ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ: ಕುಮಾರಸ್ವಾಮಿ ಕಳವಳ
Team Udayavani, Mar 7, 2021, 11:52 AM IST
ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿ ಎಸ್ ಟಿಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸೆಸ್ ರಾಜ್ಯಗಳ ಪ್ರಮುಖ ಆದಾಯದ ಮೂಲಗಳಲ್ಲೊಂದು. ಕೇಂದ್ರ ಸರ್ಕಾರ ಮಿತಿ ಮೀರಿದ ತೆರಿಗೆ ವಿಧಿಸುತ್ತದೆ ಮತ್ತು ರಾಜ್ಯಗಳಿಗಿಂತಲೂ ಅಧಿಕ ಆದಾಯವನ್ನು ಸಂಗ್ರಹಿಸುತ್ತದೆ. ಈಗ ಅದೂ ಸಾಲದು ಎಂಬಂತೆ ಪೆಟ್ರೋಲಿಯಂ ನ್ನು ಜಿಎಸ್ ಟಿಗೆ ತಂದು ರಾಜ್ಯಗಳು ಪಡೆಯುತ್ತಿರುವ ಆದಾಯವನ್ನೂ ಲಪಟಾಯಿಸುವ ತಂತ್ರವನ್ನು ಮಾಡಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಗಳು ಜಿಎಸ್ ಟಿ ವ್ಯವಸ್ಥೆಗೆ ಒಪ್ಪಿಗೆ ನೀಡಿದ ನಂತರ ನೀಡಬೇಕಿದ್ದ ಪಾಲು, ಪರಿಹಾರವನ್ನು ಕೇಂದ್ರ ಈವರೆಗೆ ಸರಿಯಾಗಿ ಕೊಟ್ಟಿಲ್ಲ. ಸಾವಿರಾರು ಕೋಟಿ ಬಾಕಿಯನ್ನು ಇನ್ನೂ ಉಳಿಸಿಕೊಂಡಿದೆ. ಬಾಕಿಗಾಗಿ ರಾಜ್ಯಗಳು ಕೇಂದ್ರವನ್ನು ಬೇಡಾಡಿ ಬಸವಳಿದಿವೆ. ಈಗ ಪೆಟ್ರೋಲಿಯಂ ಆದಾಯವನ್ನು ಕೇಂದ್ರಕ್ಕೆ ಒಪ್ಪಿಸಿದರೆ ರಾಜ್ಯಗಳ ಪಾಡು ಶೋಚನೀಯವಾಗಲಿದೆ. ರಾಜ್ಯಗಳು ಆದಾಯವಿಲ್ಲದೇ, ಅಭಿವೃದ್ಧಿ ಕಾರ್ಯಗಳಿಗೆ ಅನುದಾನವಿಲ್ಲದೇ ಸಂಕಷ್ಟ ಅನುಭವಿಸಬೇಕಾಗುತ್ತದೆ. ಕೊನೆಗೆ ಕೊರತೆ ಬಜೆಟ್ ಮಂಡಿಸಬೇಕಾಗುತ್ತದೆ. ಅಥವಾ ಬಜೆಟ್ ಗಾತ್ರವನ್ನೇ ಇಳಿಸಬೇಕಾದ ಸಂದರ್ಭ ಬರಲಿದೆ. ಇದು ಅಭಿವೃದ್ಧಿ ವಿಚಾರದಲ್ಲಿ ಹಿಂದಕ್ಕೆ ಓಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಇದರ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ದಕ್ಷಿಣೆ ಸ್ವೀಕಾರ ವಿಚಾರದಲ್ಲಿ ಗಲಾಟೆ: ದಾಸಯ್ಯನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಪೂಜಾರಿ!
ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದಕ್ಕೆ ಹಲವು ರಾಜ್ಯಗಳು ಈಗಾಗಲೇ ವಿರೋಧ ವ್ಯಕ್ತಪಡಿಸಿವೆ. ರಾಜ್ಯದ ಮುಖ್ಯಮಂತ್ರಿಗಳೂ ಈ ವಿಚಾರದಲ್ಲಿ ಆಕ್ಷೇಪಣಾ ಮನೋಭಾವ ತಳೆಯಬೇಕು. ರಾಜ್ಯದ ಪ್ರಮುಖ ನಾಯಕರೂ ಈ ವಿಚಾರವಾಗಿ ಈಗಿನಿಂದಲೇ ಪ್ರತಿರೋಧ ವ್ಯಕ್ತಪಡಿಸಬೇಕು. ಇಲ್ಲವಾದರೆ, ಜಿಎಸ್‌ಟಿ ಕುಣಿಕೆ ನಮ್ಮನ್ನು ಕಾಡಲಿದೆ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಕೃಷಿ ಕಾನೂನುಗಳನ್ನು ತಿದ್ದುಪಡಿ ಮಾಡಲು ಸಿದ್ಧರಿದ್ದೇವೆ, ಆದರೆ… : ತೋಮರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.