ದೇಶ ಕಟ್ಟಿದವರು ಮಾಡದ ತಪ್ಪಿಗೆ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ: HDK
Team Udayavani, Apr 7, 2020, 7:07 PM IST
ಬೆಂಗಳೂರು: ಲಾಕ್ ಡೌನ್ ಪರಿಣಾಮ ಮನೆ ಸೇರುವ ತವಕದಲ್ಲಿ ಕಟ್ಟಡ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಅವರು ವಿಶಾದ ವ್ಯಕ್ತಪಡಿಸಿದ್ದು, ದೇಶ ಕಟ್ಟಿದವರು, ಕಟ್ಟುವ ಕೆಲಸಕ್ಕೆ ಮಣ್ಣು, ಕಲ್ಲು, ಇಟ್ಟಿಗೆ ಹೊತ್ತವರು ತಾವು ಮಾಡದ ತಪ್ಪಿಗೆ ಅನ್ನಾಹಾರಗಳಿಲ್ಲದೇ ಸಾವಿಗೆ ಶರಣಾಗುತ್ತಿರುವುದು ವಿಧಿಯ ಕ್ರೂರ ವ್ಯಂಗ್ಯ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹುಟ್ಟೂರು ಸೇರಬೇಕೆಂಬ ಆಸೆಯೊಂದಿಗೆ ಹಸಿವಿನಲ್ಲೇ ರಾಯಚೂರಿನತ್ತ ಹೆಜ್ಜೆ ಹಾಕುತ್ತಿದ್ದ ಕಟ್ಟಡ ಕಾರ್ಮಿಕ ಮಹಿಳೆ ಗಂಗಮ್ಮ ಎಂಬುವರು ಮಾರ್ಗ ಮಧ್ಯೆ ಅನ್ನಾಹಾರವಿಲ್ಲದೆ, ಸಕಾಲಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟರೆಂಬ ಸುದ್ದಿ ತೀವ್ರ ನೋವುಂಟು ಮಾಡಿತು. ಗಂಗಮ್ಮ ಅವರ ಈ ಪ್ರಕರಣ ವಲಸೆ ಕಾರ್ಮಿಕರು, ಕೂಲಿಕಾರ್ಮಿಕರ ಬದುಕನ್ನು ಸಾಕ್ಷಿಕರಿಸುವಂತಿದೆ ಎಂದಿದ್ದಾರೆ.
ಗಂಗಮ್ಮ ಪ್ರಕರಣದಲ್ಲಿ ಕೂಲಿ ನೀಡದ ಗುತ್ತಿಗೆದಾರನೊಬ್ಬನದ್ದೇ ತಪ್ಪಿಲ್ಲ. ಸರ್ಕಾರದ್ದೂ ತಪ್ಪಿದೆ. ಕಾರ್ಮಿಕರ ಇಲಾಖೆಯಲ್ಲಿ ರೂ.8000 ಕೋಟಿ ಹಣವಿದೆ. ಆದರೆ ಇಂಥವರಿಗೆ ವಿನಿಯೋಗವಾಗುತ್ತಿಲ್ಲವೇಕೆ? ಆಕೆಯನ್ನು ಬಳ್ಳಾರಿ ಜಿಲ್ಲಾಡಳಿತ ನಿರಾಶ್ರಿತರ ಕ್ಯಾಂಪ್‌ನಲ್ಲಿ ಇರಿಸಿತ್ತಂತೆ. ಕ್ಯಾಂಪ್‌ನಲ್ಲಿದ್ದೂ ಆಕೆಗೆ ಆಹಾರ, ಚಿಕಿತ್ಸೆ ಸಿಗಲಿಲ್ಲ ಏಕೆ ಎಂದು ಎಚ್ ಡಿ ಕೆ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಲಾಕ್ ಡೌನ್ ಮಧ್ಯಮ ವರ್ಗ ಮತ್ತು ಶ್ರೀಮಂತರನ್ನು ಮನೆಯಲ್ಲಿ ಬಂಧಿಸಿಟ್ಟಿರಬಹುದು. ಆದರೆ ಕೂಲಿಕಾರ್ಮಿಕರನ್ನು, ವಲಸಿಗರನ್ನು ಬೀದಿಗೆ ತಳ್ಳಿದೆ. ಸರ್ಕಾರ ಕೂಡಲೇ ಇಂಥವರ ಕಡೆಗೂ ಗಮನ ಹರಿಸಬೇಕು. ದೂರದೂರುಗಳಿಗೆ ಹೆಜ್ಜೆ ಹಾಕಿರುವವರ ಬದುಕು ಬವಣೆಯನ್ನು ನೋಡಬೇಕು. ಮೃತ ಗಂಗಮ್ಮನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.