ಮುಗ್ಧಮನಸ್ಸಿಗೆ ʼಕೋಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಈ ಸರಣಿ ಕೊಲೆಗಳು: ಕುಮಾರಸ್ವಾಮಿ
ಡಬಲ್ ಎಂಜಿನ್ ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು: ಕುಮಾರಸ್ವಾಮಿ ಎಚ್ಚರಿಕೆ
Team Udayavani, Jul 29, 2022, 10:19 AM IST
ಬೆಂಗಳೂರು: ಮನೆ, ಮನಗಳಲ್ಲಿ ಮಾತ್ರ ಇರಬೇಕಿದ್ದ ಧರ್ಮವನ್ನು ʼವ್ಯಸನʼವನ್ನಾಗಿಸಿ ಕೈಗೆ ದೊಣ್ಣೆ, ಶೂಲ ಕೊಟ್ಟು ಯುವಕರ ನಿಷ್ಕಲ್ಮಶ ಮುಗ್ಧಮನಸ್ಸಿಗೆ ʼಕೋಮುಪ್ರಾಷನʼ ಮಾಡಿದ ದುಷ್ಪರಿಣಾಮವೇ ಸರಣಿ ಕೊಲೆಗಳು. ಧರ್ಮನಿರಪೇಕ್ಷತೆ ತತ್ತ್ವವನ್ನು ನಿರ್ನಾಮ ಮಾಡಿದ್ದೇ ಇದಕ್ಕೆಲ್ಲ ಮೂಲ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ವಿಚಾರವಾಗಿ ಟ್ವೀಟ್ ಮಾಡಿರುವ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕರಾವಳಿಯಲ್ಲಿ ಶಾಂತಿ ನೆಲೆಸಲಿ ಎಂಬ ಹ್ಯಾಷ್ ಟ್ಯಾಗ್ ನಡಿ ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕೆ, ಸೃಜನಶೀಲತೆ, ಉದ್ಯಮಶೀಲತೆ ತವರು ಕರಾವಳಿ ಈಗ ಕೊಲೆಗಳ ಆಡಂಬೋಲವಾಗಿದೆ. 10 ದಿನಗಳಲ್ಲಿ ಮೂರು ಕೊಲೆ! ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಂತರಿಕ ಭದ್ರತೆ ಸಂಪೂರ್ಣವಾಗಿ ಕುಸಿದಿರುವುದಕ್ಕೆ ಇದೇ ಸಾಕ್ಷಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಇದ್ದಾಗಲೇ ಮೂರನೇ ಕೊಲೆಯಾಗಿದೆ. ಅಷ್ಟರಲ್ಲಿ ಸಿಎಂ ಸಾಹೇಬರು ಜಿಲ್ಲೆಯಿಂದ ಕಾಲ್ಕಿತ್ತಿದ್ದಾರೆ. ಅಲ್ಲೇ ಉಳಿದು ಪರಿಸ್ಥಿತಿ ಅವಲೋಕಿಸಿ, ಕೊಲೆಗೆಡುಕರನ್ನು ಹಡೆಮುರಿ ಕಟ್ಟುವಂತೆ ಕಟ್ಟಾಜ್ಞೆ ಮಾಡುವ ಧೈರ್ಯವನ್ನು ತೋರಲಿಲ್ಲ. ಅವರ ಅಧೈರ್ಯಕ್ಕೆ ಕಾರಣವೇನು? ಕಾಣದ ಕೈಗಳ ಒತ್ತಡವೇನಾದರೂ ಉಂಟೇ ಎಂದು ಪ್ರಶ್ನಿಸಿದ್ದಾರೆ.
ಕರಾವಳಿ ಶಿಕ್ಷಣದ ಕಾಶಿ, ದೇಗುಲಗಳ ಪುಣ್ಯನೆಲ, ಪ್ರಾಕೃತಿಕ ಸೌಂದರ್ಯದ ಬೀಡು, ಪ್ರವಾಸೋದ್ಯಮದಲ್ಲಿ ಕರ್ನಾಟಕದ ಕೀರ್ತಿಕಳಸ. ಇಂಥ ನೆಲದಲ್ಲಿ ದಿನಕ್ಕೊಂದು ಕೊಲೆ! ಈ ಕೊಲೆಗಳನ್ನು ಹತ್ತಿಕ್ಕುವ ಬದಲು ಬೊಮ್ಮಾಯಿ ಅವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಿದ್ದಾರೆ. ಕರಾವಳಿ ಮತ್ತು ಕರ್ನಾಟಕವನ್ನು ʼಜಂಗಲ್ ರಾಜ್ʼ ಮಾಡುವ ಹುನ್ನಾರವಷ್ಟೇ ಇದು. ಮಸೂದ್, ಪ್ರವೀಣ್ ನೆಟ್ಟಾರು; ಈಗ ಫಾಸಿಲ್. ಇನ್ನೆಷ್ಟು ಕೊಲೆಗಳು ನಡೆದರೆ ಸರಕಾರಕ್ಕೆ ತೃಪ್ತಿ? ಸರಣಿ ಕೊಲೆಗಳಿಂದ ಕರಾವಳಿಗೆ ಮಾತ್ರವಲ್ಲ, ಕರ್ನಾಟಕದ ಪ್ರತಿಷ್ಠೆಗೆ ಪೆಟ್ಟು ಬಿದ್ದಿದೆ. ಈ ಅರಾಜಕತೆಯಿಂದ ಇಡೀ ಕರಾವಳಿಯ ಆರ್ಥಿಕತೆಯೇ ಬುಡಮೇಲಾಗುತ್ತಿದೆ. ಆದರೆ, ಬಿಜೆಪಿ ಸರಕಾರ ಸಾವಿನಲ್ಲೂ ʼಕೊಲೆಗೆಡುಕ ರಾಜಕಾರಣʼ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ @BJP4Karnataka ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ. 6/7
— H D Kumaraswamy (@hd_kumaraswamy) July 29, 2022
ಕೊಲೆಗಳ ಹಿಂದಿನ ಕಾರಣ ಬೇಧಿಸಿ ಕೊಲೆಗೆಡುಕರನ್ನು ಹತ್ತಿಕ್ಕುವ ಕೆಲಸ ಮಾಡಬೇಕಿದ್ದ ಬಿಜೆಪಿ ಸರಕಾರ, ಪ್ರತೀ ಕೊಲೆಗೂ ತಾನೇ ಮುಂದೆ ನಿಂತು ಹೊಸಹೊಸ ಟ್ವಿಸ್ಟ್ ನೀಡುತ್ತಿದೆ. ಸರಕಾರದ ಕೆಲಸ ಬಿಗಿ ಆಡಳಿತ ನಡೆಸುವುದೇ ಹೊರತು ಬೀದಿಯಲ್ಲಿ ನಿಂತು ಗಂಟಲು ಹರಿದುಕೊಳ್ಳುವುದಲ್ಲ. ಕರಾವಳಿಯಲ್ಲಿ ನೆಮ್ಮದಿ ನೆಲಸಬೇಕಾದರೆ, ಪೊಲೀಸ್ ವ್ಯವಸ್ಥೆಗೆ ಶಕ್ತಿ ತುಂಬಬೇಕು. ಕಾಣದ ಕೈಗಳ ಸಂಕೋಲೆಯಿಂದ ಇಲಾಖೆಯನ್ನು ಮುಕ್ತಗೊಳಿಸಿ ಅಧಿಕಾರಿಗಳು ಸ್ವತಂತ್ರವಾಗಿ ಕರ್ತವ್ಯ ನಿರ್ವಹಿಸುವ ವಾತಾವರಣ ನಿರ್ಮಿಸಬೇಕು. ಇಲ್ಲವಾದರೆ, ಡಬಲ್ ಎಂಜಿನ್ ಸರಕಾರಕ್ಕೆ ಜನರೇ ಬೆಂಕಿ ಹಾಕಿಯಾರು ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.