ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನುಇನ್ನು ದೇವರೇ ಕಾಪಾಡಬೇಕು: ಎಚ್ ಡಿಕೆ
Team Udayavani, May 1, 2021, 8:59 AM IST
ಬೆಂಗಳೂರು: ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳಿಗೆ ಸರ್ಕಾರ ಬೀಗ ಜಡಿಯಲ್ಲ ಎಂದಿದ್ದ ಮುಖ್ಯಮಂತ್ರಿಗಳು ಸದ್ದಿಲ್ಲದಂತೆ ಎಲ್ಲಾ ಜಿಲ್ಲಾ ಮತ್ತು ಕೆಲವು ತಾಲ್ಲೂಕು ಮಟ್ಟದ 71 ಕೇಂದ್ರಗಳ ಸಾಂತ್ವನ ಕೇಂದ್ರಗಳಿಗೆ ಬೀಗ ಜಡಿಸಿ ಮಾತು ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ 19 ಸಂಕಷ್ಟದಲ್ಲಿ ಸ್ತ್ರೀಯರಿಗೆ ಮತ್ತೊಂದು ಬರೆ ಎಳೆದಂತಾಗಿದೆ. ಕೌಟುಂಬಿಕ ಹಿಂಸಾಚಾರ ನಿಯಂತ್ರಿಸಿ ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ಒದಗಿಸುವ ವಿಶ್ವಸಂಸ್ಥೆಯ ಆಶಯ ಬದಿಗೊತ್ತಿರುವುದು ಖಂಡನೀಯ ಎಂದಿದ್ದಾರೆ.
ಕಳೆದ ಎರಡು ದಶಕಗಳಿಂದ ಸಾಂತ್ವನ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿನ ಸಾಂತ್ವನ ಕೇಂದ್ರಗಳು ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗಿ, ಆತ್ಮವಿಶ್ವಾಸ ಮೂಡಿಸುತ್ತಿವೆ. ರಾಜ್ಯದ ಪ್ರತಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಆರಂಭಗೊಂಡಿದ್ದ ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಿ ಅದೇಶ ಹೊರಡಿಸಿರುವುದು ದೂರು ದುಮ್ಮಾನ ಪರಿಹರಿಸುವವರು ಯಾರು ಎಂಬ ಪ್ರಶ್ನೆ ಎದುರಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಭಾರತ ಕೋವಿಡ್ ಸಂಕಷ್ಟದಲ್ಲಿದ್ದರೆ, ಲಡಾಖ್ ನಲ್ಲಿ ಕುತಂತ್ರವಾಡುತ್ತಿದೆ ಕಪಟಿ ಚೀನಾ!
ಸರ್ಕಾರದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆ ಲೈಂಗಿಕ ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ, ಕಾನೂನು ನೆರವು, ಸಲಹೆ ನೀಡುವ ಉದ್ದೇಶವನ್ನು ಹೊಂದಿದ್ದರೂ ಕರ್ನಾಟಕದಲ್ಲಿ ಅದು ಪೂರ್ಣ ಪ್ರಮಾಣದಲ್ಲಿ ಕಾರ್ಯ ಮಾಡುತ್ತಿಲ್ಲ. ಜಿಲ್ಲೆಗೆ ಕೇವಲ ಒಂದೇ ಒಂದು ಕೇಂದ್ರ ಇರುವ ಕಾರಣ ಎಲ್ಲರಿಗೂ ಸುಲಭವಾಗಿ ನೆರವು ಸಿಗಲು ಸಾಧ್ಯವಾಗುತ್ತಿಲ್ಲ ಎಂದು ಎಚ್ ಡಿಕೆ ಹೇಳಿದ್ದಾರೆ.
ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಮಹಿಳೆಯರ ಕಷ್ಟವನ್ನು ದೇವರೇ ಕಾಪಾಡಬೇಕಿದೆ. ಈ ಸಮಯದಲ್ಲಿ ಸಾಂತ್ವನ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವುದು ಸೂಕ್ತವಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕೂಡಲೇ ಅದೇಶ ಹಿಂಪಡೆದು ಸಾಂತ್ವನ ಕೇಂದ್ರಗಳನ್ನು ಮುಂದುವರೆಸಿ, ಶೋಷಿತ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳು ಆಸರೆಯಾಗಲಿ ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.