ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ
Team Udayavani, Oct 16, 2021, 9:54 AM IST
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ʼಅಹಿಂದʼ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ ʼಸಿದ್ದಹಸ್ತ ಶೂರರುʼ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ʼಅಲ್ಪಸಂಖ್ಯಾತರ ಅಂತ್ಯ ರಾಜಕಾರಣʼದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ. ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ʼಸಿದ್ದಹಸ್ತ ಸೂತ್ರಧಾರಿʼಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್ʼನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ ಎಂದಿದ್ದಾರೆ.
2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ!! ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ʼಸಿದ್ದಸೂತ್ರʼ ಹಣೆದಿದ್ದು ಯಾರು? ಈ ʼಸಿದ್ದಹಸ್ತರ ಸಿದ್ದಸೂತ್ರʼ ಅಲ್ಲಿಗೇ ನಿಲ್ಲುವುದಿಲ್ಲ. 2016ರಲ್ಲಿ ಹೆಬ್ಬಾಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಅಧಿಕೃತ ಟಿಕೆಟ್ ಕೊಡುತ್ತದೆ. ಆಗ ಭೈರತಿ ಸುರೇಶ್ ಪರ ಲಾಬಿ ಮಾಡಿದ್ದ ಸಿದ್ಧಕಲೆ ಸೂತ್ರಧಾರರು, ಅವರನ್ನೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಒಳಸುಳಿ ಸೃಷ್ಟಿಸಿ ಷರೀಫರ ಮೊಮ್ಮಗನನ್ನು ಸೋಲಿಸುತ್ತಾರೆ! 2023ರ ಚುನಾವಣೆಯಲ್ಲಿ ಭೈರತಿ ಸುರೇಶ್ʼಗೇ ಹೆಬ್ಬಾಳದ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ. ಹಾಗಾದರೆ ಜಾಫರ್ ಷರೀಫರ ಮೊಮ್ಮಗನ ಕಥೆ ಏನು? ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಈ ರಾಶಿಯವರಿಗೆ ಇಂದು ನಿರೀಕ್ಷೆಗೂ ಮೀರಿದ ಧನಾರ್ಜನೆ, ದಂಪತಿಗಳಲ್ಲಿ ಅನುರಾಗ ವೃದ್ಧಿ.
ಕಳೆದ ಲೋಕಸಭೆ ಚುನಾವಣೆ ನಂತರ ತಮಗೆ ಆಗುತ್ತಿರುವ ಅನ್ಯಾಯ ಪ್ರಶ್ನಿಸಿದ ರೋಷನ್ ಬೇಗ್ʼಗೆ ಶೋಕಾಸ್ ನೊಟೀಸ್ ನೀಡಿ, ತಮ್ಮನ್ನು ಬಹಿರಂಗವಾಗಿ ಪ್ರಶ್ನಿಸಿದರು ಎಂಬ ಕಾರಣಕ್ಕೆ ಅವರನ್ನು ಬೇಕಾಬಿಟ್ಟಿ ನಡೆಸಿಕೊಂಡು ಅಪಮಾನ ಮಾಡುತ್ತಾರೆ ಸಿದ್ದಹಸ್ತರು. ಕೊನೆಗೆ ರೋಷನ್ ಬೇಗ್ ಕಾಂಗ್ರೆಸ್ ಪಕ್ಷದಿಂದಲೇ ದೂರವಾಗುತ್ತಾರೆ. ಮೈಸೂರಿನ ಹಿರಿಯ ನಾಯಕ ತನ್ವೀರ್ ಸೇಠ್ ಅವರನ್ನು ಅಪಮಾನಕರವಾಗಿ ನಡೆಸಿಕೊಂಡಿದ್ದು ಇದೇ ಸಿದ್ದಹಸ್ತರು. ಅಲ್ಲಿನ ಪಾಲಿಕೆಯಲ್ಲಿ ಜಾತ್ಯತೀತ ಶಕ್ತಿಗಳನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ ತನ್ವೀರ್ ಮೇಲೆ ಕೂಗಾಡಿದ ಸಿದ್ದಸೂತ್ರ ಪ್ರವೀಣರು, ಇನ್ನಿಲ್ಲದ ಅಪಮಾನ ಮಾಡಿ ನಿಂದಿಸುತ್ತಾರೆ. ಈಗ ಆಡಿಯೋ ನೆಪದಲ್ಲಿ ಸಲೀಂ ಮೊಹಮದ್ ಬಲಿ ಪಡೆದಾಗಿದೆ. ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬಿಟ್ಟು ದೊಡ್ಡವರ ರಕ್ಷಣೆ ಮಾಡಲಾಗಿದೆ. ಸಲೀಂ ಹೇಳಿದ್ದೆಲ್ಲವನ್ನೂ ಕೇಳಿಕೊಂಡು ʼರಸಸ್ವಾದʼ ಮಾಡಿ ಪುಕ್ಕಟೆ ಮನರಂಜನೆ ಪಡೆದ ವ್ಯಕ್ತಿಗೆ ರಕ್ಷಣೆ ನೀಡಿ ಓರ್ವ ಅಲ್ಪಸಂಖ್ಯಾತ ನಾಯಕನನ್ನು 6 ವರ್ಷ ಉಚ್ಚಾಟಿಸಲಾಗಿದೆ. ಇದು ಯಾವ ಸೀಮೆ ನ್ಯಾಯ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಇದೇನಾ ಸಿದ್ದಹಸ್ತರೇ? ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುತ್ತಾ, ಸಾಧ್ಯವಾದರೆ ಆ ಮಗುವಿನ ಕತ್ತನ್ನೂ ಕುಯ್ಯುತ್ತಾ ನಡೆಸುತ್ತಿರುವ ಇಂಥ ನೀಚ ರಾಜರಾರಣ ಮುಸ್ಲೀಂ ಬಾಂಧವರಿಗೆ ಈಗ ಗೊತ್ತಾಗಿಬಿಟ್ಟಿದೆ. ಇಕ್ಬಾಲ್ ಸರಡಗಿ ಅವರನ್ನು ಸೋಲಿಸಿದಿರಿ, ಜಾಫರ್ ಷರೀಫರ ಮೊಮ್ಮಗನನ್ನು ಮುಗಿಸಿದಿರಿ, ರೋಷನ್ ಬೇಗ್ ವಿರುದ್ಧ ರೋಷ ತೀರಿಸಿಕೊಂಡಿರಿ, ತನ್ವೀರ್ ಸೇಠ್ ಮೇಲೆ ಹಗೆ ಸಾಧಿಸಿದಿರಿ, ಇನ್ನೊಬ್ಬರ ಮೇಲಿನ ಸೇಡನ್ನು ಬಡಪಾಯಿ ಸಲೀಂ ಮೇಲೆ ತಿರುಗಿಸಿ ಒಂದೇ ಕಲ್ಲಿನಲ್ಲಿ 2 ಹಕ್ಕಿ ಹೊಡೆದು ʼಕಿರಾತಕ ರಾಜಕಾರಣʼ ಮಾಡಿದಿರಿ. ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ. ಅಲ್ಪಸಂಖ್ಯಾತ ಬಾಂಧವರಿಗೆ ನಿಮ್ಮ ನಿಜಬಣ್ಣ ಗೊತ್ತಾಗಿದೆ ಸಿದ್ದಹಸ್ತರೇ. ನಿಮಗೆ ಪಾಠ ಕಲಿಸುವ ಜನತಾ ಪರ್ವ ಈಗಷ್ಟೇ ಆರಂಭವಾಗಿದೆ. ಕಾದು ನೋಡಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.