ಮ ಪಾಲಿನ ದೇವಭಾಷೆ. ನಮ್ಮ ಮನಸು-ಕನಸುಗಳನ್ನು ಅರಳಿಸಿ ಭವಿಷ್ಯದ ರೆಕ್ಕೆಕೊಟ್ಟು ಹಾರಲು ಶಕ್ತಿ ತುಂಬುವ ಜೀವಭಾಷೆ ಎಂದಿದ್ದಾರೆ.
ಇದನ್ನೂ ಓದಿ:“ಅಗ್ನಿ-5′ ಪರೀಕ್ಷೆ ವೈಫಲ್ಯ ಮುಚ್ಚಿಡಲು ಭಾರತದ ಪ್ರಯತ್ನ: ಚೀನಾ ಆರೋಪ
ಕನ್ನಡಿಗರ ಮನೆ-ಮನದಲ್ಲೂ ಕನ್ನಡ ಬೆಳಗುತ್ತಿದೆ, ನಿಜ. ಆದರೆ, ನಮ್ಮ ಕಣ್ಮಣಿಯಾಗಿದ್ದ ಅಕ್ಕರೆಯ ಅಪ್ಪು, ಅಣ್ಣಾವ್ರ ಮುದ್ದಿನ ಕುಡಿ ಪುನೀತ್ ರಾಜಕುಮಾರ್ ಅವರು ಕನ್ನಡ ಹಬ್ಬಕ್ಕೆ ಮುನ್ನ ನಮನ್ನಗಲಿದ್ದಾರೆ. ನಮ್ಮೊಳಗೆ ಕನ್ನಡ ದೀಪವನ್ನು ಬೆಳಗುತ್ತಲೇ ಕಳೆದುಹೋದ ಯುವರತ್ನನ ಆದರ್ಶಗಳಿಗೆ ಅಗ್ರಪೀಠ ಹಾಕಿ ನಮಿಸೋಣ. ಆ ಮೂಲಕ ಪುನೀತರಾಗೋಣ ಎಂದು ಎಚ್ ಡಿಕೆ ಟ್ವೀಟ್ ಮಾಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.