ಬಿಜೆಪಿಗೆ ಮರಳಿದ ಹಾಲಾಡಿ
Team Udayavani, Feb 3, 2018, 9:48 AM IST
ಬೆಂಗಳೂರು: ಇತ್ತೀಚೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಶುಕ್ರವಾರ ಬಿಜೆಪಿ
ಸೇರಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪರಿವರ್ತನಾ ರ್ಯಾಲಿ ಸಮಾರೋಪದ ಸಿದ್ಧತಾ ಸಭೆ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್ ಅವರು ಬಿಜೆಪಿಯ ಧ್ವಜ ಹಸ್ತಾಂತರಿಸುವ ಮೂಲಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ನಂತರ ಮಾತನಾಡಿದ ಯಡಿಯೂರಪ್ಪ, ಕುಂದಾಪುರ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿರುವ ಹಾಲಾಡಿಯವರು ನಮ್ಮ
ನಾಯಕ. ಕಾರಣಾಂತರಗಳಿಂದ ಕೆಲ ದಿನಗಳ ಕಾಲ ಪಕ್ಷದಿಂದ ದೂರವಿದ್ದರೂ ಕ್ಷೇತ್ರದಲ್ಲಿ ಬಿಜೆಪಿ ಬೆಳವಣಿಗೆಗೆ ಶ್ರಮಿಸುತ್ತಿದ್ದರು.
ಪಕ್ಷೇತರ ಶಾಸಕರಾಗಿದ್ದರೂ ಬಿಜೆಪಿಯ ಜತೆ ಇದ್ದ ಅವರು ಪ್ರಧಾನಿ ಆಗಮನಕ್ಕೆ ಮುನ್ನ ಪಕ್ಷವನ್ನು ಅಧಿಕೃತವಾಗಿ ಸೇರಿದ್ದಾರೆ. ಅಪಾರ ಜನಶಕ್ತಿ ಹೊಂದಿರುವ ಹಾಲಾಡಿ ಸೇರ್ಪಡೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಕ್ಷಕ್ಕೆ ಆನೆ ಬಲ
ಬಂದಂತಾಗಿದೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶಾಸಕರರಾದ ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ
ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಗಾಯ ವಾಸಿಯಾಗಿದೆ, ಮತ್ತೆ ಎಡವಿ ಬೀಳಲ್ಲ
ಬೆಂಗಳೂರು: “ಯಾರೋ ಕಾಲಿಗೆ ಅಡ್ಡಲಾಗಿ ಏನನ್ನೋ ಇಟ್ಟಿದ್ದರು. ಎಡವಿ ಬಿದ್ದು ಗಾಯ ಮಾಡಿಕೊಂಡಿದ್ದೆ. ಈಗ ಗಾಯ
ವಾಸಿಯಾಗಿದೆ. ಮತ್ತೆ ಗಾಯ ಮಾಡಿ ಕೊಳ್ಳುವುದು ಸರಿಯಲ್ಲ ಎಂದು ಈ ನಿರ್ಧಾರ ಕೈಗೊಂಡೆ’. ಅರಮನೆ ಮೈದಾನದಲ್ಲಿ ಶುಕ್ರವಾರ ಮತ್ತೆ ಬಿಜೆಪಿ ಸೇರಿದ ಕುಂದಾಪುರ ಕ್ಷೇತ್ರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಾವು ಬಿಜೆಪಿಗೆ ಮರಳಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು ಹೀಗೆ.
ಬಿಜೆಪಿ ತೊರೆದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಯಾವತ್ತೂ ಯಾರ ಬಳಿಯೂ ಏನನ್ನೂ ಕೇಳಿದವನಲ್ಲ. ಮಂತ್ರಿ
ಸ್ಥಾನ ಬಯಸಿದವನೂ ಅಲ್ಲ. ಆದರೆ, ಬೆಳಗ್ಗೆ 11 ಗಂಟೆಗೆ ಅವರೇ ಸಚಿವ ಸ್ಥಾನಕ್ಕೆ ಆಮಂತ್ರಣ ಕೊಟ್ಟು, ಹೂವಿನ ಬೊಕ್ಕೆಗಳನ್ನು ನೀಡಿ ಅಭಿನಂದನೆ ಹೇಳಿದ ಬಳಿಕ ಕೊನೇ ಕ್ಷಣದಲ್ಲಿ ಸಿಗದೇ ಇದ್ದರೆ ನೋವು, ಬೇಸರವಾಗುವುದು ಸಹಜ. ಮತ್ತೆ ಅದರ ಬಗ್ಗೆ ಯೋಚಿಸುವುದು ಸರಿಯಲ್ಲ ಎಂದು ಹೇಳಿದರು.
ನಾನು ಮೂರು ಬಾರಿ ಬಿಜೆಪಿಯಿಂದ ಶಾಸಕನಾಗಿದ್ದೆ. ಏನೋ ಒಂದು ಬಾರಿ ರಾಜೀನಾಮೆ ಕೊಟ್ಟೆ. ಜನರ ಅಭಿಪ್ರಾಯದಂತೆ
ಪಕ್ಷೇತರನಾಗಿ ಸ್ಪರ್ಧಿಸಿದ್ದೆ. ಕ್ಷೇತ್ರದ ಎಲ್ಲರೂ ಸೇರಿ 40 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿದರು. ಪಕ್ಷೇತರನಾಗಿ ಗೆದ್ದ ಬಳಿಕವೂ
ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಯನ್ನು
ಬೆಂಬಲಿಸಿಕೊಂಡು ಬಂದಿದ್ದೆ ಎಂದರು.
ನಾನು ಬಿಜೆಪಿ ತೊರೆದ ಬಳಿಕ ಎಲ್ಲಾ ಪಕ್ಷದವರೂ ಬನ್ನಿ ಎಂದು ಕರೆದಿದ್ದರು. ಆದರೆ, ನನಗೆ ಪಕ್ಷದ ಋಣ ಇದೆ. ಮೇಲಾಗಿ ಪ್ರಧಾನಿ
ಮೋದಿ ಅವರು ದೂರದೃಷ್ಟಿವುಳ್ಳ ನಾಯಕ. ಬಿಜೆಪಿ ತೊರೆದ ಮೇಲೂ ಪಕ್ಷದ ಜತೆ ಸಂಬಂಧವೂ ಚೆನ್ನಾಗಿತ್ತು. ಹೀಗಾಗಿ ಮತ್ತೆ
ಬಿಜೆಪಿ ಸೇರಿದ್ದೇನೆ. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.