ಹಳಿಯಾಳ ಪಿಎಸ್ಐ ಪತ್ನಿ ಆತ್ಮಹತ್ಯೆಗೆ ಶರಣು
Team Udayavani, Dec 20, 2017, 11:54 AM IST
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಿಎಸ್ಐ ಮಲ್ಲಪ್ಪ ಎಸ್ ಹೂಗಾರ ಅವರ ಪತ್ನಿ ವಿಜಯಲಕ್ಷ್ಮೀ ಹೂಗಾರ (28) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಪಿಎಸ್ಐ ಮಲ್ಲಪ್ಪ ಅವರು ರಾತ್ರಿ ಪಾಳಿಯ ತಮ್ಮ ಕರ್ತವ್ಯ ಮುಗಿಸಿ ಮನೆಗೆ ಮರಳಿದಾಗ ಪತ್ನಿ ಆತ್ಮಹತ್ಯೆಗೆ ಶರಣಾಗಿರುವುದು ಕಂಡು ದಿಗ್ಭ್ರಮೆಗೊಂಡರು. ಸುಮಾರು 7.30 ರ ಹೊತ್ತಿಗೆ ವಿಜಯಲಕ್ಷ್ಮೀ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪಿಎಸ್ಐ ಮಲ್ಲಪ್ಪ ಹೂಗಾರ ಮತ್ತು ವಿಜಯಲಕ್ಷ್ಮೀ ಅವರಿಗೆ ಆರು ವರ್ಷಗಳ ಹಿಂದೆ ವಿವಾಹವಾಗಿತ್ತು. ಈ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಪತ್ನಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ಮಲ್ಲಪ್ಪ ಹೌಹಾರಿ ಬೊಬ್ಬಿಟರು. ಇದನ್ನು ಕೇಳಿ ಕ್ವಾರ್ಟರ್ಸ್ನಲ್ಲಿದ್ದ ಸಿಪಿಐ ಧಾವಿಸಿ ಬಂದು ವಿಜಯಲಕ್ಷ್ಮೀ ಅವರನ್ನು ನೇಣಿನಿಂದ ಬಿಡಿಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.