High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Team Udayavani, Sep 19, 2024, 11:53 PM IST
ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ “ಅರ್ಧ ಪಾಕಿಸ್ಥಾನವಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಡಿದ ಮಾತಿಗೆ ತೀವ್ರ ಕಿಡಿಕಾರಿದ ಹೈಕೋರ್ಟ್, ಒಬ್ಬರ ಪತ್ನಿ ಮುಸ್ಲಿಂ ಅಂದ ಮಾತ್ರಕ್ಕೆ ಅದನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಈ ರೀತಿ ಮಾತನಾಡುವುದು ಎಷ್ಟು ಸರಿ ಎಂದು ತೀಕ್ಷ್ಣವಾಗಿ ಪ್ರಶ್ನಿಸಿತು.
ದಿನೇಶ್ ಗುಂಡೂರಾವ್ ಪತ್ನಿ ತಬಸ್ಸುಮ್ ರಾವ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ವಿಚಾರಣೆ ಆರಂಭವಾಗುತ್ತಿದ್ದಂತೆ, ನ್ಯಾಯಪೀಠ ಯತ್ನಾಳ್ ಪರ ವಕೀಲರನ್ನು ಉದ್ದೇಶಿಸಿ ನಿಮಗೆ (ಯತ್ನಾಳ್) ಇದೆಲ್ಲ ಯಾಕೆ ಬೇಕು? ಇಂತಹದ್ದೆಲ್ಲ ನಿವೇಕೆ ಮಾತನಾಡಬೇಕು? ನಿಮ್ಮ ತಲೆಗೆ ಬಂದಿದ್ದೆಲ್ಲವನ್ನೂ ಮಾತನಾಡುತ್ತೀರಲ್ಲ. ಅರ್ಧ ಪಾಕಿಸ್ತಾನ ಎಂದರೆ ಏನರ್ಥ? ಅದೆಲ್ಲವನ್ನೂ ನೀವೇಕೆ ಹೇಳಿದ್ದೀರಿ? ನಿರ್ದಿಷ್ಟ ಸಮುದಾಯವನ್ನು ನೀವು ಹಾಗೆ ವ್ಯಾಖ್ಯಾನಿಸಲಾಗದು. ಆ ಸಮುದಾಯ ಈ ದೇಶದಲ್ಲಿದೆ. ಪ್ರತೀ ಬಾರಿಯೂ ಪ್ರತೀ ಪ್ರಕರಣದಲ್ಲೂ ನಾನು ಹೇಳುತ್ತಿದ್ದೇನೆ. ಕೆಸರೆರಚುವುದು ನಿಲ್ಲಬೇಕು. ಇದರಿಂದ ಏನು ಸಿಗುತ್ತದೆ? ಎಂದು ತರಾಟೆಗೆ ತೆಗೆದುಕೊಂಡಿತು. ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.