ಆಯುಷ್ ಅಧಿಕಾರಿ ಹಿಂದಿ ಹೇಳಿಕೆ: ಕುಮಾರಸ್ವಾಮಿ ಆಕ್ರೋಶ
Team Udayavani, Aug 24, 2020, 10:02 AM IST
ಬೆಂಗಳೂರು: ಆಯುಷ್ ಇಲಾಖೆ ಕಾರ್ಯಕ್ರಮದಲ್ಲಿ ಅಧಿಕಾರಿಯೊಬ್ಬರು ಹಿಂದಿ ಬಾರದವರು ಹೊರಗೆ ಹೋಗಿ ಎಂದು ಹೇಳಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಆಯುಷ್ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಬೇತಿಯಲ್ಲಿ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ಹಿಂದಿ ಮಾತನಾಡಲು ಆಗದವರು ತರಬೇತಿಯಿಂದ ಹೊರನಡೆಯಬಹುದು ಎಂದು ಹೇಳಿರುವುದನ್ನು ಕುಮಾರಸ್ವಾಮಿ ಖಂಡಿಸಿದ್ದಾರೆ.
‘ಸಂವಿಧಾನಬದ್ಧ ಒಕ್ಕೂಟ ವ್ಯವಸ್ಥೆ’ ಎಂಬುದು ಈ ದೇಶದ ಒಗ್ಗಟ್ಟಿನ ಮಂತ್ರ. ಇಲ್ಲಿನ ಪ್ರತಿ ಭಾಷೆಗಳೂ ಒಕ್ಕೂಟ ವ್ಯವಸ್ಥೆಯ ಭಾಗ. ಹೀಗಿರುವಾಗ, ಹಿಂದಿ ಮಾತನಾಡಲು ಬಾರದ ಕಾರಣಕ್ಕೆ ತರಬೇತಿ ಕಾರ್ಯಕ್ರಮದಿಂದ ಹೊರ ಹೋಗಿ ಎಂಬುದು ಒಕ್ಕೂಟ ವ್ಯವಸ್ಥೆಯ ಉಲ್ಲಂಘನೆಯಲ್ಲವೇ? ಸಂವಿಧಾನ ವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಹಿಂದಿ ಬಾರದೆಂಬ ಕಾರಣಕ್ಕೆ ಕನ್ನಡಿಗರೂ ಸಹಿತ ಇತರ ಭಾಷೆಗಳ ಜನ ಈ ದೇಶದಲ್ಲಿ ಇನ್ನೆಷ್ಟು ತ್ಯಾಗ ಮಾಡಬೇಕು? ಹಿಂದಿ ಶ್ರೇಷ್ಠತೆಯ ಗೀಳಿನಲ್ಲಿರುವ ಆಯುಷ್ ಇಲಾಖೆಯ ಕಾರ್ಯದರ್ಶಿ ರಾಜೇಶ್ ಕೊಟೆಚಾ ವಿರುದ್ಧ ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಒಕ್ಕೂಟ ವ್ಯವಸ್ಥೆಯನ್ನು ಗೌರವಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.