ಸೀಟು ಹಂಚಿಕೆ ಗೊಂದಲ : ಪಕ್ಷದ ತುರ್ತುಸಭೆ ಕರೆದ ಹೆಚ್.ಡಿ.ಕೆ.
Team Udayavani, Mar 13, 2019, 8:32 AM IST
ಬೆಂಗಳೂರು: ಲೋಕಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸೀಟು ಹಂಚಿಕೆ ಗೊಂದಲ ಇನ್ನೂ ನಿವಾರಣೆಯಾಗಿಲ್ಲ. ಒಂದೆರಡು ಕ್ಷೇತ್ರಗಳಿಗೆ ಎರಡೂ ಪಕ್ಷಗಳ ನಡುವೆ ಜಗ್ಗಾಟ ಮುಂದುವರೆದಿದೆ. ಈ ಕುರಿತಾದಂತೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬುಧವಾರ ಸಾಯಂಕಾಲ 5 ಗಂಟೆಗೆ ಜೆ.ಡಿ.ಎಸ್. ಪಕ್ಷದ ತುರ್ತು ಸಭೆಯೊಂದನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಪಕ್ಷದ ಪ್ರಚಾರ ಸಮಿತಿ ಆಧ್ಯಕ್ಷ ವೈ.ಎಸ್.ವಿ. ದತ್ತಾ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಸದ್ಯಕ್ಕೆ ಮೈತ್ರಿ ಪಕ್ಷಗಳ ನಡುವೆ ಕಗ್ಗಂಟಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.