![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 11, 2021, 2:30 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮೊಮ್ಮಗ, ದಿ.ಸಿದ್ದಾರ್ಥ್ ಪುತ್ರ ಅಮರ್ಥ್ಯ ಹೆಗ್ಡೆ ವಿವಾಹ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ. ಇಂದು ಸದಾಶಿವ ನಗರದ ಡಿಕೆಶಿ ನಿವಾಸದಲ್ಲಿ ಹಳದಿ ಕಾರ್ಯಕ್ರಮ ನಡೆಯಿತು.
ಅಮರ್ಥ್ಯ ಹೆಗ್ಡೆ ಮತ್ತು ಐಶ್ವರ್ಯಾ ವಿವಾಹ ಕಾರ್ಯಕ್ರಮವು ಪ್ರೇಮಿಗಳ ದಿನ ಫೆ.14ರಂದು ನಿಗದಿಯಾಗಿದೆ. ಇದಕ್ಕಾಗಿ ಸಕಲ ಸಿದ್ದತೆಗಳೂ ನಡೆಯುತ್ತಿದೆ. ಇಂದು ಸದಾಶಿವ ನಗರದ ನಿವಾಸದಲ್ಲಿ ಡಿ ಕೆ ಸುರೇಶ್ ಸೇರಿದಂತೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಐಶ್ವರ್ಯಾರ ಹಳದಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ:ಅಶೋಕವನ ಎಸ್ಟೇಟಿಗೆ ಸ್ವಾಗತ ಕೋರಿದ ‘ಹೀರೋ’…ಶೆಟ್ಟರ ಸಿನಿಮಾ ರಿಲೀಸ್ ಡೇಟ್ ಪ್ರಕಟ
ಫೆ.12 ರಂದು ಸದಾಶಿವನಗರದ ನಿವಾಸದಲ್ಲಿ ಮೆಹಂದಿ ಕಾರ್ಯಕ್ರಮ ನಡೆಯಲಿದೆ. ಫೆ.13 ರಂದು ನಿವಾಸದಲ್ಲೇ ಜೋಡಿಗೆ ಎಣ್ಣೆ ಶಾಸ್ತ್ರ ನಡೆಯಲಿದ್ದು, ಫೆ.14 ರಂದು ಹೊಟೇಲ್ ಶೆರಟಾನ್ ನಲ್ಲಿ ವಿವಾಹ ಕಾರ್ಯಕ್ರಮ ನೆರವೇರಲಿದೆ.
ಫೆ.17 ರಂದು ಪ್ರೆಸ್ಟೀಜ್ ಗಾಲ್ಫ್ ಶೈರ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಫೆ.20 ರಂದು ಅರಮನೆ ಮೈದಾನದಲ್ಲಿ ಬೀಗರ ಔತಣಕ್ಕೆ ಸಿದ್ದತೆ ನಡೆಸಲಾಗಿದೆ.
ಇದನ್ನೂ ಓದಿ: ಏಳು ಸ್ಕ್ರೀನ್ ಗಳ ವಿಶಿಷ್ಟ ಲ್ಯಾಪ್ ಟಾಪ್ “Aurora 7” …!
ಅಮರ್ಥ್ಯ ಹೆಗ್ಡೆ ಮತ್ತು ಐಶ್ವರ್ಯಾ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮವು ಕಳೆದ ವರ್ಷದ ನವೆಂಬರ್ 19ರಂದು ಬೆಂಗಳೂರಿನ ತಾಜ್ ಹೋಟೆಲ್ ನಲ್ಲಿ ನೆರವೇರಿತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.