ಮಗನ ಮದುವೆಯಲ್ಲೂ ರಾಜಕೀಯ ಹುಡುಕಿದ ವಿಷಕಾರುವ ಮನಸ್ಥಿತಿಗಳು: ಎಚ್ ಡಿ ಕುಮಾರಸ್ವಾಮಿ
Team Udayavani, Apr 19, 2020, 1:50 PM IST
ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಪಾಡಿಲ್ಲ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ನನ್ನ ಪುತ್ರ ನಿಖಿಲ್ ವಿವಾಹದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡರೂ, ನಿಯಮ ಪಾಲಿಸಿದರೂ ಇದ್ಯಾವುದೂ ಪಾಲನೆ ಆಗಿಲ್ಲ ಎಂಬ ಚರ್ಚೆಗಳು ನಡೆದವು. ರಾಜಕೀಯ ದ್ವೇಷಕ್ಕಾಗಿ ಶುಭ ಸಮಾರಂಭದ ವಿಷಯದಲ್ಲೂ ವಿಷ ಕಾರುವ ಮನಸ್ಥಿತಿಗಳು ರಾರಾಜಿಸಿದವು. ಆದರೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇವೆಲ್ಲವನ್ನೂ ನಿರಾಕರಿಸುವ ಮೂಲಕ ಸತ್ಯದ ಪರ ನಿಂತಿದ್ದಾರೆ ಎಂದಿದ್ದಾರೆ.
ರಾಜ್ಯರಾಜಕಾರಣದ ದೊಡ್ಡ ಕುಟುಂಬ ಸರಳವಾಗಿ ವಿವಾಹ ಸಮಾರಂಭ ಮಾಡಿದೆ ಎಂದೂ ಯಡಿಯೂರಪ್ಪ ಅವರು ಸಹೃದಯದ ಮಾತುಗಳನ್ನಾಡಿರುವುದಕ್ಕೆ ಅವರಿಗೆ ಮನದಾಳದ ಧನ್ಯವಾದಗಳು ಎಂದು ಎಚ್ ಡಿ ಕೆ ಹೇಳಿದ್ದಾರೆ.
ನನ್ನ ಒಡನಾಡಿಗಳು, ನನ್ನ ಹಿತೈಷಿಗಳು, ನನ್ನ ಜನ, ನನ್ನ ಕಾರ್ಯಕರ್ತರು ಇವರೆಲ್ಲರೊಂದಿಗೆ ಶುಭ ಸಮಾರಂಭವೊಂದರಲ್ಲಿ ಒಟ್ಟಿಗೆ ಸೇರಲು ವೈಯಕ್ತಿಕವಾಗಿ ನನಗೆ ಇದ್ದ ಒಂದೇ ಒಂದು ಸುವರ್ಣ ಅವಕಾಶವನ್ನು ಕೈಚೆಲ್ಲಿ ನಿಖಿಲ್ ವಿವಾಹವನ್ನು ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಸರಳವಾಗಿ ಮಾಡಲಾಯಿತು ಎಚ್ ಡಿ ಕೆ ಲಾಕ್ ಡೌನ್ ನಡುವೆ ಮಗನ ವಿವಾಹ ಕಾರ್ಯ ನಡೆಸಿದ ಬಗ್ಗೆ ವಿವರಿಸಿದ್ದಾರೆ.
ನಿಖಿಲ್ ವಿವಾಹದಲ್ಲೂ ರಾಜಕೀಯ ಹುಡುಕಿದ ‘ಸಾಮಾಜಿಕ ಮಾಧ್ಯಮ’ದ ಕೆಲವು ಹುಳುಕು ಮನಸ್ಸಿನ ಮಂದಿ ತಮ್ಮ ಮನದಲ್ಲಿರುವ ವಿಷ ಕಾರಿಕೊಂಡಿದ್ದಾರೆ. ಅವರೆಲ್ಲರೂ ಶರಣರ ಈ ಮಾತನ್ನು ನೆನಪಲ್ಲಿಟ್ಟುಕೊಳ್ಳಬೇಕು.
“ಮನದ ಕೋಪ ತನ್ನ ಅರಿವಿನ ಕೇಡು
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ” ಎಂದು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.