ಸರ್ಕಾರದ ಮೇಲೆ ಪರಿಣಾಮ ಬೀರಲ್ಲ
ಈ ಪರಿಯ ಸೋಲು ನಿರೀಕ್ಷಿಸಿರಲಿಲ್ಲ: ಎಚ್.ವಿಶ್ವನಾಥ್
Team Udayavani, May 25, 2019, 6:00 AM IST
ಬೆಂಗಳೂರು: ‘ಲೋಕಸಭೆ ಚುನಾವಣೆಯಲ್ಲಿ ಈ ಪರಿಯ ಸೋಲು ನಿರೀಕ್ಷಿಸಿರಲಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಯಶಸ್ವಿಯಾಗಬೇಕಿತ್ತು. ವ್ಯತ್ಯಾಸವಾಗಿರುವುದು ನಿಜ, ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ’
ಇದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಮಾತುಗಳಿವು. ಲೋಕಸಭೆ ಫಲಿತಾಂಶ ಕುರಿತು ‘ಉದಯವಾಣಿ’ಗೆ ನೀಡಿದ ಸಂದರ್ಶನದಲ್ಲಿ ಸೋಲಾಯ್ತು ಎಂದು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಪಕ್ಷವನ್ನು ತಳಮಟ್ಟದಿಂದ ಕಟ್ಟುವುದು ನಮ್ಮ ಗುರಿ ಎಂದು ಹೇಳಿದರು.
ಸಂದರ್ಶನ ಸಾರಾಂಶ:
ಜೆಡಿಎಸ್‌ಗೆ ಒಂದು ಸ್ಥಾನ ಎಂಬ ನಿರೀಕ್ಷೆ ಇತ್ತಾ?
ಇಲ್ಲ. ಕನಿಷ್ಠ ಮೂರರಿಂದ ನಾಲ್ಕು ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು. ತುಮಕೂರು, ಮಂಡ್ಯ, ಶಿವಮೊಗ್ಗ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವೂ ಇತ್ತು.
ಜೆಡಿಎಸ್ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತೇನೆ ಅಂತ ಹೇಳಿದಿರಿ?
ಹೌದು. ಅದು ನನ್ನ ನಿರ್ಧಾರ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರಿಗೂ ಆ ಬಗ್ಗೆ ಹೇಳಿದ್ದೇನೆ. ಅವರ ತೀರ್ಮಾನಕ್ಕೆ ನಾನು ಬದ್ಧ
ಲೋಕಸಭೆ ಚುನಾವಣೆ ಫಲಿತಾಂಶ ಜೆಡಿಎಸ್ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲವಾ?
ಏನೂ ಇಲ್ಲ. ಇದು ಲೋಕಸಭೆ ಚುನಾವಣೆ ಮ್ಯಾಂಡೇಟ್. ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ವಿಧಾನ ಸಭೆಯಲ್ಲಿ ಬಿಜೆಪಿಗೆ ಬಹುಮತ ಬಂದಿಲ್ಲ. ಹೀಗಾಗಿ, ನಾವು ಕಾಂಗ್ರೆಸ್ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದೇವೆ.
ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲವಾ?
ಯಾವುದೇ ರೀತಿಯಲ್ಲೂ ಬೀರುವುದಿಲ್ಲ. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಲಿದೆ.
ಸಮ್ಮಿಶ್ರ ಸರ್ಕಾರದ ಸಾಧನೆಗೆ ಜನ ನೀಡಿದ ತೀರ್ಪು ಎಂದು ಪ್ರತಿಪಕ್ಷಗಳು ಹೇಳುತ್ತಿವೆಯಲ್ಲಾ?
ರಾಷ್ಟ್ರ ರಾಜಕಾರಣ ಬೇರೆ, ರಾಜ್ಯ ರಾಜಕಾರಣ ಬೇರೆ. ಮತದಾರರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತ ನೀಡುವಾಗ ಯೋಚನೆ ಮಾಡುವುದು ಬೇರೆ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಮತ ನೀಡುವಾಗ ಯೋಚಿಸುವುದು ಬೇರೆ. ಅದೇ ರೀತಿ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಗೂ ಬೇರೆ ಬೇರೆ ದೃಷ್ಟಿಕೋನದಲ್ಲಿ ಮತ ನೀಡುತ್ತಾರೆ. ಹೀಗಾಗಿ, ಇದು ಸಮ್ಮಿಶ್ರ ಸರ್ಕಾರದ ವಿರುದ್ಧದ ಜನಾಭಿಪ್ರಾಯ ಎಂದು ಹೇಳುವುದರಲ್ಲಿ ಯಾವ ಅರ್ಥವೂ ಇಲ್ಲ.
ವಿಧಾನಸಭೆ ವಿಸರ್ಜನೆ ಮಾತುಗಳು ಕೇಳಿ ಬರುತ್ತಿವೆಯಲ್ಲಾ?
ಆ ರೀತಿಯ ಯೋಚನೆ ಯಾರಲ್ಲೂ ಇಲ್ಲ. ಅದರ ಅಗತ್ಯವೂ ಇಲ್ಲ, ಅದು ಅಂದುಕೊಂಡಷ್ಟು ಸುಲಭವೂ ಅಲ್ಲ, ಜೆಡಿಎಸ್ ಏಕಾಂಗಿಯಾಗಿ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ.
ಕಾಂಗ್ರೆಸ್-ಜೆಡಿಎಸ್ ಯಶಸ್ವಿಯಾಗಲಿಲ್ಲವಾ?
ಕೆಲವೊಂದು ವ್ಯತ್ಯಾಸಗಳಿಂದ ಆಗಲಿಲ್ಲ. ನಮ್ಮ ಲೆಕ್ಕಾಚಾರದ ಪ್ರಕಾರ ಕನಿಷ! 16 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೆವು. ಆದರೆ, ಒಂದೊಂದು ಕ್ಷೇತ್ರದಲ್ಲೂ ಒಂದೊಂದು ರೀತಿಯ ಮಾಹಿತಿಗಳು ಇವೆ. ಆಗಿ ಹೋಗಿದ್ದು ಚಿಂತಿಸಿ ಫಲವಿಲ್ಲ.
ಜೆಡಿಎಸ್‌ನ ಮುಂದಿನ ಹಾದಿ?
ರಾಜ್ಯ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡುವುದು. ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಇದೇ ಕೊನೆಯ ಚುನಾವಣೆಯೂ ಆಲ್ಲ. ನಾವೆಲ್ಲರೂ ಗೆಲುವು-ಸೋಲು ಎಲ್ಲವನ್ನೂ ನೋಡಿದ್ದೇವೆ. ಸಮಾನವಾಗಿಯೇ ಸ್ವೀಕರಿಸಿದ್ದೇವೆ. ಆದರೂ ಮಾಜಿ ಪ್ರಧಾನಿ ದೇವೇಗೌಡರ ಸೋಲು ನನಗೆ ಅತೀವ ನೋವು ತಂದಿದೆ.
ಫಲಿತಾಂಶ ಕುಟುಂಬ ರಾಜಕಾರಣದ ವಿರುದ್ಧದ ಆಕ್ರೋಶವಾ? ಬಿಜೆಪಿಯಲ್ಲಿ ಗೆದ್ದಿರುವವರು ಕುಟುಂಬ ರಾಜಕಾರಣ ಮಾಡಿಲ್ಲವಾ. ಯಡಿಯೂರಪ್ಪ ಪುತ್ರ, ಶಶಿಕಲಾ ಜೊಲ್ಲೆ ಅವರ ಪತಿ, ಸಿ.ಎಂ.ಉದಾಸಿ ಪುತ್ರ ಸ್ಪರ್ಧಿಸಿ ಗೆದ್ದಿಲ್ಲವಾ? ದೇವೇ ಗೌಡರ ಕುಟುಂಬದ ಮೇಲೆ ಟಾರ್ಗೆಟ್ ಮಾಡಿ ಆರೋಪ ಮಾಡುವುದು ಯಾಕೆ ಎಂಬುದೇ ಅರ್ಥ ಆಗು ವುದಿಲ್ಲ.
– ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.