Hampi G20 summit ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಾಚ್ಯವಸ್ತುಗಳ ಮಹತ್ವ ಸಾರಲು ವೇದಿಕೆ
ಪ್ರಾಚ್ಯವಸ್ತುಗಳ ಕಳ್ಳ ಸಾಗಾಣಿಕೆ ತಡೆಗಟ್ಟುವ ಕಾರ್ಯಕ್ಕೆ ಸಹಕಾರಿ
Team Udayavani, Jul 9, 2023, 10:18 PM IST
ಹೊಸಪೇಟೆ: ಜಿ-20 ಶೃಂಗಸಭೆಯಿಂದ ಪ್ರಾಚ್ಯವಸ್ತುಗಳ ಕಳ್ಳ ಸಾಗಾಣಿಕೆ ತಡೆಗಟ್ಟುವ ಕಾರ್ಯಕ್ಕೆ ಸಹಕಾರಿಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಾಚ್ಯವಸ್ತುಗಳ ಮಹತ್ವವನ್ನು ತಿಳಿಯಪಡಿಸಲು ಜಿ-20 ವೇದಿಕೆಯಾಗಿ ಪರಿಣಮಿಸಿದೆ. ಹಂಪಿಯ ಸ್ಮಾರಕಗಳ ಗುಚ್ಛವನ್ನು ಇಡೀ ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಕಾರ್ಯವೂ ನಡೆಯುತ್ತಿದೆ. ಹಂಪಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಜುಲೈ 10ರಂದು ಎದುರು ಬಸವಣ್ಣ ಮಂಟಪದ ಬಳಿ ಲಂಬಾಣಿ ಕಸೂತಿ ಕಲೆಯನ್ನು ಗಿನ್ನಿಸ್ ದಾಖಲೆಗೆ ಸೇರಿಸುವ ಕಾರ್ಯ ನಡೆಯಲಿದೆ. ಇದರಿಂದ ಈ ಕಲೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ತಿಳಿಸಿದರು.
ಜಿಂದಾಲ್‌ನ ವಿದ್ಯಾನಗರದ ಜೆ-ಮ್ಯಾಕ್ಸ್ ಸಭಾಂಗಣದಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಚರ್ಚೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸೂತಿ ಕಲೆಗೆ ಜಾಗತಿಕ ಮಾರುಕಟ್ಟೆ ಒದಗಿಸಲು ಕರಕುಶಲ ವಸ್ತುಪ್ರದರ್ಶನ ನಡೆಸಲಾಗುವುದು ಎಂದರು.
ದೇಶಿ ಸಾಂಸ್ಕೃತಿಕ ಕಲೆಗಳ ಜಾಗತಿಕ ಅನಾವರಣಕ್ಕೆ ಜಿ-೨೦ ವೇದಿಕೆಯಾಗಲಿದೆ. ಈ ಹಿಂದೆ ಒರಿಸ್ಸಾದ ಖಜುರಾಹೋ ಹಾಗೂ ಭುವನೇಶ್ವರದಲ್ಲಿ ಜರುಗಿದ ಜಿ-20 1 ಮತ್ತು 1ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗಳು ಯಶಸ್ವಿಯಾಗಿವೆ. ಇದರಲ್ಲಿ ಜಿ–20 ಸದಸ್ಯ ರಾಷ್ಟ್ರಗಳ 50 ಅತ್ಯುನ್ನತ ಪ್ರತಿನಿಧಿಗಳು ಭಾಗವಹಿಸಿದ್ದರು. ಇದರ ಜೊತೆಗೆ ನಾಲ್ಕು ವೆಬಿನಾರ್‌ಗಳನ್ನು ಸಹ ಆಯೋಜಿಸಲಾಗಿತ್ತು. ಈ ಸಭೆಗಳು ಕೂಡ ಯಶಸ್ವಿಯಾಗಿವೆ ಎಂದರು.
ಸದಸ್ಯ ರಾಷ್ಟ್ರಗಳ ಸಾಂಸ್ಕೃತಿಕ ಅಸ್ಮಿತೆ ರಕ್ಷಿಸಿ, ಪುನರ್‌ಸ್ಥಾಪಿಸುವುದಾಗಿದೆ. ೧೯೭೦ರ ಯುನೆಸ್ಕೊ ಒಡಂಬಡಿಕೆಯಂತೆ ಎಲ್ಲಾ ರಾಷ್ಟ್ರಗಳು ಪರಸ್ಪರ ಸಹಕಾರದಿಂದ, ವಸಾಹತು ಸಮಯ ಅಥವಾ ಇನ್ನಿತರ ಮಾರ್ಗಗಳಿಂದ ಪಡೆಯಲಾದ ಸಾಂಸ್ಕೃತಿಕ ಮಹತ್ವವುಳ್ಳ ಕಲಾಕೃತಿಗಳನ್ನು ಹಿಂದಿರುಗಿಸಬೇಕು. ಭಾರತವು ಸಹ ಇದಕ್ಕೆ ಬದ್ದವಾಗಿದ್ದು, ಈಗಾಗಲೇ ಭಾರತವು ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಅಮೆರಿಕ 150 ಕ್ಕೂ ಹೆಚ್ಚು ಕಲಾಕೃತಿಗಳನ್ನು ಭಾರತಕ್ಕೆ ಹಿಂದಿರುಗಿಸಲಿದೆ ಎಂದರು.
ಭಾರತದಲ್ಲಿ ಆರ್ಯುವೇದ ಪದ್ಧತಿ ಬಳಕೆಯಲ್ಲಿ ಇದೆ. ಹಲವಾರು ಸಂದರ್ಭದಲ್ಲಿ ಆರ್ಯವೇದಲ್ಲಿ ಬಳಕೆಯಲ್ಲಿದ್ದ ಔಷಧೋಪಚಾರಗಳ ಸ್ವಾಮ್ಯ ಹಕ್ಕು(ಪೇಟೆಂಟ್) ಬೇರೆಯವರ ಪಾಲಾಗಿದೆ. ಈ ರೀತಿಯ ಘಟನೆಗಳನ್ನು ತಪ್ಪಿಸುವುದು ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಕೆಲಸವಾಗಿದೆ. ಸಾಂಸ್ಕೃತಿಕ ಅಂಶಗಳು, ಕಸೂತಿ ಕಲೆ, ಕರಕುಶಲ ಹಾಗೂ ಉದ್ದಿಮೆಗಳನ್ನು ಪ್ರಚುರ ಪಡಿಸುವುದಾಗಿದೆ. ಇದರ ಅಂಗವಾಗಿ ಹಂಪಿಯಲ್ಲಿ ಜವಳಿ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಸಾಂಸ್ಕೃತಿಕ ಅಂಶಗಳಿಗೆ ಡಿಜಿಟಲ್ ರೂಪ ನೀಡಿ, ಆಡಿಯೋ, ವಿಡಿಯೋ ಹಾಗೂ ಇನ್ನಿತರ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದು. ಸಂಸ್ಕೃತಿ ಎಲ್ಲರನ್ನೂ ಒಗ್ಗೂಡಿಸಲು ಆಧಾರವಾಗಿದೆ ಎಂದು ಜಿ-20 ಸಾಂಸ್ಕೃತಿಕ ಕಾರ್ಯಕಾರಣಿ ಗುಂಪು ವಿಶ್ವಾಸ ಇರಿಸಿದೆ ಎಂದರು.
ವಾರಣಾಸಿಯಲ್ಲಿ ಆಗಸ್ಟ್ 26 ರಂದು ಸಾಂಸ್ಕೃತಿಕ ಕಾರ್ಯಕಾರಣಿ ಗುಂಪಿನ ಅಂತಿಮ ಸಭೆ ನಡೆಯಲಿದೆ. ವಾರಾಣಸಿ ಸಭೆಯಲ್ಲಿ ಡಿಜಟಲೀಕರಣಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದರು.
ಗಿನ್ನಿಸ್ ದಾಖಲೆಗೆ ಲಂಬಾಣಿ ಕುಸೂತಿ ಕಲೆ
ಕೇಂದ್ರ ಸಂಸ್ಕೃತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಿಲ್ಲಿ ಪಾಂಡೆ ಮಾತನಾಡಿ, ಹಂಪಿಯ ಎದುರು ಬಸವಣ್ಣ ಮಂಟಪದ ಬಳಿ ಕಸೂತಿ ಕಲೆ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಜು.೧೦ರಂದು ವಸ್ತುಪ್ರದರ್ಶನ ಉದ್ಘಾಟನೆ ನಡೆಯಲಿದೆ. ಸಂಡೂರಿನ ಕಲಾಕೇಂದ್ರದ ಲಂಬಾಣಿ ಮಹಿಳೆಯರು ಸೇರಿದಂತೆ ರಾಜ್ಯದ ವಿವಿಧ ಭಾಗದ ೪೫೦ಕ್ಕೂ ಹೆಚ್ಚು ಲಂಬಾಣಿ ಮಹಿಳೆಯರು 1300 ವೈವಿಧ್ಯಮಯ ಕಸೂತಿಗಳನ್ನು ಸಿದ್ಧಪಡಿಸಿದ್ದು, ಇದು ಗಿನ್ನಿಸ್ ದಾಖಲೆಗೆ ಸೇರಲಿದೆ. ಇದರ ಪ್ರದರ್ಶನ ನಡೆಯಲಿದೆ ಎಂದರು.
ಈ ಪ್ರದರ್ಶನದಲ್ಲಿ ಕರಕಶುಲ ಹಾಗೂ ಜವಳಿ ಕಸೂತಿ ಕಲೆಗಾರರು ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಜಾಗತಿಕವಾಗಿ ಸಾಂಪ್ರದಾಯಿಕ ಲಂಬಾಣಿ ಕಸೂತಿಗೆ ಮನ್ನಣೆ ದೊರಕಿಸಿ, ಅಂತಾರಾಷ್ಟ್ರೀಯ ಮಾರುಕಟ್ಟೆ ಸೌಲಭ್ಯ ದೊರಕಿಸುವ ಜೊತೆಗೆ ಸಾಂಪ್ರದಾಯಿಕ ಬದುಕಿನ ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಲಿದೆ ಎಂದರು.
ಗೋಷ್ಠಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಮಹಾ ನಿರ್ದೇಶಕ ಕೆ.ಕೆ.ಬಸಾ ಹಾಗೂ ಕೇಂದ್ರ ವಾರ್ತಾ ವಿಭಾಗದ(ಪಿಐಬಿ) ಸಹಾಯಕ ಮಹಾ ನಿರ್ದೇಶಕಿ ನಾನು ಭಾಸಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.