ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ? ಎಚ್ ಡಿಕೆ
Team Udayavani, Apr 14, 2021, 10:16 AM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್‌ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ 15 ದಿನಗಳ ಕಾಲ ಕರ್ಫ್ಯೂ: ತವರು ಸೇರಲು ಹೊರಟ ಕಾರ್ಮಿಕರು
ರೆಮ್‌ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್‌ಡಿಸಿವಿರ್‌ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ. ಈ ಮಧ್ಯೆ ರೆಮ್‌ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ ಎಂದು ಎಚ್ ಡಿಕೆ ಆರೋಪಿಸಿದ್ದಾರೆ.
ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ಮಾಜಿ ಸಿಎಂ ಎಚ್ ಡಿಕೆ ಹೇಳಿದ್ದಾರೆ.
ಇದನ್ನೂ ಓದಿ: ಜನರ ಆರೋಗ್ಯ ಮುಖ್ಯ,ಆದರೆ ನಂಬಿಕೆಗಳನ್ನು ಕಡೆಗಣಿಸಲಾಗದು: ಕುಂಭಮೇಳದ ಬಗ್ಗೆ ಉತ್ತರಾಖಂಡ್ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.