ಸಾಮೂಹಿಕ ಕೇಶ ಮುಂಡನ ದೊಡ್ಡ ಮೂರ್ಖತನ: ಮಾತೆ ಮಹಾದೇವಿ
Team Udayavani, Jan 28, 2019, 1:31 AM IST
ವಾಡಿ (ಕಲಬುರಗಿ): ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಪುಣ್ಯಾರಾಧನೆ ಜ.31ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ಶ್ರೀಮಠದ ಎಂಟು ಸಾವಿರ ವಿದ್ಯಾರ್ಥಿಗಳಿಗೆ ಸವಿತಾ ಸಮಾಜ ವತಿಯಿಂದ ಜ.29ರಂದು ಉಚಿತ ಕೇಶ ಮುಂಡನ ಸೇವೆ ನೀಡುತ್ತಿರುವುದಾಗಿ ಕೊಂಚೂರು ಸವಿತಾ ಮಹರ್ಷಿ ಪೀಠದ ಧರ್ಮಾಧಿಕಾರಿ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಪುಣ್ಯಾರಾಧನೆ ಸಮಯದಲ್ಲಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಲು ಶ್ರೀಮಠದ ಈಗಿನ ಶ್ರೀಸಿದ್ಧಲಿಂಗ ಸ್ವಾಮೀಜಿ ಚಿಂತನೆ ನಡೆಸುತ್ತಿದ್ದಾರೆ ಎಂಬುದನ್ನು ಅರಿತು ಸವಿತಾ ಸಮಾಜದಿಂದ ಶ್ರೀಗಳಿಗೆ ಪತ್ರ ಬರೆಯಲಾಗಿತ್ತು. ಶ್ರೀಗಳು ಅವಕಾಶ ನೀಡಿದರೆ ಮಠದಲ್ಲಿರುವ 8000 ವಿದ್ಯಾರ್ಥಿಗಳಿಗೆ ಸವಿತಾ ಸಮಾಜ ವತಿಯಿಂದ ಉಚಿತ ಕೇಶ ಮುಂಡನ ಮಾಡುವುದಾಗಿ ಮನವಿ ಮಾಡಿದ್ದೆವು. ಇದಕ್ಕೆ ಮರುಪತ್ರ ಬರೆದಿರುವ ಶ್ರೀಗಳು ಕೇಶ ಮುಂಡನೆ ಸೇವೆಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. 2,000 ಕ್ಷೌರಿಕರು ನಮ್ಮ ಉಪಸ್ಥಿತಿಯಲ್ಲೇ ಮಠದ ಆವರಣದಲ್ಲಿ ಸಾಮೂಹಿಕ ಕೇಶ ಮುಂಡನ ಮಾಡುವ ಮೂಲಕ ಅಳಿಲು ಸೇವೆ ಸಲ್ಲಿಸಲಿದ್ದಾರೆಂದು ವಿವರಿಸಿದರು.
ಮೂರ್ಖತನದ್ದು
ಕೂಡಲಸಂಗಮ: ತುಮಕೂರು ಸಿದ್ಧಗಂಗಾ ಮಠದಲ್ಲಿ ಅಭ್ಯಾಸ ಮಾಡುತ್ತಿರುವ 8 ಸಾವಿರ ವಿದ್ಯಾರ್ಥಿಗಳಿಗೆ ಸಾಮೂಹಿಕ ಕೇಶ ಮುಂಡನ ಮಾಡುತ್ತಿರುವುದು ದೊಡ್ಡ ಮೂರ್ಖತನ ಎಂದು ಕೂಡಲಸಂಗಮ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ. ಯಾರಾದರೂ ಲಿಂಗೈಕ್ಯರಾದರೆ ಲಿಂಗಾಯತ ಧರ್ಮ ಪ್ರಕಾರ ಅವರ ಹೆಸರಿನಲ್ಲಿ ತಲೆ ಬೋಳಿಸಿಕೊಳ್ಳುವುದು ಇಲ್ಲವೇ ಇಲ್ಲ. ಆದ್ದರಿಂದ ಕಿರಿಯ ಶ್ರೀಗಳು ಇಂತಹ ಮೌಢ್ಯಾಚರಣೆ ಮಾಡಬಾರದು. ಬಸವ ತತ್ವ ಎಂದು ಹೇಳುತ್ತ ಅದರ ವಿರುದ್ಧ ಕೆಲಸ ಮಾಡುತ್ತ ಹೋದರೆ ಹಿರಿಯರಿಗೆ ಅಪಚಾರ ಮಾಡಿದಂತಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.