![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 28, 2022, 10:26 AM IST
ಬೆಂಗಳೂರು: ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.
ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ ಎಂದು ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.
ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಬಿಸಿ ತುಪ್ಪವಾದ ಕರಾವಳಿ ಹಿಂದುತ್ವ: ತನ್ನದೇ ಅಸ್ತ್ರ ತಿರುಮಂತ್ರ ಆಗಿದ್ದು ಹೇಗೆ?
ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ. ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.