ನ.13ಕ್ಕೆ ಹಂಪಿ ಉತ್ಸವ: ಸಚಿವ ಆನಂದ್ ಸಿಂಗ್
ಕೋವಿಡ್ ಹಿನ್ನೆಲೆ ಒಂದು ದಿನ ಮಾತ್ರ ಉತ್ಸವ ಆಚರಣೆ
Team Udayavani, Nov 5, 2020, 9:02 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಈ ಬಾರಿ ಹಂಪಿ ಉತ್ಸವವನ್ನು ನ.13ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ತಿಳಿಸಿದ್ದಾರೆ.
ಪ್ರತಿವರ್ಷ ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಅತ್ಯಂತ ವಿಜೃಂಭಣೆಯಿಂದ ಹಂಪಿ ಉತ್ಸವ ನಡೆಸಲಾಗುತ್ತಿತ್ತು. ಆದರೇ ಈ ಬಾರಿ ಕೋವಿಡ್-19 ನಿಂದಾಗಿ ನ.13ರಂದು ಒಂದು ದಿನ ಸರಳ, ಸಾಂಕೇತಿಕವಾಗಿ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಂಪಿಯ ಉದ್ದಾನ ವೀರಭದ್ರೇಶ್ವರ ದೇವಸ್ಥಾನದಿಂದ ವಿರೂಪಾಕ್ಷೇಶ್ವರ ದೇವಸ್ಥಾನದವರೆಗೆ ವಿವಿಧ ರೀತಿಯ ಜನಪದ ಕಲಾತಂಡಗಳೊಂದಿಗೆ ಶೋಭಾಯಾತ್ರೆ ನಡೆಯಲಿದೆ. ಪ್ರತಿ ತಾಲೂಕಿನಿಂದ ಎರಡೆರಡು ಕಲಾತಂಡಗಳು ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ವಿವರಿಸಿದ್ದಾರೆ.
ಶೋಭಾಯಾತ್ರೆ ನಂತರ ವಿರೂಪಾಕ್ಷೇಶ್ವರ ದೇವಸ್ಥಾನದ ಪಕ್ಕದಲ್ಲಿ ಹರಿಯುವ ತುಂಗಾಭದ್ರಾ ನದಿ ದಡದಲ್ಲಿ ತುಂಗಾ ಆರತಿ ನಡೆಯಲಿದೆ.ಯಾವುದೇ ರೀತಿಯ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಸಚಿವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Gudibande: ಬುದ್ದಿವಾದ ಹೇಳಿದ್ದೆ ತಪ್ಪಾಯ್ತು… ವಿದ್ಯುತ್ ಹರಿಸಿ ವ್ಯಕ್ತಿಯ ಕೊಲೆ ಯತ್ನ
ಹೃದಯಾಘಾತದಿಂದ ಜಾಗೃತ ಮತದಾರರ ವೇದಿಕೆಯ ರಾಜ್ಯಾಧ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ ನಿಧನ
Karnataka BJP; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೀಘ್ರ ಚುನಾವಣೆ: ಕೇಂದ್ರ ಸಚಿವ ಚೌಹಾಣ್
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.