ಸದಾರಮೆ ನಾಟಕ ‘ಲಕ್ಕಿಡಿಪ್ ಸಿಎಂ’ ಕುಮಾರಸ್ವಾಮಿಗೆ ಹೊಸತಲ್ಲ: ಬಿಜೆಪಿ ವ್ಯಂಗ್ಯ
Team Udayavani, Apr 2, 2022, 3:46 PM IST
ಬೆಂಗಳೂರು: ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.
ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕವು, ಮಾನ್ಯ ಲಕ್ಕಿಡಿಪ್ ಸಿಎಂ ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಟೀಕಿಸಿದೆ.
ಇದನ್ನೂ ಓದಿ:ಬೆದರಿಕೆ ಹಿನ್ನೆಲೆ ಅಣ್ಣಾಮಲೈ ಗೆ ಭದ್ರತೆ ಹೆಚ್ಚಿಸಿದ ಕೇಂದ್ರ ಗೃಹ ಸಚಿವಾಲಯ
ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ ಎಂದು ಹೇಳಿದೆ.
ಮಾನ್ಯ #LuckyDipCM ಕುಮಾರಸ್ವಾಮಿ ಅವರೇ,
ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ.
ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ.
ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು.
ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ.
— BJP Karnataka (@BJP4Karnataka) April 2, 2022
ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಕರ್ನಾಟಕ ಬಿಜೆಪಿ ಟೀಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.